Skip to content
The Believer's Library

Indian Revised Version (IRV) Kannada - 2019

Mark 5 IRVKan

Show IRVKan only
Verse × ×
1 They came to the other side of the sea, to the region of the Gerasenes. ಆ ಮೇಲೆ ಅವರು ಸಮುದ್ರದ ಆಚೇದಡದಲ್ಲಿದ್ದ ಗೆರಸೇನರ ಸೀಮೆಗೆ ತಲುಪಿದರು.
2 As Jesus left the boat, a man with an unclean spirit met him at once, from the tombs. ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.
3 He lived among the tombs, and no one could bind him anymore, not even with a chain. ಅವನಿಗೆ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. ಅವನನ್ನು ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ.
4 For he'd often been bound with shackles and chains, but tore the chains apart and shattered the shackles—no one had strength to subdue him. Not in this edition
5 Night and day, among the tombs and on the mountains, he cried out constantly, cutting himself with stones. ಅವನು ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಆರ್ಭಟಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಗಾಯಮಾಡಿಕೊಳ್ಳುತ್ತಾ ಇದ್ದನು.
6 And when he saw Jesus from a distance, he ran and fell down before him. ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು ಆತನಿಗೆ ಅಡ್ಡಬಿದ್ದು,
7 Shouting loudly, he said, "What do you want with me, Jesus, Son of the Most High God? I beg you by God, don't torment me!" ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು.
8 For Jesus had been saying to him, "Come out of the man, you unclean spirit!" ಏಕೆಂದರೆ ಯೇಸು, “ಅಶುದ್ಧಾತ್ಮವೇ ಇವನನ್ನು ಬಿಟ್ಟುಹೋಗು” ಎಂದು ಆಜ್ಞಾಪಿಸಿದ್ದನು.
9 Jesus asked, "What is your name?" "Legion," he said, "we are many." ಯೇಸು, “ನಿನ್ನ ಹೆಸರು ಏನೆಂದು” ಅವನನ್ನು ಕೇಳಿದ್ದಕ್ಕೆ ಅವನು, “ನನ್ನ ಹೆಸರು ದಂಡು; ಯಾಕೆಂದರೆ ನಾವು ಬಹು ಮಂದಿ ಇದ್ದೇವೆ” ಎಂದು ಹೇಳಿ,
10 He kept begging him not to send them out of the region. ನಮ್ಮನ್ನು ಈ ಪ್ರಾಂತ್ಯದಿಂದ ಹೊರಡಿಸಬೇಡ ಎಂದು ಆತನನ್ನು ಬಹಳವಾಗಿ ಬೇಡಿಕೊಂಡವು.
11 Now a great herd of pigs was feeding there on the hillside. ಅಲ್ಲಿಯ ಗುಡ್ಡದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು.
12 And they begged him, "Send us to the pigs; let us enter them." ಆ ಅಶುದ್ಧಾತ್ಮಗಳು, “ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮ್ಮನ್ನು ಕಳುಹಿಸಿಕೊಡು” ಎಂದು ಆತನನ್ನು ಬೇಡಿಕೊಂಡವು.
13 He gave permission. The unclean spirits came out and entered the pigs; the herd—about 2,000—rushed down the cliff into the sea and drowned in the sea. ಆತನು ಅವುಗಳಿಗೆ ಅನುಮತಿಸಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಸತ್ತುಹೋದವು.
14 The herders fled and told it in town and country; people came to see what happened. ಅವುಗಳನ್ನು ಮೇಯಿಸುವವರು ಓಡಿಹೋಗಿ ನಡೆದಿರುವ ಸಂಗತಿಯನ್ನು ಆ ಊರಲ್ಲಿಯೂ ಪಕ್ಕದ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವುದಕ್ಕೆ ಹೊರಟು ಯೇಸು ಇದ್ದಲ್ಲಿಗೆ ಬಂದರು.
15 They came to Jesus and saw the man who had been possessed by the demons, the one who'd had the legion, sitting there, dressed and thinking clearly—and they were afraid. ಆ ದೆವ್ವಹಿಡಿದಿದ್ದವನು ಅಂದರೆ ದೆವ್ವಗಳ ದಂಡಿನಿಂದ ಬಂಧಿಸಲ್ಪಟ್ಟವನು, ಬಟ್ಟೆಗಳನ್ನು ಹಾಕಿಕೊಂಡು ಸುಬುದ್ಧಿಯಿಂದ ಕುಳಿತಿರುವುದನ್ನು ನೋಡಿ ಹೆದರಿದರು.
16 Eyewitnesses told them what had happened to the demon-possessed man, and about the pigs. ನಡೆದ ಸಂಗತಿಯನ್ನು ನೋಡಿದ್ದವರು ಆ ದೆವ್ವಹಿಡಿದವನಿಗೆ ಸಂಭವಿಸಿದೆಲ್ಲವನ್ನು ಮತ್ತು ಹಂದಿಗಳ ವಿಷಯವನ್ನೂ ಅವರಿಗೆ ವಿವರಿಸಿದರು.
17 And they began to beg Jesus to leave their region. ಆಗ ಅವರು ಯೇಸುವಿಗೆ ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
18 As he was getting into the boat, the once-possessed man begged to be with him. ಆತನು ದೋಣಿಯನ್ನು ಹತ್ತುವಾಗ ಆ ದೆವ್ವಗಳ ಬಂಧನದಿಂದ ಬಿಡುಗಡೆ ಹೊಂದಿದವನು, ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿದನು.
19 But Jesus refused, telling him instead, "Go home to your own people and tell them how much our Father has done for you, and how he has had mercy on you." ಆದರೆ ಯೇಸು ಅವನ ಬೇಡಿಕೆಯನ್ನು ಒಪ್ಪದೆ ಅವನಿಗೆ, “ನೀನು ನಿನ್ನ ಮನೆಗೂ ನಿನ್ನ ಜನರ ಬಳಿಗೂ ಹೋಗಿ ಕರ್ತನು ನಿನ್ನಲ್ಲಿ ಕರುಣೆಯಿಟ್ಟು ನಿನಗೆ ಏನೇನು ಉಪಕಾರಗಳನ್ನು ಮಾಡಿದ್ದಾನೋ ಅದನ್ನು ಹೇಳು” ಅಂದನು.
20 He went and began proclaiming in the Decapolis all Jesus had done for him, and everyone was amazed. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವುದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು.
21 When Jesus crossed again by boat to the other side, a large crowd gathered around him by the sea. ಯೇಸು ತಿರುಗಿ ದೋಣಿಯಲ್ಲಿ ಈಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು.
22 One of the synagogue leaders, named Jairus, came, saw Jesus, and fell at his feet, ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು,
23 and begged him urgently, "My little daughter is dying. Come, lay your hands on her, so she may be healed and live." “ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು” ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
24 So Jesus went with him. And a great crowd followed him and pressed around him. ಯೇಸುವು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕುತ್ತಾ ಹಿಂಬಾಲಿಸಿದರು.
25 And there was a woman with a discharge of blood that had gone on for twelve years. ಆಗ ಅಲ್ಲಿ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಇದ್ದಳು.
26 She had suffered much under many doctors, spent all she owned, gained nothing, and only grew worse. ಅನೇಕ ವೈದ್ಯರ ಚಿಕಿತ್ಸೆಯಿಂದ ಆಕೆಯು ಬಹು ಕಷ್ಟವನ್ನು ಅನುಭವಿಸಿ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.
27 Hearing about Jesus, she came up behind him in the crowd and touched his cloak. ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ, “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆನು” ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು.
28 For she kept saying, "If I just touch his garments, I will be made well." Not in this edition
29 Her flow of blood dried up instantly, and she felt in her body that she was healed of her suffering. ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು.
30 At once Jesus, aware that power had left him, turned around in the crowd and asked, "Who touched my clothes?" ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಲು
31 His disciples said to him, "You see the crowd crushing you, yet you ask, 'Who touched me?'" ಆತನ ಶಿಷ್ಯರು ಆತನಿಗೆ, “ನಿನ್ನ ಸುತ್ತಲೂ ಜನರು ಮುತ್ತಿಕೊಂಡು ನೂಕುವುದು ನಿನಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ?” ಎಂದರು.
32 And he looked around to see who had done it. ಆದರೆ ಯೇಸು ಈ ಕೆಲಸ ಮಾಡಿದವರನ್ನು ನೋಡಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ,
33 But the woman, afraid and trembling, knowing what had happened to her, came, fell before him, and told him the whole truth. ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು.
34 He told her, "Daughter, your faith made you well. Go in peace, healed of your suffering." ಆತನು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ” ಎಂದು ಹೇಳಿದನು.
35 While he was still speaking, people came from the synagogue leader's house, saying, "Your daughter has died. Why bother the Teacher any longer?" ಆತನು ಇನ್ನೂ ಮಾತನಾಡುತ್ತಿರುವಾಗಲೇ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು, “ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?” ಅಂದರು.
36 But Jesus overheard what they said and told the synagogue leader, "Don't fear, only believe." ಅವರು ಆಡಿದ ಮಾತನ್ನು ಯೇಸು ಗಣನೆಗೆ ತಂದುಕೊಳ್ಳದೆ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ” ಎಂದು ಹೇಳಿದನು.
37 And he allowed no one to follow him except Peter, James, and John the brother of James. ಮತ್ತು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ.
38 They came to the synagogue leader's house and Jesus saw chaos—people weeping, wailing loudly. ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು.
39 Entering, he said to them, "Why this commotion and crying? The child isn't dead, just asleep." ಆತನು ಒಳಕ್ಕೆ ಹೋಗಿ, “ನೀವು ಗದ್ದಲ ಮಾಡುವುದೂ ಅಳುವುದೂ ಯಾಕೆ? ಹುಡುಗಿ ಸತ್ತಿಲ್ಲ; ಅವಳು ನಿದ್ದೆಮಾಡುತ್ತಿದ್ದಾಳೆ” ಅನ್ನಲು,
40 They laughed at him. But he sent them all out, took the child's father and mother and his companions, and entered where the child was. ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ,
41 He took her hand and said to her, "Talitha koum," which means, "Little girl, I say to you, get up!" ಅವಳ ಕೈಹಿಡಿದು, “ತಲಿಥಾಕೂಮ್” ಅಂದನು. ಈ ಮಾತಿಗೆ “ಅಮ್ಮಣ್ಣೀ, ಎದ್ದೇಳು ಎಂದು ನಾನು ಹೇಳುತ್ತೇನೆ” ಎಂದರ್ಥ.
42 At once the girl got up and walked—for she was twelve—and they were instantly overwhelmed with great amazement. ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರ್ಷ ವಯಸ್ಸಿನವಳು.
43 He strictly ordered them to tell no one of this, and said to give her something to eat. ಅವರೆಲ್ಲರೂ ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ, ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು. ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]