Skip to content
The Believer's Library

Indian Revised Version (IRV) Kannada - 2019

Numbers 3 IRVKan

Show IRVKan only
Verse × ×
1 This is the family line of Aaron and Moses, when our Father spoke with Moses on Mount Sinai. ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡಿದ ಕಾಲದಲ್ಲಿದ್ದ ಮೋಶೆ ಮತ್ತು ಆರೋನರ ವಂಶದವರು.
2 These are the names of the sons of Aaron: Nadab the firstborn, then Abihu, Eleazar, and Ithamar. ಆರೋನನ ಮಕ್ಕಳ ಹೆಸರುಗಳು: ಚೊಚ್ಚಲ ಮಗನಾದ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರೇ.
3 These are the names of Aaron's sons, the anointed priests whom Moses ordained to serve as priests. ಇವರು ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಅಭಿಷೇಕಹೊಂದಿದವರಾಗಿ ಪ್ರತಿಷ್ಠಿತರಾದ ಆರೋನನ ಮಕ್ಕಳು.
4 Nadab and Abihu died before our Father in the wilderness of Sinai when they offered unauthorized fire before him; they had no children. So Eleazar and Ithamar served as priests before Aaron their father. ಆದರೆ ನಾದಾಬ್ ಮತ್ತು ಅಬೀಹೂ ಎಂಬುವವರು ಸೀನಾಯಿ ಮರುಭೂಮಿಯಲ್ಲಿ ಯೆಹೋವನು ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಆತನ ಸನ್ನಿಧಿಯಲ್ಲೇ ಸತ್ತು ಹೋದರು. ಅವರಿಗೆ ಮಕ್ಕಳಿರಲಿಲ್ಲ. ಆದುದರಿಂದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬಿಬ್ಬರು ತಮ್ಮ ತಂದೆಯಾದ ಆರೋನನ ಕೈಕೆಳಗೆ ಯಾಜಕಧರ್ಮವನ್ನು ನಡೆಸಿದರು.
5 Then our Father said to Moses: ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,
6 "Bring the tribe of Levi near and set them before Aaron the priest, to serve him. “ನೀನು ಲೇವಿಯ ಕುಲದವರನ್ನು ಹತ್ತಿರಕ್ಕೆ ಕರೆದು ಅವರು ದೇವರ ಸೇವಕಾರ್ಯಕ್ಕಾಗಿ ಯಾಜಕನಾದ ಆರೋನನ ಕೈಕೆಳಗಿರುವಂತೆ ಅವನ ಮುಂದೆ ನಿಲ್ಲಿಸು.
7 They are to keep his duties and those of the whole community before the tent of meeting, performing the tabernacle's service. “ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು, ಆರೋನನಿಗೋಸ್ಕರವೂ ಸರ್ವಸಮೂಹದವರಿಗೋಸ್ಕರವೂ ದೇವಸ್ಥಾನದ ಸೇವಾಕಾರ್ಯವನ್ನು ನಡೆಸಬೇಕು.
8 They are to guard all the tent of meeting's equipment and the Israelites' duty, doing the tabernacle's service. ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು. ಇಸ್ರಾಯೇಲರಿಗೋಸ್ಕರ ದೇವಸ್ಥಾನದ ಸೇವಕಾರ್ಯವನ್ನು ನಡೆಸಬೇಕು.
9 Give the Levites to Aaron and his sons; they are given entirely to him from among Israel's people. “ನೀನು ಲೇವಿಯರನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಒಪ್ಪಿಸಬೇಕು. ಇಸ್ರಾಯೇಲರಲ್ಲಿ ಆರೋನನಿಗೆ ಸಂಪೂರ್ಣವಾಗಿ ಒಪ್ಪಿಸಲ್ಪಟ್ಟವರು ಇವರೇ.
10 Appoint Aaron and his sons to guard their priesthood; any outsider who comes near must die." ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನು ಮತ್ತು ಅವನ ಮಕ್ಕಳನ್ನು ನೇಮಿಸಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದು ಹೇಳಿದನು.
11 Then our Father said to Moses: ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ ಹೇಳಿದ್ದೇನೆಂದರೆ,
12 "Look, I have taken the Levites from among the Israelites in place of every firstborn that opens the womb among the Israelites. The Levites are mine. “ನಾನು ಇಸ್ರಾಯೇಲರಲ್ಲಿ ಚೊಚ್ಚಲಾದ ಗಂಡಸರಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಂಡಿದ್ದೇನೆ ಎಂದು ತಿಳಿದುಕೋ. ಆದುದರಿಂದ ಲೇವಿಯರು ನನ್ನ ಸೊತ್ತು.
13 Every firstborn is mine. The day I struck down every firstborn in Egypt, I set apart for myself every firstborn in Israel—both man and animal. They will be mine. I am your Father." ಇಸ್ರಾಯೇಲರಲ್ಲಿ ಚೊಚ್ಚಲಾದವರು ನನ್ನ ಸೊತ್ತು. ಐಗುಪ್ತ ದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹಾರಮಾಡಿದಾಗ ಇಸ್ರಾಯೇಲರಲ್ಲಿರುವ ಚೊಚ್ಚಲಾದ ಮನುಷ್ಯರನ್ನೂ, ಪಶುಗಳನ್ನೂ ನನ್ನ ಸ್ವಂತವಾಗಿ ಪ್ರತಿಷ್ಠಿಸಿಕೊಂಡೆನು; ಅವರು ನನ್ನವರಾಗಿರಬೇಕು. ನಾನೇ ಯೆಹೋವನು” ಎಂದು ಹೇಳಿದನು.
14 Then our Father spoke to Moses in the wilderness of Sinai: ಯೆಹೋವನು ಸೀನಾಯಿ ಮರುಭೂಮಿಯಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
15 "Count Levi's sons by fathers' houses and clans; count every male a month old and up." “ನೀನು ಲೇವಿಯರಲ್ಲಿ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರನ್ನೆಲ್ಲಾ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.
16 So Moses counted them at the word of our Father, just as he had been commanded. ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಅವರನ್ನು ಲೆಕ್ಕಿಸಿದನು.
17 These were the sons of Levi by their names: Gershon, Kohath, and Merari. ಲೇವಿಯ ಮಕ್ಕಳು ಯಾರೆಂದರೆ: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ ಇವರೇ.
18 These are the names of the sons of Gershon by their clans: Libni and Shimei. ಗೋತ್ರಸ್ಥಾಪಕರಾದ ಗೇರ್ಷೋನನ ಮಕ್ಕಳು: ಲಿಬ್ನೀ, ಶಿಮ್ಮೀ ಇವರೇ.
19 The sons of Kohath by their clans: Amram, Izhar, Hebron, and Uzziel. ಗೋತ್ರಸ್ಥಾಪಕರಾದ ಕೆಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್, ಎಂಬುವವರು.
20 Merari's sons by clan: Mahli and Mushi. These are the Levite clans by fathers' houses. ಗೋತ್ರಸ್ಥಾಪಕರಾದ ಮೆರಾರೀಯ ಮಕ್ಕಳು: ಮಹ್ಲೀ, ಮೂಷೀ ಎಂಬುವವರು. ಗೋತ್ರಕುಟುಂಬಗಳ ಪ್ರಕಾರ ಇವರೇ ಲೇವಿಯ ವಂಶದವರು.
21 From Gershon: the Libnite clan and the Shimeite clan—these are the Gershonite clans. ಗೇರ್ಷೋನ್ ವಂಶದವರಲ್ಲಿ ಲಿಬ್ನೀ ಗೋತ್ರದವರೂ ಶಿಮ್ಮೀ ಗೋತ್ರದವರೂ ಇದ್ದರು.
22 The number of males counted, a month old or older, was 7,500. ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 7,500 ಮಂದಿ.
23 The clans of the Gershonites camped behind the tabernacle on the west. ಗೇರ್ಷೋನ್ಯರ ಗೋತ್ರದವರು ದೇವದರ್ಶನದ ಗುಡಾರದ ಹಿಂದೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
24 The leader of the fathers' house of the Gershonites was Eliasaph son of Lael. ಗೇರ್ಷೋನ್ಯರ ಗೋತ್ರಗಳ ಪ್ರಧಾನಪುರುಷನು ಲಾಯೇಲನ ಮಗನಾದ ಎಲ್ಯಾಸಾಫ್.
25 Gershon's sons at the tent of meeting cared for the tabernacle, the tent, its covering, and the entrance screen of the tent of meeting. ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಗುಡಾರ ಅದರ ಮೇಲಣ ಡೇರೆಯ ಬಟ್ಟೆ, ಅದರ ಮೇಲ್ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆಗಳು,
26 The courtyard's curtains and its entrance screen, surrounding the tabernacle and altar, and its cords for all its service. ಗುಡಾರದ ಮತ್ತು ಯಜ್ಞವೇದಿಯ ಸುತ್ತಲಿರುವ ಅಂಗಳದ ತೆರೆಗಳೂ, ಅಂಗಳದ ಬಾಗಿಲಿನ ಪರದೆಗಳು, ಇವುಗಳ ಹಗ್ಗಗಳೂ ಇವೇ. ಇಂತಹ ಸಕಲವಿಧವಾದ ಸೇವಕಾರ್ಯವನ್ನು ಗೇರ್ಷೋನ್ಯರು ಮಾಡಬೇಕು.
27 From Kohath came the Amramite clan, the Izharite clan, the Hebronite clan, and the Uzzielite clan; these are the clans of the Kohathites. ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರು, ಇಚ್ಹಾರ್ ಗೋತ್ರದವರೂ, ಹೆಬ್ರೋನ್ ಗೋತ್ರದವರೂ, ಉಜ್ಜೀಯೇಲ್ ಗೋತ್ರದವರೂ ಇದ್ದರು.
28 Males a month old and up numbered 8,600, in charge of the sanctuary. ಅವರಲ್ಲಿ ದೇವಸ್ಥಾನವನ್ನು ನೋಡಿಕೊಳ್ಳತಕ್ಕವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 8,600 ಮಂದಿ.
29 The clans of the sons of Kohath camped on the south side of the tabernacle. ಕೆಹಾತ್ಯರ ಗೋತ್ರಗಳವರು ದೇವದರ್ಶನದ ಗುಡಾರದ ದಕ್ಷಿಣ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
30 The leader of the fathers' house of the Kohathite clans was Elizaphan son of Uzziel. ಕೆಹಾತ್ಯರ ಗೋತ್ರಗಳ ಪ್ರಧಾನಪುರುಷನು ಉಜ್ಜೀಯೇಲನ ಮಗನಾದ ಎಲೀಚಾಫಾನ್.
31 They cared for the ark, the table, the lampstand, the altars, the sanctuary vessels used in service, the screen, and all its work. ಅವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಮಂಜೂಷವು, ಮೇಜು, ದೀಪಸ್ತಂಭಗಳು, ಯಜ್ಞವೇದಿಗಳು, ದೇವಸ್ಥಾನದ ಸೇವೆಯ ಉಪಕರಣಗಳು, ಒಳಗಣ ತೆರೆಗಳು ಇವುಗಳೇ. ಇವುಗಳ ಸಕಲವಿಧವಾದ ಸೇವಕಾರ್ಯವನ್ನು ಅವರು ಮಾಡಬೇಕು.
32 Eleazar son of Aaron the priest was chief leader of the Levites, in charge of those guarding the sanctuary. ಅದಲ್ಲದೆ ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಪ್ರಧಾನಪುರುಷರ ಅಧ್ಯಕ್ಷನಾಗಿ ದೇವಸ್ಥಾನವನ್ನು ನೋಡಿಕೊಳ್ಳುವವರ ಮೇಲ್ವಿಚಾರಕನಾಗಿರಬೇಕು.
33 From Merari: the Mahlite clan and the Mushite clan—these are Merari's clans. ಮೆರಾರೀ ವಂಶದವರಲ್ಲಿ ಮಹ್ಲೀ ಗೋತ್ರದವರೂ, ಮೂಷೀ ಗೋತ್ರದವರೂ ಇದ್ದರು.
34 The number of males counted, a month old or older, was 6,200. ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 6,200 ಮಂದಿ.
35 Leader of Merarite clans' ancestral house: Zuriel son of Abihail; they camped on the tabernacle's north side. ಮೆರಾರೀಯರ ಗೋತ್ರಗಳ ಪ್ರಧಾನಪುರುಷನು ಅಬೀಹೈಲನ ಮಗನಾದ ಚೂರೀಯೇಲ್. ಇವರು ದೇವದರ್ಶನದ ಗುಡಾರದ ಉತ್ತರ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
36 Merari's sons were charged with the tabernacle's frames, crossbars, posts, bases, all its equipment, and all its service, ಮೆರಾರೀ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುವೆಂದರೆ: ಗುಡಾರದ ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು, ಇವುಗಳ ಉಪಕರಣಗಳು,
37 as well as the posts of the surrounding courtyard with their bases, pegs, and cords. ಅಂಗಳದ ಸುತ್ತಲಿರುವ ಕಂಬಗಳು, ಇವುಗಳ ಗದ್ದಿಗೆಕಲ್ಲುಗಳು, ಗೂಟಗಳು, ಹಗ್ಗಗಳು ಇವುಗಳೇ. ಇವುಗಳ ಸಕಲ ವಿಧವಾದ ಸೇವಕಾರ್ಯವನ್ನು ಇವರೇ ಮಾಡಬೇಕು.
38 Camped east of the tabernacle, in front of the tent of meeting toward sunrise, were Moses, Aaron, and his sons, who kept charge of the sanctuary for the Israelites; any outsider who approached was to be put to death. ದೇವದರ್ಶನದ ಗುಡಾರದ ಪೂರ್ವ ದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ದಿಕ್ಕಿನಲ್ಲಿ ಮೋಶೆ, ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.
39 All the Levites whom Moses and Aaron counted at our Father's command, by their clans, every male a month old and up: 22,000. ಮೋಶೆ ಮತ್ತು ಆರೋನರು ಯೆಹೋವನ ಅಪ್ಪಣೆಯ ಮೇರೆಗೆ ಗೋತ್ರಗಳ ಪ್ರಕಾರ ಲೆಕ್ಕಿಸಿದ ಲೇವಿಯರ ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಒಟ್ಟು ಸಂಖ್ಯೆ 22,000 ಮಂದಿ.
40 Then our Father said to Moses, "Count every firstborn male of Israel a month old or older, and record the number of their names. ಇದಲ್ಲದೆ ಯೆಹೋವನು ಮೋಶೆಗೆ, “ನೀನು ಇಸ್ರಾಯೇಲರಲ್ಲಿ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಚೊಚ್ಚಲು ಗಂಡಸರನ್ನು ಹೆಸರು ಹಿಡಿದು ಎಣಿಕೆಮಾಡು.
41 Take the Levites for me—I am your Father—in place of every firstborn among the people of Israel, and the Levites' livestock in place of every firstborn among Israel's livestock." ಇಸ್ರಾಯೇಲರಲ್ಲಿರುವ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲರ ಚೊಚ್ಚಲು ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ನನಗೋಸ್ಕರ ತೆಗೆದುಕೋ, ನಾನೇ ಯೆಹೋವನು” ಎಂದನು.
42 So Moses counted every firstborn among the people of Israel, just as our Father had commanded him. ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯು, ಇಸ್ರಾಯೇಲರಲ್ಲಿದ್ದ ಚೊಚ್ಚಲಾದವರನ್ನು ಲೆಕ್ಕಿಸಿದನು.
43 All firstborn males, a month or older, listed by name: 22,273. ಹೆಸರು ಹಿಡಿದು ಎಣಿಕೆ ಮಾಡಲ್ಪಟ್ಟ ಚೊಚ್ಚಲಾದವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 22,273 ಮಂದಿ.
44 Then our Father spoke to Moses: ಪುನಃ ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
45 "Take the Levites instead of every firstborn among Israel's people, and the Levites' livestock instead of theirs. The Levites will be mine. I am your Father. “ನೀನು ಇಸ್ರಾಯೇಲರ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನು, ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನು ತೆಗೆದುಕೋ. ಲೇವಿಯರೇ ನನ್ನ ಸೊತ್ತಾಗಿರುವರು; ನಾನೇ ಯೆಹೋವನು.
46 To redeem the 273 firstborn Israelites exceeding the Levites' count. “ಲೇವಿಯರ ಸಂಖ್ಯೆಗಿಂತ ಹೆಚ್ಚಾಗಿ 273 ಮಂದಿ ಚೊಚ್ಚಲರು ಹೆಚ್ಚಾಗಿ ಇಸ್ರಾಯೇಲರಲ್ಲಿ ಇರುವುದರಿಂದ ಅವರನ್ನು ಬಿಡಿಸುವುದಕ್ಕಾಗಿ ಒಬ್ಬೊಬ್ಬರಿಗೆ ಐದೈದು ಶೆಕೆಲ್ ಮೇರೆಗೆ ಈಡು ತೆಗೆದುಕೊಳ್ಳಬೇಕು.
47 Collect about 2 ounces per person, by sanctuary standard (each measure about half an ounce of silver). ದೇವಸ್ಥಾನದ ಸೇವೆಗೆ ನೇಮಕವಾದ ಶೆಕೆಲ್ ಗಳ ಮೇರೆಯ ಪ್ರಕಾರ ಒಬ್ಬೊಬ್ಬನಿಗೆ ಐದು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಳ್ಳಬೇಕು.
48 Give the money to Aaron and his sons as the redemption price for the extra firstborn sons." ಅವರೊಳಗೆ ಹೆಚ್ಚಾಗಿರುವವರ ಬಿಡುಗಡೆಗೋಸ್ಕರ ಅವರು ಕೊಡುವ ಹಣವನ್ನು ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಕೊಡಬೇಕು” ಎಂದನು.
49 So Moses collected the redemption money from the firstborn sons who exceeded the number of the Levites; ಅದಕ್ಕೆ ಅನುಸಾರವಾಗಿ ಮೋಶೆ ಲೇವಿಯರಿಗಿಂತ ಹೆಚ್ಚಾದ ಚೊಚ್ಚಲರನ್ನು ಬಿಡಿಸುವುದಕ್ಕಾಗಿ ಹಣವನ್ನು ತೆಗೆದುಕೊಂಡನು.
50 from Israel's firstborn sons he took 1,365—about 2 ounces, by the sanctuary standard. ಇಸ್ರಾಯೇಲರಲ್ಲಿ ಚೊಚ್ಚಲಾದವರಿಂದ ದೇವಸ್ಥಾನದ ಸೇವೆಗೆ ನೇಮಕವಾದ ರೂಪಾಯಿಯಲ್ಲಿ 1,365 ಶೆಕೆಲ್ ಗಳನ್ನು ತೆಗೆದುಕೊಂಡನು.
51 Moses gave the redemption money to Aaron and his sons, by our Father's word, just as our Father commanded Moses. ಯೆಹೋವನ ಆಜ್ಞೆಯಂತೆ ಮೋಶೆ ಆ ಬಿಡುಗಡೆಯ ಹಣವನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಕೊಟ್ಟನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]