Skip to content
The Believer's Library

Indian Revised Version (IRV) Kannada - 2019

Matthew 3 IRVKan

Show IRVKan only
Verse × ×
1 In those days John the Baptist came, preaching in the wilderness of Judea, ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನೆಂಬುವವನು ಯೂದಾಯದ ಅಡವಿಯಲ್ಲಿ ಬೋಧನೆ ಮಾಡುತ್ತಾ,
2 "Repent, for the kingdom of our Father has come near." ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”
3 This is the one Isaiah the prophet spoke of, saying: "A voice calling out in the wilderness: Prepare the way of the Lord, make his paths straight." “‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಮಾರ್ಗವನ್ನು ಸರಾಗ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವಿದೆ” ಎಂಬುದಾಗಿ ಪ್ರವಾದಿಯಾದ ಯೆಶಾಯನಿಂದ ಸೂಚಿತನಾದವನು ಇವನೇ.
4 John wore clothes of camel hair, with a leather belt around his waist; his food was locusts and wild honey. ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.
5 Then Jerusalem and all Judea and all the region around the Jordan went out to him, ಆಗ ಯೆರೂಸಲೇಮಿನವರು, ಎಲ್ಲಾ ಯೂದಾಯದವರೂ ಮತ್ತು ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯ ಜನರು ಅವನ ಬಳಿಗೆ ಹೊರಟು ಬಂದು,
6 and they were baptized by him in the Jordan River, confessing their sins. ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
7 Seeing many Pharisees and Sadducees coming to be baptized, he said to them, "You brood of vipers! Who warned you to flee the coming wrath? ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?
8 Bear fruit, then, worthy of repentance. ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ.
9 Don't presume to say to yourselves, 'Abraham is our father,' for I tell you: our Father can raise up children for Abraham from these stones. ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.
10 The axe already lies at the root of the trees, so every tree not bearing good fruit is cut down and thrown into the fire. ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.
11 "I baptize you with water for repentance, but the one coming after me is stronger than I am—I'm not worthy to carry his sandals. He will baptize you with the Holy Spirit and fire. ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.
12 His winnowing fork is in his hand; he'll clear his threshing floor, gather his wheat into the barn, but burn the chaff with fire that never goes out." ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.
13 Then Jesus came from Galilee to the Jordan to John, to be baptized by him. ಆ ಕಾಲದಲ್ಲಿ ಯೇಸು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್ ಹೊಳೆಯ ಬಳಿ ಬಂದನು.
14 But John tried to stop him: "I need baptism from you, yet you come to me?" ಆತನಿಗೆ ಯೋಹಾನನು ತಡೆಯುತ್ತಾ, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿತ್ತು, ಆದರೆ ನೀನು ನನ್ನ ಬಳಿಗೆ ಬರುವುದೇಕೆ?” ಎಂದು ಹೇಳಿದಕ್ಕೆ,
15 Jesus replied to him, "Allow it now, for this is how we must fulfill all righteousness." So John allowed him. ಯೇಸು ಪ್ರತ್ಯುತ್ತರವಾಗಿ ಅವನಿಗೆ, “ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.
16 After Jesus was baptized, he came up out of the water at once, and suddenly the heavens opened to him; he saw the Spirit of our Father coming down like a dove and settling on him. ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು.
17 Then a voice from heaven said, "This is my Son, the one I love; I delight in him." ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]