Skip to content
The Believer's Library

Indian Revised Version (IRV) Kannada - 2019

Matthew 2 IRVKan

Show IRVKan only
Verse × ×
1 After Jesus was born in Bethlehem, Judea, in the days of King Herod, magi from the east arrived in Jerusalem, ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು,
2 saying, "Where is the one born king of the Jews? For we saw his star in the east and have come to worship him." “ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು.
3 When Herod the king heard this, he was troubled, and all Jerusalem with him. ಇದನ್ನು ಕೇಳಿ ಅರಸನಾದ ಹೆರೋದನು ತಳಮಳಪಟ್ಟನು ಮತ್ತು ಅವನೊಂದಿಗೆ ಯೆರೂಸಲೇಮಿನವರೆಲ್ಲರೂ ಕಳವಳಪಟ್ಟರು.
4 He gathered all the people's chief priests and scribes, asking where the Christ was to be born. ಅವನು ಯೆಹೂದ್ಯರ ಎಲ್ಲಾ ಮುಖ್ಯಯಾಜಕರನ್ನೂ ಶಾಸ್ತ್ರಿಗಳನ್ನೂ ಕೂಡಿಸಿ, “ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ” ಎಂದು ಅವರನ್ನು ಕೇಳಿದನು.
5 They told him, "In Bethlehem of Judea, for this is what was written through the prophet: ಅವರು ಅವನಿಗೆ, “ಯೂದಾಯದ ಬೇತ್ಲೆಹೇಮಿನಲ್ಲಿಯೇ; ಏಕೆಂದರೆ,
6 'Yet you, Bethlehem, in Judah's land, are certainly not the least among Judah's rulers; for from you a ruler will emerge who will shepherd Israel, my people.'" “‘ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ. ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’ ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು.
7 Then Herod secretly summoned the magi and learned from them the exact time the star had appeared. ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಕಾಣಿಸಿದ ಗಳಿಗೆಯನ್ನು ಅವರಿಂದ ನಿಖರವಾಗಿ ತಿಳಿದುಕೊಂಡು,
8 He sent them to Bethlehem, saying, "Go, search carefully for the child. When you find him, come back and tell me, so that I too may go and worship him." “ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ; ನಾನು ಸಹ ಬಂದು ಆ ಕೂಸಿಗೆ ಅಡ್ಡಬಿದ್ದು ನಮಸ್ಕರಿಸುವೆನು” ಎಂದು ಹೇಳಿ ಜ್ಞಾನಿಗಳನ್ನು ಬೇತ್ಲೆಹೇಮಿಗೆ ಕಳುಹಿಸಿಕೊಟ್ಟನು.
9 After hearing the king, they set out; the star they had seen in the east went ahead of them until it stopped over where the child was. ಅವರು ಅರಸನ ಮಾತನ್ನು ಕೇಳಿ ಹೊರಟಾಗ ಪೂರ್ವದಿಕ್ಕಿನಲ್ಲಿ ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು ಆ ಕೂಸು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದಾಗಿ ಹೋಗುತಿತ್ತು.
10 When they saw the star, they rejoiced with overwhelming joy. ಅವರು ನಕ್ಷತ್ರವನ್ನು ಕಂಡು ಪರಮಾನಂದದಿಂದ ಸಂತೋಷಿಸಿದರು.
11 Entering the house, they saw the child with Mary his mother, fell down and worshiped him. They opened their treasure boxes and gave him gifts: gold, frankincense, and myrrh. ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು.
12 Warned in a dream not to return to Herod, they went back to their own country by a different route. ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.
13 After they left, an angel of our Father appeared to Joseph in a dream: "Get up, take the child and his mother, flee to Egypt, and stay until I tell you—Herod is about to search for the child to kill him." ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಎದ್ದು ಕೂಸನ್ನೂ, ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಓಡಿಹೋಗು, ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು” ಎಂದನು.
14 And he got up and took the child and his mother by night and left for Egypt, ಅದೇ ರಾತ್ರಿ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಹೆರೋದನು ತೀರಿಹೋಗುವ ತನಕ ಅವರು ಅಲ್ಲೇ ಇದ್ದರು.
15 and stayed there until Herod died, fulfilling what our Father said through the prophet: "Out of Egypt I called my son." ಹೀಗೆ, “ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು” ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು.
16 Then Herod, seeing the magi had outwitted him, grew furious and sent men to kill all boys two years old and under in Bethlehem and its whole region, matching the time he'd learned from the magi. ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.
17 This fulfilled what was spoken through Jeremiah the prophet: ಯೆರೆಮೀಯನೆಂಬ ಪ್ರವಾದಿಯು ಹೇಳಿದ ಮಾತು ಹೀಗೆ ನೆರವೇರಿತು; ಅದೇನೆಂದರೆ,
18 "A voice was heard in Ramah, weeping and loud mourning, Rachel weeping for her children; she refused to be comforted, because they are no more." “ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಆಕ್ರಂದನವೂ ಬಹು ಗೋಳಾಟವೂ ಉಂಟಾದವು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಗೋಳಾಡಿ ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದಲಾರದೆ ಇದ್ದಳು” ಎಂಬುದೇ.
19 But when Herod died, an angel of our Father appeared in a dream to Joseph in Egypt, ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು,
20 saying, "Get up, take the child and his mother, go to Israel's land, for those seeking the child's life are dead." “ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತು ಹೋದರು” ಎಂದು ಹೇಳಿದನು.
21 So he got up, took the child and his mother, and went to Israel's land. ಆಗ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು.
22 Hearing that Archelaus was ruling Judea in place of his father Herod, he was afraid to go there. Warned in a dream, he withdrew to the region of Galilee. ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು.
23 He went and lived in a town called Nazareth, fulfilling the prophets' words: "He will be called a Nazarene." ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]