Skip to content
The Believer's Library

Indian Revised Version (IRV) Kannada - 2019

Proverbs 1 IRVKan

Show IRVKan only
Verse × ×
1 The proverbs of Solomon, son of David, king of Israel: ಇಸ್ರಾಯೇಲರ ಅರಸನಾಗಿದ್ದ ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು.
2 To know wisdom and instruction, to understand words of insight, ಇವುಗಳಿಂದ ಜನರು ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದು, ಬುದ್ಧಿವಾದಗಳನ್ನು ಗ್ರಹಿಸಿಕೊಳ್ಳುವರು.
3 to receive instruction in wise conduct, in righteousness, justice, and fairness, ಅವರು ವಿವೇಕಮಾರ್ಗದಲ್ಲಿ ಅಂದರೆ ನೀತಿ, ನ್ಯಾಯ ಮತ್ತು ಧರ್ಮಮಾರ್ಗಗಳಲ್ಲಿ ಶಿಕ್ಷಿತರಾಗುವರು.
4 to give prudence to the simple, knowledge and discretion to the young, ಈ ನುಡಿಗಳು ಮೂಢರಿಗೆ ಜಾಣತನವನ್ನೂ, ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು.
5 let the wise also hear and increase in learning, and let the one who understands gain guidance, ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು.
6 to understand a proverb and a parable, the words of the wise and their riddles. ಇವು ಗಾದೆ, ಸಾಮ್ಯ, ಜ್ಞಾನಿಗಳ ನುಡಿ ಮತ್ತು ಒಗಟುಗಳನ್ನು ತಿಳಿಯಲು ಸಾಧನವಾಗಿವೆ.
7 The fear of our Father is the beginning of knowledge; fools despise wisdom and instruction. ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.
8 Listen, my son, to your father's instruction, and don't turn away from your mother's teaching, ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.
9 for they are a graceful garland for your head and pendants for your neck. ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ, ಕೊರಳಿಗೆ ಹಾರದಂತಿರುವುದು.
10 My son, if sinners entice you, do not give in. ಮಗನೇ, ಪಾಪಿಗಳು ದುಷ್ಪ್ರೇರಣೆಯನ್ನು ಮಾಡಿದರೆ ನೀನು ಒಪ್ಪಲೇ ಬೇಡ.
11 If they say, "Come with us, let us lie in wait for blood, let us ambush the innocent without cause; ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ.
12 like the grave let us swallow them alive, and whole, like those who go down to the pit; ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ, ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ.
13 we will find all kinds of precious goods, we will fill our houses with plunder; ಸಕಲವಿಧವಾದ ಅಮೂಲ್ಯ ಸಂಪತ್ತನ್ನು ಕಂಡುಹಿಡಿದು, ಕೊಳ್ಳೆಮಾಡಿ ನಮ್ಮ ಮನೆಗಳಲ್ಲಿ ತುಂಬಿಕೊಳ್ಳೋಣ.
14 throw in your lot with us; we will all share one purse," ನಮ್ಮ ಸಂಗಡ ಚೀಟು ಹಾಕು; ನಮ್ಮೆಲ್ಲರ ಹಣದ ಚೀಲ ಒಂದೇ ಆಗಿರಲಿ” ಎಂದು ಹೇಳಿದರೆ,
15 my son, do not walk in the way with them; hold back your foot from their paths, ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ.
16 for their feet run to evil, and they hurry to shed blood. ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.
17 For a net spread out before any bird's eyes catches nothing; ಪಕ್ಷಿಗಳ ಕಣ್ಣೆದುರಿಗೆ ಬಲೆಯನ್ನೊಡ್ಡುವುದು ವ್ಯರ್ಥ.
18 but these lie in wait for their own blood; they ambush their own lives. ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ.
19 Such are the ways of everyone greedy for unjust gain; it takes away the life of its possessors. ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವುದು.
20 Wisdom cries aloud in the street; in the open squares she lifts her voice. ಜ್ಞಾನವೆಂಬಾಕೆಯು ಬೀದಿಗಳಲ್ಲಿ ಕೂಗುತ್ತಾಳೆ, ಚೌಕಗಳಲ್ಲಿ ಧ್ವನಿಮಾಡುತ್ತಾಳೆ.
21 At the head of the noisy streets she calls out; at the entrance of the city gates she speaks: ಪೇಟೆಯ ಮುಖ್ಯಸ್ಥಾನದಲ್ಲಿ ಆಕೆ ಕೂಗುತ್ತಾಳೆ, ಊರ ಬಾಗಿಲಿನಲ್ಲಿ ಆಕೆಯು ನುಡಿಯುವುದೇನೆಂದರೆ,
22 "How long, simple ones, will you love being simple? How long will mockers delight in their mocking and fools hate knowledge? “ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?
23 If you respond to my correction, I, Wisdom, will pour out my spirit on you; I will make my words known to you. ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.
24 Because I have called and you refused, I stretched out my hand and no one paid attention, ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ;
25 and you ignored all my counsel and rejected all my correction, ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ, ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ.
26 I also will laugh at your calamity; I will mock when terror overtakes you, ಆದಕಾರಣ ಬಿರುಗಾಳಿಯಂತೆ ಅಪಾಯವೂ, ತುಫಾನಿನಂತೆ ಆಪತ್ತೂ ಬಂದು, ನಿಮಗೆ ಶ್ರಮಸಂಕಟಗಳು ಸಂಭವಿಸುವಾಗ
27 when terror overtakes you like a storm and your calamity comes like a whirlwind, when distress and anguish come upon you. ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯ ಮಾಡುವೆನು.
28 Then they will call on me, but I will not answer; they will seek me earnestly but will not find me, ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.
29 because they hated knowledge and did not choose the fear of our Father, ಯಾಕೆಂದರೆ ಅವರು ಯೆಹೋವನ ಭಯಭಕ್ತಿಗೆ ಮನಸ್ಸು ಕೊಡದೆ ತಿಳಿವಳಿಕೆಯನ್ನು ಹಗೆಮಾಡಿದರು.
30 they rejected my counsel and despised all my correction. ನನ್ನ ಬೋಧನೆಯನ್ನು ಕೇಳಲೊಲ್ಲದೆ, ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು.
31 So they will eat the fruit of their own way and have their fill of their own schemes. ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.
32 For the waywardness of the simple will kill them, and the complacency of fools will destroy them; ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.
33 but whoever listens to me will dwell secure and be at ease, without dread of disaster." ನನ್ನ ಮಾತಿಗೆ ಕಿವಿಗೊಡುವವನಾದರೋ ಸುರಕ್ಷಿತನಾಗಿದ್ದು, ಯಾವ ಕೇಡಿಗೂ ಭಯಪಡದೆ ನೆಮ್ಮದಿಯಾಗಿ ಬಾಳುವನು” ಎಂಬುದೇ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]