Skip to content
The Believer's Library

Indian Revised Version (IRV) Kannada - 2019

Mark 4 IRVKan

Show IRVKan only
Verse × ×
1 Jesus again taught by the sea. So large a crowd gathered around him that he got into a boat on the water and sat, while the whole crowd was on land by the sea. ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡತೊಡಗಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು.
2 He taught them many things in parables, and in his teaching he said to them: ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶಮಾಡಿದನು. ಆ ಉಪದೇಶದಲ್ಲಿ ಅವರಿಗೆ ಹೇಳಿದ್ದೇನಂದರೆ:
3 "Listen! A sower went out to sow. “ಕೇಳಿರಿ! ಬಿತ್ತುವವನು ಬಿತ್ತುವುದಕ್ಕೆ ಹೊರಟನು.
4 And as he sowed, some seed fell along the path, and the birds came and devoured it. ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು.
5 Other seed fell on rocky ground, lacking much soil, and sprang up at once since the soil had no depth. ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅಲ್ಲಿ ಮಣ್ಣು ಆಳವಾಗಿಲ್ಲದ್ದರಿಂದ ಅವು ಬೇಗ ಮೊಳೆತವು;
6 When the sun rose, the plants were scorched, and since they had no root, they withered. ಆದರೆ ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು.
7 Other seed fell among thorns, and the thorns grew up and choked it, yielding no grain. ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.
8 Other seed fell into good soil, producing grain that sprouted, grew, and yielded thirty, sixty, one hundred times what was sown." ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ಬೆಳೆದು ಬಂದು ಫಲಕೊಟ್ಟವು; ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರುವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.”
9 And he said, "Whoever has ears to hear, let him hear." ಮತ್ತು ಆತನು “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.
10 When he was alone, those around him, together with the Twelve, asked him about the parables. ಆತನು ಒಬ್ಬನೇ ಇದ್ದಾಗ, ಆತನಿಗೆ ಹತ್ತಿರವಾಗಿದ್ದವರು ಹನ್ನೆರಡು ಮಂದಿ ಶಿಷ್ಯರ ಸಂಗಡ ಆ ಸಾಮ್ಯಗಳ ವಿಷಯವಾಗಿ ಆತನನ್ನು ಕೇಳಿದರು.
11 He said to them, "To you is given the secret of the kingdom of our Father, but to those outside, everything comes in parables, ಆತನು ಅವರಿಗೆ, “ದೇವರ ರಾಜ್ಯದ ರಹಸ್ಯ ನಿಮಗೆ ದೊರೆತಿದೆ; ಆದರೆ ಹೊರಗಿನವರಿಗೆ ಎಲ್ಲವನ್ನು ಸಾಮ್ಯಗಳ ರೂಪದಲ್ಲಿ ಹೇಳಿದ್ದೇನೆ.”
12 so that 'they may look but not perceive, and hear but not understand, and not turn and be forgiven.'" “ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ, ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ, ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.”
13 He said to them, "You don't understand this parable? Then how will you understand all the parables? ಅನಂತರ ಆತನು ಅವರಿಗೆ ಹೇಳಿದ್ದೇನಂದರೆ, “ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳಿದುಕೊಳ್ಳುವಿರಿ?
14 The sower sows the word. ಆ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ.
15 These are the ones on the path where the word is sown: once they hear, Satan comes immediately and takes away the word sown in them. ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.
16 These are the ones sown on rocky ground, who hear the word and immediately receive it with joy. “ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ;
17 But they have no root in themselves, lasting only briefly; when trouble or persecution comes because of the word, they fall away at once. ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.
18 And others are the ones sown among thorns. These are those who hear the word, “ಇನ್ನು ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು;
19 but worries of this age, the deceit of wealth, and desires for other things enter and choke the word, and it produces no fruit. ಇವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ, ಐಶ್ವರ್ಯದಿಂದುಂಟಾಗುವ ವ್ಯಾಮೋಹವೂ, ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ.
20 And these are the ones sown on good soil: they hear the word, accept it, and produce fruit—thirty, sixty, one hundred times over." ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು” ಅಂದನು.
21 He told them, "Does anyone bring in a lamp to put it under a basket or bed—not on a stand? ಇದಲ್ಲದೆ ಯೇಸು ಅವರಿಗೆ, “ದೀಪವನ್ನು ತಂದು ಕೊಳಗದೊಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಲ್ಲವೇ?
22 Nothing is hidden except to be revealed; nothing is secret except to surface. ಮರೆಯಾಗಿರುವಂಥ ಎಲ್ಲವೂ ಬೆಳಕಿಗೆ ಬಾರದೇ ಇರುವುದಿಲ್ಲ; ಬಹಿರಂಗವಾಗದಿರುವ ಯಾವ ರಹಸ್ಯಗಳು ಇರುವುದಿಲ್ಲ.
23 If anyone has ears to hear, let him hear." ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಹೇಳಿದನು.
24 He told them, "Watch what you hear. The measure you use will be measured to you—and more added. ಮತ್ತು ಆತನು ಅವರಿಗೆ; “ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು.
25 For whoever has will be given more; whoever doesn't, even what he has will be taken from him." ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಇದ್ದುದನ್ನೂ ತೆಗೆಯಲ್ಪಡುವುದು” ಎಂದು ಹೇಳಿದನು.
26 He said, "This is what the kingdom of our Father is like: a man scatters seed on the ground. ಇದಲ್ಲದೆ ಆತನು ಅವರಿಗೆ ಮತ್ತೆ ಹೇಳಿದೇನಂದರೆ; “ಒಬ್ಬನು ಭೂಮಿಯಲ್ಲಿ ಬೀಜವನ್ನು ಬಿತ್ತಿದ ನಂತರ ಅವನು ರಾತ್ರಿಯಲ್ಲಿ ಮಲಗಿದ್ದಾಗಲೂ, ಹಗಲು ಎಚ್ಚರವಿರುವಾಗಲೂ
27 Night and day, asleep or awake, the seed sprouts and grows, though he doesn't know how. ಅವನಿಗೆ ತಿಳಿಯದ ರೀತಿಯಲ್ಲಿ ಆ ಬೀಜದ ಸಸಿ ಮೊಳೆತು ಬೆಳೆಯುವುದು. ಇದರಂತೆ ದೇವರ ರಾಜ್ಯವೂ ಕೂಡ.
28 The soil yields grain on its own—first blade, then head, then full kernel in the head. ಭೂಮಿಯು ಮೊದಲು ಮೊಳಕೆಯನ್ನೂ, ಆ ಮೇಲೆ ತೆನೆಯನ್ನೂ, ತರುವಾಯ ತೆನೆಯಲ್ಲಿ ತುಂಬಾ ಕಾಳನ್ನೂ ತನ್ನಷ್ಟಕ್ಕೆ ತಾನೇ ಹುಟ್ಟಿಸುತ್ತದೆ.
29 But when the grain ripens, he immediately sends the sickle, since harvest has come." ಆದರೆ ಫಲಮಾಗಿದಾಗ ಸುಗ್ಗಿಕಾಲ ಬಂದಿತೆಂದು ವ್ಯವಸಾಯಗಾರನು ಅದನ್ನು ಕೊಯ್ಯಲು ಕುಡುಗೋಲನ್ನು ಬಳಸುತ್ತಾನೆ” ಅಂದನು.
30 He said, "What can we compare the kingdom of our Father to, or what parable can we use for it? ಇನ್ನೂ ಆತನು ಹೇಳಿದ್ದು; “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ?
31 It's like a mustard seed, the smallest of all seeds when sown on the ground. ಅದು ಸಾಸಿವೆ ಕಾಳಿನಂತಿರುತ್ತದೆ. ನೆಲದಲ್ಲಿ ಬಿತ್ತುವಾಗ ಅದು ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ.
32 Yet once sown, it grows up and becomes the largest of all garden plants, producing branches so big that birds of the air can nest in its shade." ಬಿತ್ತಿದ ಮೇಲೆ ಅದು ಬೆಳೆದು ಎಲ್ಲಾ ಗಿಡಗಳಿಗಿಂತ ದೊಡ್ಡದಾಗಿ ದೊಡ್ಡದೊಡ್ಡ ಕೊಂಬೆಗಳನ್ನು ಬಿಡುವುದರಿಂದ ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ನೆರಳಿನಲ್ಲಿ ವಾಸಮಾಡುವುದಕ್ಕಾಗುತ್ತದೆ” ಅಂದನು.
33 With many such parables he spoke the word to them, as they were able to hear. ಆತನು ಈ ರೀತಿಯ ಅನೇಕ ಸಾಮ್ಯಗಳಿಂದ ಜನರಿಗೆ ಅರ್ಥವಾಗುವ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.
34 He spoke to them only in parables, but privately explained everything to his own disciples. ಸಾಮ್ಯಗಳಿಲ್ಲದೆ ಆತನು ಒಂದನ್ನೂ ಹೇಳಲಿಲ್ಲಾ. ಆದರೆ ಏಕಾಂತವಾಗಿರುವಾಗ ಆತನು ತನ್ನ ಆಪ್ತ ಶಿಷ್ಯರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದನು.
35 That day, when evening came, he said to them, "Let us cross over to the other side." ಆ ದಿನ ಸಾಯಂಕಾಲವಾದಾಗ ಆತನು ಅವರಿಗೆ, “ಆಚೇದಡಕ್ಕೆ ಹೋಗೋಣ” ಎಂದು ಹೇಳಿದನು.
36 They left the crowd and took him along, just as he was, in the boat, other boats accompanying him. ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡು ಹೋದರು. ಬೇರೆ ದೋಣಿಗಳೂ ಸಹ ಆತನ ಸಂಗಡ ಇದ್ದವು.
37 A fierce windstorm came up. Waves broke over the boat, so that it was already being swamped. ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು.
38 But Jesus was asleep in the stern on the cushion. They woke him and said, "Teacher, don't you care that we're dying?" ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ” ಎಂದು ಕೇಳಿದರು.
39 He got up, rebuked the wind, and told the sea, "Peace! Be still!" The wind stopped, and it grew totally calm. ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ “ಶಾಂತವಾಗಿರು, ಮೊರೆಯಬೇಡ” ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು.
40 He said to them, "Why are you so afraid? Do you still have no faith?" ತರುವಾಯ ಆತನು ಅವರನ್ನು, “ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?” ಎಂದು ಕೇಳಲು
41 They were terrified and asked one another, "Who then is this, that even the wind and the sea obey him?" ಅವರು ಬಹು ಭಯಪಟ್ಟು, “ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]