Skip to content
The Believer's Library

Indian Revised Version (IRV) Kannada - 2019

Mark 6 IRVKan

Show IRVKan only
Verse × ×
1 He went out from there and came to his hometown, and his disciples followed him. ಯೇಸು ಅಲ್ಲಿಂದ ಹೊರಟು ತನ್ನ ಊರಿಗೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
2 On the Sabbath he began teaching in the synagogue. Many who heard were amazed: "Where did this man get this? What wisdom is this, given to him? How do such miracles happen through his hands? ಸಬ್ಬತ್ ದಿನ ಬಂದಾಗ ಆತನು ಅಲ್ಲಿಯ ಸಭಾಮಂದಿರದಲ್ಲಿ ಉಪದೇಶಮಾಡತೊಡಗಿದನು. ಅಲ್ಲಿ ನೆರದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಈತನಿಗೆ ಈ ಬೋಧನೆಯ ಮಾತುಗಳು ಎಲ್ಲಿಂದ ಬಂದಿತು? ಈತನು ಪಡೆದಿರುವ ಜ್ಞಾನವಾದರೂ ಎಂಥದ್ದು? ಈತನ ಕೈಯಿಂದ ಇಂತಹ ಅದ್ಭುತಕಾರ್ಯಗಳು ಆಗುವುದಾದರು ಹೇಗೆ?
3 Isn't this the carpenter, Mary's son, brother of James, Joses, Judas, and Simon? Aren't his sisters here with us?" They were offended by him. ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.
4 Jesus said to them, "A prophet lacks honor only in his hometown, among his relatives, and in his own household." ಯೇಸು ಅವರಿಗೆ, “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು; ಆದರೆ ಸ್ವಂತ ದೇಶದಲ್ಲಿಯೂ, ಸ್ವಂತ ಜನರಲ್ಲಿಯೂ, ಸ್ವಂತ ಮನೆಯಲ್ಲಿಯೂ ಗೌರವವಿಲ್ಲ” ಎಂದು ಹೇಳಿದನು.
5 He could do no miracle there, except laying hands on a few sick and healing them. ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ.
6 He was amazed at their lack of faith. Then he went around the villages teaching. ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು.
7 He called the twelve and began sending them out two by two, giving them authority over unclean spirits. ತಾನು ಆಯ್ಕೆಮಾಡಿಕೊಂಡ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು,
8 He ordered them to take only a staff for the road—no bread, no bag, no money in their belts, “ಕೋಲು ಹೊರತು ಪ್ರಯಾಣಕ್ಕೆ ಏನೂ ತೆಗೆದುಕೊಂಡು ಹೋಗಬೇಡಿರಿ; ಬುತ್ತಿ, ಚೀಲ, ಸೊಂಟಪಟ್ಟಿಯಲ್ಲಿ ಹಣ ಬೇಡ.
9 but to wear sandals and not put on two tunics. ಚಪ್ಪಲಿಗಳನ್ನು ಹಾಕಿಕೊಳ್ಳಬಹುದು, ಆದರೆ ಎರಡು ಅಂಗಿಗಳನ್ನು ಧರಿಸಬೇಡಿರಿ” ಎಂದು ಅಪ್ಪಣೆಕೊಟ್ಟನು.
10 And he said to them, "Wherever you enter a house, stay there until you leave that place. ಇದಲ್ಲದೆ ಆತನು ಅವರಿಗೆ, “ನೀವು ಎಲ್ಲಿಯಾದರೂ ಒಂದು ಮನೆಗೆ ಹೋದಾಗ ಆ ಸ್ಥಳದಿಂದ ಹೊರಡುವವರೆಗೂ ಅಲ್ಲೇ ಉಳಿದುಕೊಳ್ಳಿರಿ.
11 Whatever place refuses to welcome or hear you, leaving there, shake the dust off your feet as testimony against them." ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಎಂದು ಹೇಳಿದನು.
12 So they went out and proclaimed that people should repent. ಅವರು ಹೊರಟು ಹೋಗಿ ಜನರಿಗೆ, “ನೀವು ನಿಮ್ಮ ಪಾಪಗಳನ್ನು ಬಿಟ್ಟು ಮಾನಸಾಂತರ ಹೊಂದಬೇಕು” ಎಂದು ಸಾರಿ ಹೇಳಿದರು.
13 And they drove out many demons and anointed many sick people with oil and healed them. ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಗುಣಪಡಿಸಿದರು.
14 King Herod heard of it, for Jesus's name had become known. Some were saying, "John the Baptist has been raised from the dead; that is why these miraculous powers are at work in him." ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು.
15 But others said, "He's Elijah." Others said, "He's a prophet, like one of the prophets of old." ಕೆಲವರು, “ಇವನು ಎಲೀಯನೆಂತಲೂ” ಮತ್ತೆ ಕೆಲವರು, “ಇವನು ಪ್ರಾಚೀನ ಕಾಲದ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯೆಂತಲೂ” ಹೇಳಿದರು.
16 But when Herod heard of it, he said, "John, whom I beheaded, has been raised." ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ” ಎಂದು ಹೇಳಿದನು.
17 Herod had sent and seized John, binding him in prison because of Herodias, his brother Philip's wife, whom he had married. ಹೆರೋದನು ತಾನೇ ಕಳುಹಿಸಿ ಯೋಹಾನನನ್ನು ಹಿಡಿದು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳ ನಿಮಿತ್ತ ಹಾಗೆ ಮಾಡಿದ್ದನು; ಏಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆಯಾಗಿದ್ದನು.
18 For John kept telling Herod, "It is not lawful for you to have your brother's wife." ಇದರ ನಿಮಿತ್ತ ಯೋಹಾನನು ಹೆರೋದನಿಗೆ, “ನಿನ್ನ ಅಣ್ಣನ ಹೆಂಡತಿಯು ಆತನು ಬದುಕಿರುವಾಗಲೇ ನಿನ್ನವಳ್ಳಾಗಿರುವುದು ಅಧರ್ಮವಲ್ಲವೇ” ಎಂದು ಹೇಳುತ್ತಿದ್ದನು.
19 And Herodias held a grudge against him and wanted to kill him, but she could not, ಇದರಿಂದ ಹೆರೋದ್ಯಳು ಸಹ ಯೋಹಾನನ ಮೇಲೆ ದ್ವೇಷವಿಟ್ಟುಕೊಂಡು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ.
20 Herod feared John, knowing him righteous and holy, and protected him. Hearing John left Herod deeply puzzled, yet he gladly listened to him. ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.
21 Then a fitting day came: Herod's birthday, when he gave a banquet for his nobles, military commanders, and Galilee's leading men. ಆದರೆ ಹೆರೋದ್ಯಳಿಗೆ ಅನುಕೂಲವಾದ ದಿನ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ,
22 When Herodias's daughter entered and danced, she delighted Herod and his dinner guests. The king told the girl, "Ask me for anything you want, and I'll give it to you." ಹೆರೋದ್ಯಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದ ಅತಿಥಿಗಳನ್ನೂ ಮೆಚ್ಚಿಸಿದಳು. ಅರಸನು ಆ ಹುಡುಗಿಗೆ, “ನಿನಗೆ ಬೇಕಾದದ್ದನ್ನು ಕೇಳಿಕೋ, ಕೊಡುತ್ತೇನೆ.
23 He swore to her, "Whatever you ask me, I'll give you—up to half my kingdom." ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿದರೂ, ನಿನಗೆ ಕೊಡುತ್ತೇನೆ” ಎಂದು ಪ್ರಮಾಣಮಾಡಿದನು.
24 She went out and said to her mother, "What should I ask?" She said, "The head of John the Baptist." ಆಗ ಅವಳು ಹೊರಕ್ಕೆ ಹೋಗಿ, “ನಾನು ಏನು ಕೇಳಿಕೊಳ್ಳಲಿ?” ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ” ಅಂದಳು.
25 She went in immediately, with urgency, to the king and asked, "I want you to give me this instant the head of John the Baptist on a platter." ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು, “ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡಬೇಕು, ಇದೇ ನನ್ನ ಬೇಡಿಕೆ” ಎಂದು ಕೇಳಿಕೊಂಡಳು.
26 Deeply grieved, the king still wouldn't refuse her, because of his oaths and his guests. ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.
27 The king at once sent an executioner, ordering John's head brought. He went and beheaded him in the prison, ಕೂಡಲೆ ತನ್ನ ಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ, ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು;
28 and brought his head on a platter, gave it to the girl, and the girl gave it to her mother. ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಕಡಿದು ಒಂದು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟನು. ಆ ಹುಡುಗಿ ಅದನ್ನು ತನ್ನ ತಾಯಿಗೆ ಕೊಟ್ಟಳು.
29 When John's disciples heard, they came, took his body, and laid it in a tomb. ಯೋಹಾನನ ಶಿಷ್ಯರು ಈ ಸಂಗತಿಗಳನ್ನು ಕೇಳಿ ಅವರು ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಯಲ್ಲಿ ಇಟ್ಟರು.
30 The apostles gathered to Jesus and told him all that they had done and taught. ಅಪೊಸ್ತಲರು ಯೇಸುವಿನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಆತನಿಗೆ ತಿಳಿಸಿದರು.
31 He told them, "Come away by yourselves to a quiet place and rest a while." For many were coming and going, and they had no time to eat. ಆತನು ಅವರಿಗೆ, “ನೀವು ಮಾತ್ರ ಏಕಾಂತ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ” ಎಂದು ಹೇಳಿದನು. ಏಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ.
32 And they went away in the boat to a desolate place by themselves. ಆಗ ಅವರು ತಾವಾಗಿಯೇ ದೋಣಿಯಲ್ಲಿ ಹೊರಟು ಏಕಾಂತ ಸ್ಥಳಕ್ಕೆ ಹೋದರು.
33 Many saw them leave and recognized them; they ran on foot from every town and got there ahead of them. ಆದರೆ ಅವರು ಹೋಗುವುದನ್ನು ಬಹು ಜನರು ನೋಡಿ ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮೊದಲೇ ಅಲ್ಲಿ ಸೇರಿದರು.
34 Stepping ashore, he saw a large crowd and felt compassion for them, for they were like sheep without a shepherd, and began teaching them many things. ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.
35 When it was already late, his disciples came to him and said, "This is an isolated place, and it's already late. ಅಷ್ಟರಲ್ಲಿ ಸಂಜೆ ಆಗಿದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು, “ಇದು ನಿರ್ಜನ ಸ್ಥಳ, ಈಗ ಹೊತ್ತು ಬಹಳವಾಯಿತು;
36 Send them away to go into the surrounding countryside and villages and buy themselves something to eat." ಈ ಜನರಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮ್ಮ ಊಟಕ್ಕೆ ಏನಾದರೂ ಕೊಂಡುಕೊಳ್ಳಲಿ” ಎಂದು ಹೇಳಿದರು.
37 He replied, "You give them something to eat." They said, "Should we go buy 200 denarii of bread and give them it to eat?" ಅದಕ್ಕೆ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿರಿ” ಎಂದು ಉತ್ತರಕೊಟ್ಟನು. ಅದಕ್ಕವರು, “ನಾವು ಹೋಗಿ ಇನ್ನೂರು ದಿನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟ ಕೊಡಬೇಕೋ?” ಎಂದು ಹೇಳಲು
38 He asked them, "How many loaves do you have? Go and see." They found out and said, "Five, and two fish." ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ” ಅಂದನು. ಅವರು ವಿಚಾರಿಸಿಕೊಂಡು ಬಂದು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ” ಅಂದರು.
39 Then he commanded them all to sit down in groups on the green grass. ಆಗ ಆತನು ಅವರಿಗೆ, ಎಲ್ಲರೂ ಹಸಿರುಹುಲ್ಲಿನ ಮೇಲೆ ಪಂಕ್ತಿಪಂಕ್ತಿಯಾಗಿ ಕುಳಿತುಕೊಳ್ಳಲಿ ಎಂದು ಅಪ್ಪಣೆಕೊಟ್ಟಾಗ,
40 So they sat down in groups, by hundreds and by fifties. ಜನರು ಪಂಕ್ತಿಗೆ ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕುಳಿತುಕೊಂಡರು.
41 Taking the five loaves and two fish, he looked up to heaven, gave thanks and broke the loaves, gave them to the disciples to set before the people, and divided the two fish among them all. ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು.
42 And they all ate and were satisfied. ಅವರೆಲ್ಲರೂ ತೃಪ್ತರಾಗುವವರೆಗೂ ಊಟಮಾಡಿದರು.
43 And they took up twelve baskets full of broken pieces and of the fish. ರೊಟ್ಟಿಯ ತುಂಡುಗಳನ್ನೂ ಮೀನಿನ ತುಂಡುಗಳನ್ನೂ ಕೂಡಿಸಲಾಗಿ ಹನ್ನೆರಡು ಪುಟ್ಟಿಗಳು ತುಂಬಿದವು.
44 And those who ate the loaves were 5,000 men. ಊಟಮಾಡಿದವರು ಐದು ಸಾವಿರ ಮಂದಿ ಗಂಡಸರು.
45 At once he made his disciples board the boat and go ahead to the other side, toward Bethsaida, while dismissing the crowd. ಇದಾದ ಕೂಡಲೆ ಯೇಸು ತನ್ನ ಶಿಷ್ಯರಿಗೆ, ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನ ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತಮಾಡಿದನು.
46 And after he had taken leave of them, he went up on the mountain to pray. ಆತನು ಜನರನ್ನು ಕಳುಹಿಸಿಕೊಟ್ಟ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು.
47 When evening came, the boat was out on the sea, and he was alone on the land. ಸಂಜೆಯಾದಾಗ ದೋಣಿಯು ಸಮುದ್ರದ ನಡುವೆ ಇತ್ತು; ಯೇಸು ಒಬ್ಬನೇ ದಡದಲ್ಲಿದ್ದನು.
48 He saw them straining at the oars, for the wind was against them. Around three in the morning he came to them, walking on the sea. He meant to pass by them, ಎದುರು ಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಗೋಲು ಹಾಕಿ ದಣಿದು ಹೋದದ್ದನ್ನು ಯೇಸು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು.
49 but seeing him walk on the sea, they thought it was a ghost and cried out, ಆದರೆ ಸಮುದ್ರದ ಮೇಲೆ ನಡೆಯುವ ಆತನನ್ನು ಅವರು ಕಂಡು ಭೂತವೆಂದು ಭಾವಿಸಿ ಅಬ್ಬರಿಸಿ ಕೂಗಿದರು; ಏಕೆಂದರೆ ಅವರೆಲ್ಲರೂ ಆತನನ್ನು ನೋಡಿ ಭಯಭೀತರಾಗಿದ್ದರು.
50 for all saw him and were terrified; but immediately he spoke to them, saying, "Take heart; it is I. Do not be afraid." ಕೂಡಲೆ ಆತನು ಅವರನ್ನು ಮಾತನಾಡಿಸಿ ಅವರಿಗೆ, “ಧೈರ್ಯವಾಗಿರಿ, ನಾನೇ, ಹೆದರಬೇಡಿರಿ” ಎಂದು ಹೇಳಿದನು.
51 He got into the boat with them, and the wind stopped; they were completely amazed among themselves, ತರುವಾಯ ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಆ ಬಿರುಗಾಳಿಯು ನಿಂತುಹೋಯಿತು. ಆಗ ಅವರು ತಮ್ಮೊಳಗೆ ಬಹು ಆಶ್ಚರ್ಯಪಟ್ಟರು.
52 for they did not understand about the loaves, but their hearts were hardened. ಏಕೆಂದರೆ ಅವರು ರೊಟ್ಟಿಯ ವಿಷಯವಾದ ಮಹತ್ಕಾರ್ಯವನ್ನು ಗ್ರಹಿಸಿರಲಿಲ್ಲ; ಅವರ ಹೃದಯವು ಕಠಿಣವಾಗಿತ್ತು.
53 When they had crossed over, they came to land at Gennesaret and moored to the shore. ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪ್ರದೇಶದ ದಡಕ್ಕೆ ಮುಟ್ಟಿ ದೋಣಿಯನ್ನು ಕಟ್ಟಿದರು.
54 And when they got out of the boat, the people immediately recognized him. ಅವರು ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದು,
55 They ran through that whole region and began carrying the sick on mats to wherever they heard he was. ಆ ಸೀಮೆಯಲ್ಲೆಲ್ಲಾ ಓಡಾಡಿ ರೋಗಿಯಾಗಿದ್ದವರನ್ನು ದೋಲಿಯ ಮೇಲೆ ಹಾಕಿಕೊಂಡು ಆತನು ಎಲ್ಲಿದ್ದಾನೆಂದು ಕೇಳಿದರೋ ಅಲ್ಲಿಗೆ ತೆಗೆದುಕೊಂಡು ಹೋದರು.
56 Wherever he went—villages, towns, countryside—they laid the sick in the marketplaces, begging to touch just the edge of his cloak. All who touched it were healed. ಆತನು ಯಾವ ಗ್ರಾಮಗಳಿಗೆ, ಯಾವ ಊರು ಹಳ್ಳಿಗಳಿಗೆ ಹೋದರೂ ಅಲ್ಲಿಯವರು ರೋಗಿಗಳನ್ನು ತಂದು ಸಂತೆಬೀದಿಗಳಲ್ಲಿ ಇಟ್ಟು, ಆತನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]