Skip to content
The Believer's Library

Indian Revised Version (IRV) Kannada - 2019

Mark 7 IRVKan

Show IRVKan only
Verse × ×
1 The Pharisees and some of the scribes who had come from Jerusalem gathered around Jesus, ತರುವಾಯ ಯೆರೂಸಲೇಮಿನಿಂದ ಬಂದಿದ್ದ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೇಸುವಿನ ಬಳಿಗೆ ಕೂಡಿ ಬಂದರು.
2 and they saw that some of his disciples were eating bread with unclean hands—that is, unwashed. ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ ಅಂದರೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.
3 (For the Pharisees and all the Jews don't eat unless they wash their hands ceremonially, keeping the elders' tradition. ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಪದ್ಧತಿಯಂತೆ ತಮ್ಮ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಆಹಾರ ತೆಗೆದುಕೊಳ್ಳುತ್ತಿರಲಿಲ್ಲ.
4 When they come from the market, they don't eat without washing. They also hold to many other traditions they've received—washing cups, pitchers, and copper vessels.). ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು.
5 Then the Pharisees and scribes asked him, "Why don't your disciples follow the elders' tradition, but eat bread with unclean hands?" ಆದುದರಿಂದ ಫರಿಸಾಯರೂ ಶಾಸ್ತ್ರಿಗಳೂ ಯೇಸುವನ್ನು, “ನಿನ್ನ ಶಿಷ್ಯರು ಹಿರಿಯರ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?” ಎಂದು ಕೇಳಿದರು.
6 He replied, "Isaiah prophesied truly about you hypocrites, as written: 'These people honor me with their lips, but their heart is far from me.' ಅದಕ್ಕೆ ಆತನು, “ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ: “‘ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ, ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ.
7 'They worship me in vain, teaching as doctrines the commandments of men.' ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ ನನಗೆ ಆರಾಧನೆ ಮಾಡುವುದು ವ್ಯರ್ಥ’ ಎಂಬುದೇ.
8 You abandon the commandment of our Father and hold to the tradition of men." ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ನೇಮಿಸಿದ ಸಂಪ್ರದಾಯಗಳನ್ನು ಬಿಡದೆ ಹಿಡಿದುಕೊಂಡಿದ್ದೀರಿ” ಎಂದು ಹೇಳಿದನು.
9 He said to them, "You do a fine job setting aside our Father's commandment to keep your own tradition!" ಆತನು ಇನ್ನೂ ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ;
10 For Moses said, 'Honor your father and your mother,' and 'Whoever curses father or mother must be executed.' ‘ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು ‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ.
11 "But you say: if anyone tells his father or mother, 'Whatever you'd have gained from me is Corban' (a gift devoted to our Father), ನೀವಾದರೋ ‘ಒಬ್ಬನು ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ನೋಡಿ, ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ಕೊರ್ಬಾನ್ (ಅಂದರೆ ದೇವರಿಗೆ ಮುಡಿಪು) ಮಾಡಿದ್ದೇನೆ’ ಎಂದು ಹೇಳುವುದಾದರೆ
12 then you no longer let him do anything for his father or mother. ಅವನು ತನ್ನ ತಂದೆಗಾಗಲಿ, ತಾಯಿಗಾಗಲಿ ಇನ್ನೇನೂ ಸಹಾಯ ಮಾಡಬೇಕಾಗಿಲ್ಲ ಎಂದು ಹೇಳುತ್ತೀರಿ.
13 So you cancel the word of our Father with your handed-down tradition. You do many things like this." ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ” ಎಂದು ಹೇಳಿದನು.
14 He called the crowd again and said to them, "Listen to me, all of you, and understand: ಆ ಮೇಲೆ ಯೇಸು ಜನರ ಗುಂಪನ್ನು ಪುನಃ ಹತ್ತಿರಕ್ಕೆ ಕರೆದು, “ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ ಮತ್ತು ಅರ್ಥ ಮಾಡಿಕೊಳ್ಳಿರಿ.
15 Nothing outside a person entering him can make him unclean; rather, what comes out of a person is what makes him unclean." ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ” ಎಂದು ಹೇಳಿದನು.
16 Not in this edition “ಯಾರಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ” ಅಂದನು.
17 When he had left the crowd and entered the house, his disciples asked him about the parable. ತರುವಾಯ ಆತನು ಜನರನ್ನು ಬಿಟ್ಟು ಮನೆಯೊಳಗೆ ಹೋದಾಗ ಆತನ ಶಿಷ್ಯರು ಆ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಲು
18 He said to them, "Are you also this dull? Don't you understand nothing entering a person from outside can make him unclean, ಆತನು ಅವರಿಗೆ, “ನಿಮಗೆ ಇನ್ನೂ ತಿಳಿವಳಿಕೆಯಿಲ್ಲವೇ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದು,
19 since it doesn't enter his heart but his stomach, and then goes out into the sewer?" (Saying this, he declared all foods clean.). ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ, ಬಳಿಕ ಹೊರಗೆ ವಿಸರ್ಜಿಸಲ್ಪಡುತ್ತದೆ. ಅವು ಅವನನ್ನು ಅಶುದ್ಧ ಮಾಡಲಾರದೆಂದು ನಿಮಗೆ ಅರ್ಥವಾಗುವುದಿಲ್ಲವೋ?” ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ಆಹಾರ ಪದಾರ್ಥಗಳೆಲ್ಲಾ ಶುದ್ಧವೆಂದು ಯೇಸು ಸೂಚಿಸಿದನು.
20 He said, "What comes out of a person—that makes him unclean. ಆತನು ಮತ್ತೆ ಹೇಳಿದ್ದೇನೆಂದರೆ, “ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ;
21 For from within, out of the human heart, come evil thoughts—sexual sin, theft, murder, ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,
22 adultery, greed, malice, deceit, sensuality, envy, slander, pride, and foolishness. ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ.
23 All these evils come from inside and make a person unclean." ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ.”
24 Jesus left there for the region of Tyre. He entered a house, wanting no one to know, but couldn't stay hidden. ಯೇಸು ಅಲ್ಲಿಂದ ಹೊರಟು ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು.
25 Instead, a woman whose little daughter had an unclean spirit heard about him at once, came, and fell at his feet. ಕೂಡಲೆ ಒಬ್ಬ ಹೆಂಗಸು ಆತನ ಸುದ್ದಿಯನ್ನು ಕೇಳಿ ಬಂದು ಆತನ ಪಾದಕ್ಕೆ ಬಿದ್ದಳು. ಆಕೆಯ ಮಗಳಿಗೆ ದೆವ್ವ ಹಿಡಿದಿತ್ತು.
26 The woman was Greek, Syrophoenician by birth. She kept asking him to drive the demon out of her daughter. ಆ ಹೆಂಗಸು ಸುರೋಪೊಯಿನಿಕ್ಯದಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ಆಕೆಯು ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ,
27 He told her, "Let the children eat first, for it's not right to take their bread and toss it to the dogs." ಆತನು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಹೇಳಿದನು.
28 But she replied to him, "Sir, even the dogs under the table eat the children's crumbs." ಆದರೆ ಅದಕ್ಕೆ ಆಕೆಯು, “ಹೌದು ಕರ್ತನೇ, ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ” ಎಂದು ಉತ್ತರಕೊಡಲು
29 He said to her, "Because of this answer, go—the demon has left your daughter." ಆತನು, “ಆಕೆಗೆ ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು” ಅಂದನು.
30 And she went home and found the child lying on the bed, and the demon gone. ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು.
31 Then Jesus left the territory of Tyre, went through Sidon to the Sea of Galilee, into the region of the Decapolis. ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು.
32 They brought him a deaf man who could hardly speak, begging him to lay his hand on him. ಆಗ ಕೆಲವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರೆದುಕೊಂಡು ಬಂದು, ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು.
33 Jesus took him aside privately, away from the crowd, put his fingers in the man's ears, spit, and touched his tongue. ಆತನು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟನು ಮತ್ತು ಉಗುಳಿ ನಂತರ ಅವನ ನಾಲಿಗೆಯನ್ನು ಮುಟ್ಟಿ,
34 Then, looking up to heaven, he sighed deeply and said to him, "Ephphatha!" (that is, "Be opened!"). ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, “ಎಪ್ಫಥಾ” ಎಂದು ಹೇಳಿದನು. ಆ ಶಬ್ದಕ್ಕೆ “ತೆರೆಯಲಿ” ಎಂದರ್ಥ.
35 And immediately his ears were opened, his tongue was released, and he began to speak plainly. ಹೇಳುತ್ತಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು; ಅವನು ಸ್ಪಷ್ಟವಾಗಿ ಮಾತನಾಡಿದನು.
36 Jesus ordered them to tell no one; but the more he ordered, the more they proclaimed it. ಆಗ ಆತನು, ಇದನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಕಟ್ಟಪ್ಪಣೆ ಮಾಡಿದನು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಪ್ರಚಾರ ಮಾಡಿದರು.
37 They were completely amazed: "He has done everything well—he makes the deaf hear and the mute speak." ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]