Skip to content
The Believer's Library

Indian Revised Version (IRV) Kannada - 2019

Mark 16 IRVKan

Show IRVKan only
Verse × ×
1 When the Sabbath ended, Mary Magdalene, Mary the mother of James, and Salome bought spices to go anoint him. ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು.
2 Very early on the first day of the week, just after sunrise, they went to the tomb. ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು.
3 They asked each other, "Who will roll the stone away from the tomb's entrance for us?" “ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
4 But looking up, they saw the stone—very large—already rolled away. ಸಮಾಧಿಯ ಕಡೆಗೆ ನೋಡಿದಾಗ ಆ ದೊಡ್ಡ ಕಲ್ಲು ಉರುಳಿಸಲ್ಪಟ್ಟಿರುವುದನ್ನು ಕಂಡರು.
5 They entered the tomb and saw a young man dressed in a white robe, seated on the right. They were alarmed. ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು.
6 "Don't be alarmed," he said. "You're looking for Jesus the Nazarene, who was crucified. He's risen—he isn't here. Look, the place they laid him. ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ,
7 But go, tell his disciples and Peter, 'He goes ahead of you to Galilee. You will see him there, as he told you.'" ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು.
8 Trembling and amazed, the women fled the tomb, telling no one—they were afraid. ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.
9 Rising early the first day of the week, Jesus appeared first to Mary Magdalene, from whom he had driven seven demons. ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು.
10 She went and told those who had been with him, who were mourning and weeping. ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಅವರು ಶೋಕಿಸುತ್ತಾ ಅಳುತ್ತಿದ್ದರು.
11 Hearing Jesus was alive and seen by her, they did not believe it. “ಆತನು ಬದುಕಿದ್ದಾನೆ ನನಗೆ ಕಾಣಿಸಿಕೊಂಡನು” ಎಂದು ಅವಳು ಹೇಳಿದ ಮಾತನ್ನು ಅವರು ನಂಬಲಿಲ್ಲ.
12 Afterward Jesus appeared, in a different form, to two of them walking in the country. ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು.
13 They went back and reported it to the others, but they did not believe them either. ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಶಿಷ್ಯರು ಅವರನ್ನೂ ನಂಬಲಿಲ್ಲ.
14 Later Jesus appeared to the eleven as they reclined at a meal and rebuked their lack of faith and hardness of heart, because they hadn't believed those who saw him risen. ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.
15 He said to them, "Go into all the world and proclaim the good news to all creation. ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.
16 Whoever believes and is baptized will be saved, but whoever does not believe will be condemned. ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.
17 And these signs will follow those who believe: in my name they'll drive out demons, speak in new tongues. “ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು;
18 They will pick up snakes with their hands; if they drink deadly poison, it won't harm them; they will lay hands on the sick, and they will recover." ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು.
19 After speaking to them, the Lord Jesus was taken up into heaven and sat at the right hand of our Father. ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.
20 They went out and preached everywhere, the Lord working with them, confirming his word through accompanying signs. ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]