Skip to content
The Believer's Library

Indian Revised Version (IRV) Kannada - 2019

Mark 2 IRVKan

Show IRVKan only
Verse × ×
1 A few days later, when Jesus came back to Capernaum, word spread that he was home. ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿತ್ತು.
2 So many gathered that there was no room left, not even at the door, and he was speaking the word to them. ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.
3 Then some men came, bringing to him a paralyzed man carried by four of them. ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು.
4 Unable to bring him to Jesus because of the crowd, they removed the roof over him, dug through it, and lowered the mat the paralyzed man lay on. ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.
5 When Jesus saw their faith, he said to the paralyzed man, "Son, your sins are forgiven." ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
6 Now some of the scribes were sitting there, reasoning in their hearts, ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು;
7 "Why does this man speak this way? He is blaspheming! Who can forgive sins but God alone?" “ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?” ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು.
8 Immediately Jesus knew in his spirit they were reasoning this way within themselves, and said to them, "Why are you reasoning these things in your hearts? ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ?
9 Which is easier—telling the paralyzed man, 'Your sins are forgiven,' or, 'Get up, take your mat, and walk'? ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ?
10 But so you'll know the Son of Man has authority on earth to forgive sins"—he told the paralyzed man, ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ
11 "I say to you, get up, take your mat, and go home." “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ” ಅಂದನು.
12 He got up, immediately took his mat, and went out before them all, so that everyone was amazed and praised our Father, saying, "We've never seen anything like this." ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, “ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ” ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು.
13 Jesus went out beside the sea again; the whole crowd came to him, and he taught them. ಯೇಸು ಹೊರಟು ತಿರುಗಿ ಸಮುದ್ರದ ಬಳಿಗೆ ಹೋದನು. ಜನರು ಗುಂಪಾಗಿ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶ ಮಾಡಿದನು.
14 Passing by, he saw Levi son of Alphaeus sitting at the tax booth and said, "Follow me." He got up and followed him. ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
15 While Jesus reclined at the table in Levi's house, many tax collectors and sinners reclined with Jesus and his disciples, since many were following him. ಅನಂತರ ಯೇಸುವು ಆ ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ ಸುಂಕದವರೂ, ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದವರಾಗಿದ್ದರು.
16 Seeing him eat with sinners and tax collectors, the Pharisees' scribes asked his disciples, "Why does he eat with tax collectors and sinners?" ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
17 Hearing this, Jesus said to them, "The healthy don't need a doctor, but the sick do. I didn't come to call the righteous, but sinners." ಯೇಸು ಅದನ್ನು ಕೇಳಿ ಅವರಿಗೆ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.
18 John's disciples and the Pharisees were fasting. They came and asked him, "Why do John's disciples and the Pharisees' disciples fast, but yours don't?" ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸ ಮಾಡುತ್ತಿದ್ದರು. ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲಾ? “ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.
19 Jesus said to them, "Can wedding guests fast while the bridegroom is with them? As long as they have the bridegroom with them, they cannot fast. ಅದಕ್ಕೆ ಯೇಸು ಅವರಿಗೆ, “ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು.
20 But days will come when the bridegroom is taken from them; then, on that day, they will fast. ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸ ಮಾಡುವರು.
21 No one sews unshrunk cloth on an old garment; otherwise the new patch tears away from the old, and the tear worsens. “ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.
22 No one puts new wine into old wineskins; the wine bursts the skins, and both are ruined. New wine goes into new wineskins." ಮತ್ತು ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಮತ್ತು ಬುದ್ದಲಿಗಳು ಎರಡೂ ನಾಶವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು” ಎಂದು ಹೇಳಿದನು.
23 One Sabbath, he walked through the grainfields, and as they went, his disciples began picking heads of grain. ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ, ಆತನ ಶಿಷ್ಯರು ತೆನೆಗಳನ್ನು ಮುರಿದು ತಿಂದರು.
24 The Pharisees said to him, "Look, why are they doing what's not lawful on the Sabbath?" ಫರಿಸಾಯರು ಆತನನ್ನು, “ನೋಡು, ಇವರು ಸಬ್ಬತ್ ದಿನದಲ್ಲಿ ಧರ್ಮಸಮ್ಮತವಲ್ಲದ್ದನ್ನು ಏಕೆ ಮಾಡುತ್ತಾರೆ?” ಎಂದು ಕೇಳಿದರು.
25 And he said to them, "Have you never read what David did when he was in need and hungry, he and those with him, ಆಗ ಯೇಸು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ?
26 how he entered the house of our Father in the days of Abiathar the high priest, ate the bread of the Presence—which only priests may eat—and gave some to those with him?" ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ನುಡಿಯುತ್ತಾ,
27 And he said to them, "The Sabbath was made for people, not man for the Sabbath. “ಸಬ್ಬತ್ ದಿನವು ಮನುಷ್ಯರಿಗೋಸ್ಕರ ಮಾಡಲಾಯಿತೇ ಹೊರತು ಮನುಷ್ಯರನ್ನು ಸಬ್ಬತ್ ದಿನಕ್ಕಾಗಿ ಮಾಡಲಿಲ್ಲ.
28 So the Son of Man is Lord even of the Sabbath." ಹೀಗಿರಲಾಗಿ ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ” ಎಂದು ಯೇಸು ಹೇಳಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]