Skip to content
The Believer's Library

Indian Revised Version (IRV) Kannada - 2019

Proverbs 10 IRVKan

Show IRVKan only
Verse × ×
1 The proverbs of Solomon: A wise son brings joy to his father, but a foolish son brings grief to his mother. ಜ್ಞಾನಿಯಾದ ಮಗನಿಂದ ತಂದೆಗೆ ಆನಂದ, ಅಜ್ಞಾನಿಯಾದ ಮಗನಿಂದ ತಾಯಿಗೆ ದುಃಖ.
2 Treasures gained by wickedness do not profit, but righteousness rescues from death. ಅನ್ಯಾಯದ ಸಂಪತ್ತು ವ್ಯರ್ಥ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು.
3 Our Father will not let the righteous go hungry, but he thwarts the craving of the wicked. ಯೆಹೋವನು ನೀತಿವಂತರನ್ನು ಹಸಿವೆಗೊಳಿಸನು, ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ.
4 Lazy hands make you poor, but diligent hands bring wealth. ಜೋಲುಗೈ ದಾರಿದ್ರ್ಯ, ಚುರುಕು ಕೈ ತರುವುದು ಐಶ್ವರ್ಯ.
5 He who gathers in summer is a prudent son, but he who sleeps during harvest is a son who brings shame. ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು, ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.
6 Blessings rest on the head of the righteous, but the mouth of the wicked conceals violence. ಶಿಷ್ಟನ ತಲೆ ಆಶೀರ್ವಾದದ ನೆಲೆ, ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ.
7 The memory of the righteous is a blessing, but the name of the wicked will rot. ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ.
8 A wise heart accepts commands, but a babbling fool comes to ruin. ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು, ಹರಟೆಯ ಮೂರ್ಖನು ಕೆಡವಲ್ಪಡುವನು.
9 Whoever walks in integrity walks securely, but he who makes his ways crooked will be found out. ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.
10 Whoever winks causes trouble, and a babbling fool comes to ruin. ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು, ಧೈರ್ಯದಿಂದ ಗದರಿಸುವವನು ಸಮಾಧಾನಕರನು.
11 The mouth of the righteous is a fountain of life, but the mouth of the wicked conceals violence. ಶಿಷ್ಟನ ಬಾಯಿ ಜೀವದ ಬುಗ್ಗೆ, ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ.
12 Hatred stirs up conflict, but love covers all offenses. ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.
13 On the lips of the discerning, wisdom is found, but a rod is for the back of one who lacks sense. ವಿವೇಕಿಯ ತುಟಿಗಳಿಂದ ಜ್ಞಾನ, ಬುದ್ಧಿಹೀನನ ಬೆನ್ನಿಗೆ ಬೆತ್ತ.
14 The wise store up knowledge, but the mouth of a fool invites ruin. ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವುದಿಲ್ಲ, ಮೂರ್ಖನ ಭಾಷಣ ನಾಶನಕ್ಕೆ ಸಮೀಪ.
15 The wealth of the rich is their fortified city; the ruin of the poor is their poverty. ಐಶ್ವರ್ಯವಂತನಿಗೆ ಐಶ್ವರ್ಯವು ಬಲವಾದ ಕೋಟೆ, ಬಡವನಿಗೆ ಅವನ ಬಡತನವೇ ನಾಶನ.
16 The wage of the righteous leads to life; the gain of the wicked leads to sin. ಶಿಷ್ಟನ ದುಡಿತ ಜೀವಾಸ್ಪದ, ದುಷ್ಟನ ಆದಾಯ ಪಾಪಾಸ್ಪದ.
17 Whoever accepts discipline is on the path to life, but he who ignores correction leads others astray. ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು, ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.
18 Whoever conceals hatred is a liar, and whoever spreads slander is a fool. ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ, ಚಾಡಿಗಾರನು ಜ್ಞಾನಹೀನ.
19 Where words are many, sin is never absent; but whoever holds his tongue is wise. ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ.
20 The tongue of the righteous is choice silver; the heart of the wicked is worth little. ಶಿಷ್ಟರ ನಾಲಿಗೆ ಚೊಕ್ಕ ಬೆಳ್ಳಿ, ದುಷ್ಟನ ಹೃದಯ ಮೌಲ್ಯವಿಲ್ಲದ್ದು.
21 The lips of the righteous nourish many, but fools die for lack of sense. ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ.
22 The blessing of our Father brings wealth, and he adds no sorrow with it. ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.
23 Doing wickedness is a game to a fool, but wisdom is the delight of a person of understanding. ಅವಿವೇಕಿಗೆ ಕುಯುಕ್ತಿ ವಿನೋದ ವಿವೇಕಿಗೆ ಜ್ಞಾನ ವಿನೋದ.
24 What the wicked dreads will come upon him, but the desire of the righteous will be granted. ದುಷ್ಟನಿಗೆ ಶಂಕಿಸಿದ್ದೇ ಸಂಭವಿಸುವುದು, ಶಿಷ್ಟನಿಗೆ ಇಷ್ಟವು ಲಭಿಸುವುದು.
25 When the storm has passed, the wicked are gone, but the righteous are established forever. ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ.
26 Like vinegar to the teeth and smoke to the eyes, so is the sluggard to those who send him. ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆ.
27 The fear of our Father lengthens life, but the years of the wicked will be cut short. ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ, ದುಷ್ಟರ ವರ್ಷಗಳು ಅಲ್ಪ.
28 The hope of the righteous brings joy, but the expectation of the wicked will perish. ಶಿಷ್ಟನ ನಂಬಿಕೆಗೆ ಆನಂದವು ಫಲ, ದುಷ್ಟನ ನಿರೀಕ್ಷೆ ನಿಷ್ಫಲ.
29 The way of our Father is a refuge for the blameless, but ruin for those who do evil. ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ.
30 The righteous will never be shaken, but the wicked will not remain in the land. ಶಿಷ್ಟರು ಎಂದಿಗೂ ಕದಲರು, ದುಷ್ಟರು ದೇಶದಲ್ಲಿ ನಿಲ್ಲರು.
31 The mouth of the righteous yields wisdom, but the perverse tongue will be cut off. ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವುದು, ನೀಚನ ನಾಲಿಗೆ ಕತ್ತರಿಸಲ್ಪಡುವುದು.
32 The lips of the righteous know what is acceptable, but the mouth of the wicked, only what is perverse. ಶಿಷ್ಟನ ತುಟಿಯಲ್ಲಿ ಹಿತವಚನ, ದುಷ್ಟನ ಬಾಯಲ್ಲಿ ನೀಚವಚನ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]