Skip to content
The Believer's Library

Indian Revised Version (IRV) Kannada - 2019

Numbers 1 IRVKan

Show IRVKan only
Verse × ×
1 Our Father spoke to Moses in the Sinai wilderness, in the tent of meeting, on the first day of the second month of the second year after they left the land of Egypt. He said: ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಯೆಹೋವನು ಮೋಶೆಯ ಸಂಗಡ ಹೀಗೆ ಮಾತನಾಡಿದನು,
2 "Count the whole community of Israel's people, by clans and fathers' houses—every male, by name, head by head. “ಇಸ್ರಾಯೇಲರ ಸರ್ವಸಮೂಹದ ಗಂಡಸರನ್ನು ಗೋತ್ರದ ಕುಟುಂಬಗಳ ಪ್ರಕಾರ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಲೆಕ್ಕಿಸಬೇಕು.
3 Register everyone in Israel twenty and older who can serve in the army—you and Aaron—by their divisions. ಇಸ್ರಾಯೇಲರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರನ್ನು ಸೈನ್ಯಸೈನ್ಯವಾಗಿ ನೀನೂ ಆರೋನನೂ ಲೆಕ್ಕಹಾಕಬೇಕು.
4 A man from each tribe is to be with you, each one the head of his family. ಈ ಕೆಲಸಕ್ಕಾಗಿ ಕುಲದಲ್ಲಿ ಆಯಾ ಕುಲದ ಒಂದೊಂದು ಮುಖ್ಯಸ್ಥನಾಗಿರುವ ಒಬ್ಬೊಬ್ಬ ಸಹಾಯಕನಿರಬೇಕು ಹಾಗೂ ತನ್ನ ಕುಲಕ್ಕಾಗಿ ಹೋರಾಡುವ ಜನರನ್ನು ಮುಖ್ಯಸ್ಥನು ಮುನ್ನಡೆಸಬೇಕು.
5 "Names of the men who will stand with you: from Reuben, Elizur son of Shedeur. ನಿಮಗೆ ಸಹಾಯಮಾಡಬೇಕಾದ ಪುರುಷರು ಯಾರಾರೆಂದರೆ: ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್,
6 "From Simeon, Shelumiel son of Zurishaddai; ಸಿಮೆಯೋನ್ ಕುಲದಿಂದ ಚೂರೀಷದ್ದೈಯ ಮಗನಾದ ಶೆಲುಮೀಯೇಲ್,
7 "From Judah, Nahshon son of Amminadab; ಯೆಹೂದ ಕುಲದಿಂದ ಅಮ್ಮೀನಾದಾಬನ ಮಗನಾದ ನಹಶೋನ್,
8 "From Issachar, Nethanel son of Zuar; ಇಸ್ಸಾಕಾರ್ ಕುಲದಿಂದ ಚೂವಾರನ ಮಗನಾದ ನೆತನೇಲ್,
9 "From Zebulun, Eliab son of Helon; ಜೆಬುಲೂನ್ ಕುಲದಿಂದ ಹೇಲೋನನ ಮಗನಾದ ಎಲೀಯಾಬ್,
10 "From the sons of Joseph: from Ephraim, Elishama son of Ammihud; from Manasseh, Gamaliel son of Pedahzur; ಯೋಸೇಫನ ವಂಶದವರಲ್ಲಿ: ಎಫ್ರಾಯೀಮ್ ಕುಲದಿಂದ ಅಮ್ಮೀಹೂದನ ಮಗನಾದ ಎಲೀಷಾಮಾ, ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್,
11 "From Benjamin, Abidan son of Gideoni; ಬೆನ್ಯಾಮೀನ್ ಕುಲದಿಂದ ಗಿದ್ಯೋನಿಯ ಮಗನಾದ ಅಬೀದಾನ್,
12 "From Dan, Ahiezer son of Ammishaddai; ದಾನ್ ಕುಲದಿಂದ ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್,
13 "From Asher, Pagiel son of Ochran; ಆಶೇರ್ ಕುಲದಿಂದ ಒಕ್ರಾನನ ಮಗನಾದ ಪಗೀಯೇಲ್,
14 "From Gad, Eliasaph son of Deuel; ಗಾದ್ ಕುಲದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್,
15 "From Naphtali, Ahira son of Enan. ನಫ್ತಾಲಿ ಕುಲದಿಂದ ಏನಾನನ ಮಗನಾದ ಅಹೀರ.”
16 "These were the community's called ones, leaders of their ancestral tribes, heads of Israel's clans." ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಕುಲಗಳಲ್ಲಿ ಪ್ರಧಾನಪುರುಷರು ಹಾಗೂ ಇಸ್ರಾಯೇಲಿನ ಕುಲಗಳ ಪ್ರಮುಖರು.
17 So Moses and Aaron took these men who had been designated by name, ಹೆಸರಿನಿಂದ ಸೂಚಿತರಾದ ಈ ಪುರುಷರನ್ನು ಮೋಶೆಯು ಮತ್ತು ಆರೋನನು ಆರಿಸಿಕೊಂಡರು.
18 on the first day of the second month they gathered the whole community. The people registered their ancestry by clan and family—every male twenty years old and older, listed by name, one by one, ಅವರು ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಇಪ್ಪತ್ತು ವರ್ಷ ಹಾಗೂ ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮತಮ್ಮ ವಂಶಾವಳಿಯನ್ನು ಬರೆಯಿಸಿಕೊಂಡರು.
19 as our Father had commanded Moses. So Moses counted them in the wilderness of Sinai. ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮೋಶೆ ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿ ಮೊಟ್ಟಮೊದಲು ಜನಗಣತಿ ಪ್ರಾರಂಭಿಸಿದನು.
20 From Reuben's descendants, Israel's firstborn: recorded by clan and family, name by name, every male twenty years old and up, able to serve in war. ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು.
21 Those counted from the tribe of Reuben were 46,500. ರೂಬೇನನ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 46,500 ಮಂದಿ.
22 Simeon's descendants, by clans and families, counted by name, head by head: every male twenty years old and up, fit for the army. ಸಿಮೆಯೋನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
23 Those counted from the tribe of Simeon were 59,300. ಸಿಮೆಯೋನನ ಗೋತ್ರದಲ್ಲಿ ಎಣಿಕೆಯಾದ ಗಂಡಸರು - 59,300 ಮಂದಿ.
24 From Gad's descendants: by clans, families, and names, every man twenty and older fit for military service. ಗಾದ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು.
25 Those counted from the tribe of Gad were 45,650. ಗಾದ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 45,650 ಮಂದಿ.
26 Judah's descendants, listed by clans and families, by name, every man twenty and older able to serve in the army: ಯೆಹೂದ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
27 those counted from the tribe of Judah were 74,600. ಯೆಹೂದ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 74,600 ಮಂದಿ.
28 Issachar's descendants, listed by clan and family, by name, every man twenty years and older fit for war: ಇಸ್ಸಾಕಾರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
29 those counted from the tribe of Issachar were 54,400. ಇಸ್ಸಾಕಾರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 54,400 ಮಂದಿ.
30 Zebulun's descendants: registered by clan and family, by name, every man twenty years old or older fit for military service. ಜೆಬುಲೂನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
31 Those counted from the tribe of Zebulun were 57,400. ಜೆಬುಲೂನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 57,400 ಮಂದಿ.
32 Sons of Joseph, Ephraim's line: recorded by clan and family, by name, every man twenty and older fit for military service. ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
33 Those counted from the tribe of Ephraim were 40,500. ಎಫ್ರಾಯೀಮ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 40,500 ಮಂದಿ.
34 Manasseh's descendants, listed by clans and families, by name, each man twenty years or older able to serve in the army: ಮನಸ್ಸೆ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
35 those counted from the tribe of Manasseh were 32,200. ಮನಸ್ಸೆ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 32,200 ಮಂದಿ.
36 From Benjamin's descendants, recorded by clan and family, by name, every man twenty years old and older, fit for military service: ಬೆನ್ಯಾಮೀನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
37 those counted from the tribe of Benjamin were 35,400. ಬೆನ್ಯಾಮೀನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 35,400 ಮಂದಿ.
38 From Dan's descendants, listed by clan and family, by name, every man twenty years old and older fit for war: ದಾನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
39 those counted from the tribe of Dan were 62,700. ದಾನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 62,700 ಮಂದಿ.
40 Asher's descendants, listed by clan and family, by name: every man twenty years old and up, fit for military service. ಆಶೇರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
41 Those counted from the tribe of Asher were 41,500. ಆಶೇರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 41,500 ಮಂದಿ.
42 Naphtali's descendants: by clan and family, counted by name, every man twenty and older fit for war. ನಫ್ತಾಲಿ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
43 Those counted from the tribe of Naphtali were 53,400. ನಫ್ತಾಲಿ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 53,400 ಮಂದಿ.
44 Moses, Aaron, and Israel's twelve leaders counted these men, each for his family. ಮೋಶೆ, ಆರೋನನೂ ಮತ್ತು ಇಸ್ರಾಯೇಲಿನ ಹನ್ನೆರಡು ಕುಲಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ.
45 All Israel's people were counted by families, every man twenty years old and older, fit to serve in Israel's army. ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರಾಗಿದ್ದು ಸೈನಿಕರಾಗಿ ಹೊರಡತಕ್ಕವರನ್ನು ಲೆಕ್ಕಿಸಿದರು.
46 All those counted came to 603,550. ಗಂಡಸರ ಒಟ್ಟು ಸಂಖ್ಯೆ - 6,03,550 ಮಂದಿ.
47 But the Levites were not counted among them by their ancestral tribe. ಆದರೆ ಅವರೊಡನೆ ಲೇವಿ ಕುಲದ ಕುಟುಂಬಗಳು ಲೆಕ್ಕಿಸಲ್ಪಡಲಿಲ್ಲ.
48 For our Father had said to Moses: ಏಕೆಂದರೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,
49 "Do not count the tribe of Levi or list them among the Israelites. “ನೀನು ಇಸ್ರಾಯೇಲರನ್ನು ಎಣಿಸುವಾಗ ಲೇವಿ ಕುಲದವರನ್ನು ಎಣಿಸಬಾರದು.
50 Instead, put the Levites in charge of the tabernacle of the testimony, all its furnishings, and everything belonging to it. They must carry the tabernacle and its furnishings, care for it, and camp around it. ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
51 When the tabernacle sets out, Levites take it down; when it is pitched, Levites set it up. Any outsider who comes near is to be put to death. ಗುಡಾರವು ಹೊರಡುವಾಗ ಲೇವಿಯರೇ ಅದನ್ನು ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.
52 Israel's people are to camp, each by his own camp, each under his own banner, by their companies. ಇಸ್ರಾಯೇಲರ ಆಯಾ ಸೈನ್ಯಗಳು ತಮ್ಮ ಡೇರೆಗಳನ್ನು ತಮ್ಮತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.
53 The Levites must camp around the tabernacle of the testimony, so no wrath falls on the Israelite community; the Levites are to guard the tabernacle of the testimony." ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”
54 The people of Israel did everything our Father had commanded Moses; that is exactly what they did. ಇಸ್ರಾಯೇಲರು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]