Skip to content
The Believer's Library

Indian Revised Version (IRV) Kannada - 2019

Mark 3 IRVKan

Show IRVKan only
Verse × ×
1 Once again Jesus entered the synagogue, and a man with a withered hand was there. ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈ ಬತ್ತಿಹೋದ ಮನುಷ್ಯನೊಬ್ಬನಿದ್ದನು.
2 They watched closely to see if he'd heal the man on the Sabbath, to accuse Jesus. ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸುವುದಕ್ಕೆ, ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು.
3 Jesus said to the man with the withered hand, "Stand up and come forward." ಆತನು ಕೈಬತ್ತಿದ್ದವನಿಗೆ, “ಎದ್ದು ನಡುವೆ ನಿಂತುಕೋ” ಎಂದು ಹೇಳಿದನು.
4 Then he asked them, "Is it lawful on the Sabbath to do good or to do harm, to save life or to kill?" But they stayed silent. ಆಗ ಅವರಿಗೆ, “ಸಬ್ಬತ್ ದಿನದಲ್ಲಿ ಧರ್ಮಸಮ್ಮತವಾದದು ಯಾವುದು? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?” ಎಂದು ಹೇಳಲು ಅವರು ಸುಮ್ಮನಿದ್ದರು.
5 He looked around at them in anger, grieved by their hardness of heart, and told the man, "Stretch out your hand." He stretched it out, and his hand was restored. ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.
6 Then the Pharisees went out and immediately began plotting with the Herodians how they might destroy him. ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು.
7 Jesus withdrew with his disciples to the sea; a large crowd from Galilee followed, and from Judea, ಆ ಮೇಲೆ ಯೇಸುವು ತನ್ನ ಶಿಷ್ಯರೊಂದಿಗೆ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು.
8 from Jerusalem, Idumea, beyond the Jordan, and the region around Tyre and Sidon—hearing all he was doing, a great crowd came to him. ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.
9 He told his disciples to keep a small boat ready, because of the crowd, so they wouldn't crush him. ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು.
10 For he had healed so many that all who had diseases were pressing forward to touch him. ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.
11 Whenever the unclean spirits saw him, they fell before him, shouting, "You are the Son of God!" ಮತ್ತು ದೆವ್ವಗಳು ಆತನನ್ನು ಕಂಡಾಗಲ್ಲೆಲ್ಲಾ ಆತನ ಪಾದಕ್ಕೆ ಬಿದ್ದು “ನೀನು ದೇವಕುಮಾರನು” ಎಂದು ಕೂಗುತ್ತಿದ್ದವು.
12 But he firmly warned them not to reveal him. ಆದರೆ ಆತನು ತಾನು ಇಂಥವನೆಂಬುದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಬಹು ಖಂಡಿತವಾಗಿ ಆಜ್ಞಾಪಿಸಿದನು.
13 Jesus went up the mountain and called those he wanted; they came to him. ಆ ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು.
14 He appointed twelve, named apostles, so they could be with him and he could send them out to preach, ಆತನು ಅಪೊಸ್ತಲರೆಂದು ಹೆಸರಿಟ್ಟಂಥ ಹನ್ನೆರಡು ಮಂದಿಯನ್ನು ತನ್ನ ಸಂಗಡ ಇರಬೇಕೆಂತಲೂ, ಸುವಾರ್ತೆಯನ್ನು ಸಾರುವುದಕ್ಕೆ ಅವರನ್ನು ಕಳುಹಿಸಬೇಕೆಂತಲೂ,
15 and to have authority to drive out demons. ದೆವ್ವಗಳನ್ನು ಬಿಡಿಸುವ ಅಧಿಕಾರ ಉಳ್ಳವರಾಗಿರಬೇಕೆಂತಲೂ ನೇಮಿಸಿದನು.
16 These are the twelve he appointed: Simon, to whom he gave the name Peter; ಯೇಸುವಿನಿಂದ ನೇಮಿಸಲ್ಪಟ್ಟ ಹನ್ನೆರಡು ಮಂದಿ ಇವರೇ: ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು.
17 James son of Zebedee, and John his brother, whom he named Boanerges, meaning Sons of Thunder; ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಸಿಡಿಲ ಮರಿಗಳು ಎಂದು ಹೆಸರಿಟ್ಟನು.
18 Andrew, Philip, Bartholomew, Matthew, Thomas, James son of Alphaeus, Thaddaeus, Simon the Zealot, ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ,
19 and Judas Iscariot, who betrayed him. ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ.
20 He went home; the crowd gathered again, so he and his disciples couldn't even eat. ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ.
21 When his family heard, they went out to restrain him, for they said, "He's out of his mind." ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು.
22 The scribes who came down from Jerusalem said, "He has Beelzebul," and, "By the prince of demons he drives out demons." ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ” ಹೇಳುತ್ತಿದ್ದರು.
23 So Jesus called them to him and spoke in parables: "How can Satan drive out Satan? ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ, “ಸೈತಾನನು ಸೈತಾನನನ್ನು ಬಿಡಿಸುವುದುಂಟೇ?
24 If a kingdom is divided against itself, that kingdom cannot stand. ಯಾವುದೇ ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ಉಳಿಯದು;
25 And if a house is divided against itself, that house will not be able to stand. ಹಾಗೆಯೇ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ಉಳಿಯದು.
26 And if Satan opposes himself and is divided, he cannot stand; his end has come. ಅದರಂತೆ ಸೈತಾನನು ತನಗೆ ವಿರೋಧವಾಗಿ ಎದ್ದು ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನು ಉಳಿಯದೆ ನಾಶವಾಗಿ ಹೋಗುವನು.
27 No one can enter a strong man's house and take his goods without first tying up the strong man—then he can plunder the house. ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ನುಗ್ಗಿ ಅವನ ಆಸ್ತಿಯನ್ನು ಕದಿಯಲು ಸಾಧ್ಯವಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಕೊಳ್ಳೆಹೊಡೆಯಬಹುದು.
28 Truly I tell you, all sins and insults against God will be forgiven children of mankind, whatever they say, ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು.
29 but whoever blasphemes against the Holy Spirit never has forgiveness; they are guilty of an eternal sin," ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು” ಎಂದು ಹೇಳಿದನು.
30 for they were saying, "He has an unclean spirit." ಅವರು “ಈತನಲ್ಲಿ ಅಶುದ್ಧಾತ್ಮವಿದೆ” ಎಂದು ಹೇಳುತ್ತಿದ್ದರಿಂದ ಯೇಸು ಇದನ್ನು ಹೇಳಿದನು.
31 His mother and brothers arrived and, standing outside, sent to him, calling him. ಜನರು ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ, ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು.
32 A crowd sat around him and said to him, "Look, your mother and your brothers are outside, asking for you." ಆ ಜನರು ಆತನಿಗೆ, “ನಿನ್ನ ತಾಯಿಯೂ, ನಿನ್ನ ತಮ್ಮಂದಿರೂ ನಿನ್ನನ್ನು ಹುಡುಕಿಕೊಂಡು ಬಂದು ಹೊರಗೆ ನಿಂತಿದ್ದಾರೆ ನೋಡು” ಎಂದು ಹೇಳಿದರು.
33 He answered them, "Who are my mother and my brothers?" ಅದಕ್ಕೆ ಆತನು ಅವರಿಗೆ, “ನನಗೆ ತಾಯಿಯೂ, ತಮ್ಮಂದಿರೂ ಯಾರು?” ಎಂದು ಹೇಳಿ ತನ್ನ ಸುತ್ತಲು ಕುಳಿತಿದ್ದವರನ್ನು ನೋಡಿ,
34 Looking around at those sitting in a circle around him, he said, "Here are my mother and my brothers! “ಇಗೋ, ನನ್ನ ತಾಯಿ, ನನ್ನ ತಮ್ಮಂದಿರು.
35 Whoever does the will of our Father is my brother and sister and mother." ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ” ಅಂದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]