Skip to content
The Believer's Library

Indian Revised Version (IRV) Kannada - 2019

Mark 8 IRVKan

Show IRVKan only
Verse × ×
1 In those days, again a large crowd gathered with nothing to eat. Jesus called his disciples and said, ಆ ದಿನಗಳಲ್ಲಿ ಜನರು ಪುನಃ ದೊಡ್ಡಗುಂಪಾಗಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು,
2 "I feel compassion for the crowd—they've been with me three days now and have nothing to eat. “ಈ ಜನರನ್ನು ನೋಡಿ ಕನಿಕರಪಡುತ್ತೇನೆ, ಏಕೆಂದರೆ ಮೂರು ದಿನಗಳಿಂದ ಇವರು ನನ್ನ ಬಳಿಯಲ್ಲಿದ್ದಾರೆ; ಇವರಿಗೆ ಊಟಕ್ಕೆ ಏನೂ ಇಲ್ಲ.
3 If I send them home hungry, they'll collapse on the way—some have come from far off." ಇವರನ್ನು ಹಸಿವೆಯಿಂದ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರಲ್ಲಾ” ಎಂದು ಅವರಿಗೆ ಹೇಳಿದನು.
4 And his disciples answered him, "How can anyone feed these people with bread here in the wilderness?" ಅದಕ್ಕೆ ಶಿಷ್ಯರು, “ಈ ಅಡವಿಯಲ್ಲಿ ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತಂದು ಈ ಜನರನ್ನು ತೃಪ್ತಿಪಡಿಸುವುದಕ್ಕಾದೀತು?” ಅಂದರು.
5 And he asked them, "How many loaves do you have?" They said, "Seven." ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಅವರನ್ನು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳು ಇವೆ” ಅಂದರು.
6 He told the crowd to sit on the ground, took the seven loaves, gave thanks, broke them, and gave them to his disciples to serve to the people; and they served the crowd. ಆಗ ಯೇಸು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು, ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.
7 They also had a few small fish; after blessing them, he told the disciples to serve these to the people. ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು; ಆತನು ಅವುಗಳಿಗಾಗಿ ದೇವರಿಗೆ ಸ್ತೋತ್ರಮಾಡಿ, ಇವುಗಳನ್ನೂ ಹಂಚಿಕೊಡಿರಿ ಎಂದು ಶಿಷ್ಯರಿಗೆ ಅಪ್ಪಣೆ ಕೊಟ್ಟನು.
8 And they ate and were satisfied. And they took up seven baskets of the leftover pieces. ಜನರು ತಿಂದು ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು.
9 About 4,000 people were there. And he sent them away. ಊಟಮಾಡಿದವರು ಹೆಚ್ಚುಕಡಿಮೆ ನಾಲ್ಕು ಸಾವಿರ ಗಂಡಸರಿದ್ದರು.
10 Then immediately he got into the boat with his disciples and went to the district of Dalmanutha. ಆತನು ಅವರನ್ನು ಕಳುಹಿಸಿದ ನಂತರ ಕೂಡಲೆ ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿ ದಲ್ಮನೂಥ ಸೀಮೆಗೆ ಬಂದನು.
11 The Pharisees came and began debating with him, testing him by demanding a sign from heaven. ತರುವಾಯ ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಆತನನ್ನು ಪರೀಕ್ಷಿಸುವ ಉದ್ದೇಶದಿಂದ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.
12 Sighing deeply in his spirit, he said, "Why does this generation demand a sign? Truly I tell you, no sign will be given to this generation." ಯೇಸು ಅದನ್ನು ಕೇಳಿ ತನ್ನ ಆತ್ಮದಲ್ಲಿ ನಿಟ್ಟುಸಿರುಬಿಟ್ಟು, “ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವುದು ಏಕೆ? ನಿಮಗೆ ನಾನು ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡುವುದಿಲ್ಲ, ಇದು ಖಂಡಿತ” ಎಂದು ಹೇಳಿದನು.
13 And he left them, got back into the boat, and went to the other side. ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೋದನು.
14 They'd forgotten to bring bread—only one loaf was with them in the boat. ಆದರೆ ಶಿಷ್ಯರು ರೊಟ್ಟಿಯನ್ನು ತೆಗೆದುಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಅವರ ಹತ್ತಿರ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಏನೂ ಇರಲಿಲ್ಲ.
15 And he warned them, "Watch out—beware of the yeast of the Pharisees and the yeast of Herod." ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು.
16 And they began discussing with one another that they had no bread. ಅವರು, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು” ಎಂದು ತಮ್ಮೊಳಗೆ ಚರ್ಚಿಸಿಕೊಂಡರು.
17 Knowing this, Jesus asked, "Why discuss having no bread? Do you still not see or grasp? Are your hearts hardened? ಆತನು ಅದನ್ನು ತಿಳಿದು, “ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?
18 Having eyes, do you not see? Having ears, do you not hear? And do you not remember? ಕಣ್ಣಿದ್ದು ಕಾಣುವುದಿಲ್ಲವೋ? ಕಿವಿಯಿದ್ದು ಕೇಳುವುದಿಲ್ಲವೋ? ನಿಮಗೆ ನೆನಪಿಲ್ಲವೋ?
19 When I broke the five loaves for the 5,000, how many baskets full of fragments did you collect?" They said, "Twelve." ನಾನು ಆ ಐದು ರೊಟ್ಟಿಗಳನ್ನು ಮುರಿದು ಐದು ಸಾವಿರ ಜನರಿಗೆ ಹಂಚಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ತೆಗೆದುಕೊಂಡು ಹೋದಿರಿ?” ಎಂದು ಕೇಳಿದನು. ಅವರು, “ಹನ್ನೆರಡು ಬುಟ್ಟಿಗಳು” ಅಂದರು.
20 "And when I broke the seven for the 4,000, how many basketfuls of broken pieces did you gather?" They said, "Seven." “ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದು ಹಂಚಿಸಿದ ನಂತರ ಎಷ್ಟು ಪುಟ್ಟಿಗಳನ್ನು ತೆಗೆದುಕೊಂಡು ಹೋದಿರಿ” ಎಂದು ಕೇಳಿದನು. ಅವರು, “ಏಳು ಪುಟ್ಟಿಗಳು” ಅಂದರು.
21 And he said to them, "Do you still not understand?" ಆಗ ಆತನು ಅವರಿಗೆ, “ನೀವು ಇನ್ನೂ ಗ್ರಹಿಸಲಿಲ್ಲವೋ?” ಎಂದು ಕೇಳಿದನು.
22 They came to Bethsaida, where people brought him a blind man and begged Jesus to touch the man. ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದು, ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು.
23 He took the blind man's hand, led him out of the village, spit on his eyes, laid hands on him, and asked, "Do you see anything?" ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು.
24 He looked up and said, "I see people, but they look like trees, walking." ಅವನು ತಲೆಯೆತ್ತಿ ನೋಡಿ, “ನನಗೆ ಜನರು ಕಾಣುತ್ತಾರೆ; ಆದರೆ ಅವರು ನಡೆದಾಡುವ ಮರಗಳಂತೆ ಕಾಣಿಸುತ್ತಿದ್ದಾರೆ” ಎಂದನು.
25 Then Jesus put his hands on the man's eyes again; he looked intently, was restored, and saw everything distinctly. ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.
26 And he sent him home, saying, "Do not even go into the village." ತರುವಾಯ ಆತನು, “ನೀನು ಊರೊಳಗೆ ಹೋಗಬೇಡ” ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿಬಿಟ್ಟನು.
27 Jesus and his disciples went to the villages of Caesarea Philippi. On the way he asked them, "Who do people say I am?" ಯೇಸುವೂ ಆತನ ಶಿಷ್ಯರೂ ಫಿಲಿಪ್ಪನ ಕೈಸರೈಯ ಎಂಬ ಪಟ್ಟಣಕ್ಕೆ ಸೇರಿದ ಗ್ರಾಮಗಳಿಗೆ ಹೊರಟರು. ದಾರಿಯಲ್ಲಿ ಆತನು, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ತನ್ನ ಶಿಷ್ಯರನ್ನು ಕೇಳಿದನು.
28 They told him, "John the Baptist; and others say Elijah; and others, one of the prophets." ಅದಕ್ಕೆ ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ” ಎಂದು ಹೇಳಿದರು.
29 Then he asked them, "But who do you say I am?" Peter answered, "You are the Christ." ಆತನು ಅವರನ್ನು, ಕುರಿತು “ನೀವು ನನ್ನನ್ನು ಯಾರನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ಕ್ರಿಸ್ತನು” ಎಂದು ಉತ್ತರಕೊಟ್ಟನು.
30 And he strictly warned them not to speak about him. ಅದಕ್ಕೆ ಆತನು, “ನನ್ನ ವಿಷಯವಾಗಿ ಯಾರಿಗೂ ಹೇಳಬೇಡಿರಿ” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದನು.
31 He began teaching them the Son of Man must suffer much, be rejected by the elders, chief priests, and scribes, be killed, and rise after three days. ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.
32 He said this plainly. And Peter took him aside and began to rebuke him. ಆತನು ಈ ಮಾತನ್ನು ಸ್ಪಷ್ಟವಾಗಿ ಹೇಳಿದನು. ಆಗ ಪೇತ್ರನು ಆತನನ್ನು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ “ನೀನು ಹೀಗೆ ಹೇಳುವುದು ಸರಿಯಲ್ಲ” ಎಂದು ಗದರಿಸಿದನು.
33 But turning, he looked at his disciples and rebuked Peter: "Get behind me, Satan! For you are not setting your mind on the things of our Father, but on the things of man." ಆದರೆ ಯೇಸು ಹಿಂತಿರುಗಿ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ” ಎಂದು ಹೇಳಿದನು.
34 He called the crowd and his disciples and said to them, "Whoever wants to come after me must deny himself, take up his cross, and follow me. ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
35 Whoever wants to save his life will lose it; whoever loses his life for my sake and the good news will save it. ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.
36 What good does it do a person to gain the whole world and forfeit his soul? ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
37 For what can a person give in exchange for his soul? ಒಬ್ಬನು ತನ್ನ ಪ್ರಾಣಕ್ಕೆ ಬದಲಾಗಿ ಏನು ಈಡು ಕೊಡಲಾದೀತು?
38 For whoever is ashamed of me and my words in this adulterous, sinful generation—the Son of Man will be ashamed of them too when he comes in his Father's glory with the holy angels." ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]