Skip to content
The Believer's Library

Indian Revised Version (IRV) Kannada - 2019

Proverbs 11 IRVKan

Show IRVKan only
Verse × ×
1 Dishonest scales are an abomination to our Father, but accurate weights are his delight. ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ.
2 When pride comes, then comes disgrace, but wisdom comes with the humble. ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ, ದೀನತೆಯಲ್ಲಿ ಸುಜ್ಞಾನ.
3 The integrity of the upright guides them, but the crookedness of the treacherous destroys them. ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ, ವಂಚಕರಿಗೆ ವಕ್ರತೆಯು ನಾಶನ.
4 Wealth does not profit in the day of wrath, but righteousness delivers from death. ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.
5 The righteousness of the blameless makes their way straight, but the wicked falls by his own wickedness. ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು, ದುಷ್ಟನು ತನ್ನ ದೋಷದಿಂದಲೇ ಬಿದ್ದುಹೋಗುವನು.
6 The righteousness of the upright delivers them, but the treacherous are trapped by their own craving. ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು, ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.
7 When a wicked person dies, his hope perishes, and his confidence in his own strength comes to nothing. ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವುದು, ಬಲದ ಮೇಲಣ ನಂಬಿಕೆಯು ಬಿದ್ದುಹೋಗುವುದು.
8 The righteous is delivered from trouble, and the wicked comes into it in his place. ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.
9 With his mouth the godless destroys his neighbor, but through knowledge the righteous are delivered. ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು, ಶಿಷ್ಟನು ತಿಳಿವಳಿಕೆಯಿಂದ ಉದ್ಧಾರವಾಗುವನು.
10 When things go well for the righteous, the city rejoices, and when the wicked perish, there are shouts of joy. ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ.
11 By the blessing of the upright a city is exalted, but by the mouth of the wicked it is torn down. ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಉನ್ನತಿಗೆ ಬರುವುದು, ಕೆಟ್ಟವರ ಬಾಯಿಂದ ಕೆಡವಲ್ಪಡುವುದು.
12 Whoever despises his neighbor lacks sense, but a person of understanding stays silent. ನೆರೆಯವನನ್ನು ಹೀನೈಸುವವನು ಬುದ್ಧಿಹೀನನು, ವಿವೇಕಿಯು ಮೌನವಾಗಿರುವನು.
13 A gossip goes about revealing secrets, but someone with a trustworthy spirit can keep a secret. ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ನಂಬಿಗಸ್ತನು ಸಂಗತಿಗಳನ್ನು ಗುಪ್ತವಾಗಿಡುವನು.
14 Where there is no guidance, a people falls, but in an abundance of counselors there is safety. ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದು ಹೋಗುವುದು, ಬಹು ಮಂದಿ ಸಮಾಲೋಚಕರು ಇರುವಲ್ಲಿ ಸಂರಕ್ಷಣೆ ಇರುವುದು.
15 Whoever puts up security for a stranger will surely suffer for it, but whoever hates shaking hands on a pledge is secure. ಅನ್ಯನ ಸಾಲಕ್ಕೆ ಹೊಣೆಯಾದರೆ ಹಾನಿ, ಅಪರಿಚಿತನ ಹೊಣೆಗೆ ದೂರವಾದರೆ ನಿರ್ಭಯ.
16 A gracious woman attains honor, and ruthless men attain riches. ದಯಾಳುವಾದ ಹೆಂಗಸು ಗೌರವವನ್ನು ಪಡೆಯುವಳು, ಬಲಾತ್ಕಾರಿಗಳು ಧನವನ್ನು ಮಾತ್ರ ಕೂಡಿಸಿಕೊಳ್ಳುವರು.
17 A kind person benefits himself, but a cruel person brings trouble on himself. ದಯಾಪರನಿಗೆ ಉಪಕಾರವಾಗುವುದು, ಕ್ರೂರನು ತನ್ನ ಶರೀರವನ್ನು ಹಿಂಸಿಸುವನು.
18 The wicked earns deceptive wages, but whoever sows righteousness earns a true reward. ಅಧರ್ಮಿಯ ಸಂಬಳವು ಮೋಸ, ನೀತಿಯನ್ನು ಬಿತ್ತುವವನು ಲಾಭವನ್ನು ಪಡೆಯುವನು.
19 Whoever is steadfast in righteousness finds life, but whoever pursues evil runs to his own death. ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.
20 Those of crooked heart are an abomination to our Father, but those whose ways are blameless are his delight. ವಕ್ರಹೃದಯರು ಯೆಹೋವನಿಗೆ ಅಸಹ್ಯರು, ಸನ್ಮಾರ್ಗಿಗಳು ಆತನ ದಯೆಗೆ ಪಾತ್ರರು.
21 You can be sure the evil person will not go unpunished, but the children of the righteous will go free. ದುಷ್ಟನಿಗೆ ದಂಡನೆ ಖಂಡಿತ, ಶಿಷ್ಟವಂಶಕ್ಕೆ ರಕ್ಷಣೆ.
22 Like a gold ring in a pig's snout is a beautiful woman who shows no discretion. ಹಂದಿಯ ಮೂಗಿಗೆ ಚಿನ್ನದ ಮೂಗುತಿಯು ಹೇಗೋ, ಅವಿವೇಕಳಿಗೆ ಸೌಂದರ್ಯವು ಹಾಗೆ.
23 The desire of the righteous ends only in good, but the hope of the wicked ends in wrath. ಸಜ್ಜನರ ಆಶೆಯು ಮಂಗಳಾಸ್ಪದ, ದುರ್ಜನರ ನಿರೀಕ್ಷೆಯು ರೋಷಾಸ್ಪದ.
24 One person gives freely, yet grows all the richer; another withholds what is right, only to end up in need. ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.
25 A generous soul will be enriched, and whoever refreshes others will himself be refreshed. ಉದಾರಿಯು ಪುಷ್ಟನಾಗುವನು, ನೀರು ಹಾಯಿಸುವವನಿಗೆ ನೀರು ಸಿಕ್ಕುವುದು.
26 The people curse whoever holds back grain, but the one who sells it is blessed. ಧಾನ್ಯವನ್ನು ಬಿಗಿಹಿಡಿಯುವವನ ಮೇಲೆ ಜನರ ಶಾಪ, ಮಾರುವವನ ತಲೆಯ ಮೇಲೆ ಆಶೀರ್ವಾದ.
27 Whoever diligently seeks good seeks favor, but whoever searches for evil, evil will come to him. ಧರ್ಮಕ್ಕೆ ಆತುರಪಡುವವನಿಗೆ ದಯೆ, ಕೇಡನ್ನು ಹುಡುಕುವವನಿಗೆ ಕೇಡೇ.
28 Whoever trusts in his riches will fall, but the righteous will flourish like green leaves. ಧನವನ್ನೇ ನಂಬಿದವನು ಬಿದ್ದುಹೋಗುವನು, ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.
29 Whoever brings trouble on his own household will inherit the wind, and the fool will be servant to the wise of heart. ತನ್ನ ಕುಟುಂಬವನ್ನು ಬಾಧಿಸುವವನಿಗೆ ಗಾಳಿಯೇ ಗಂಟು, ಮೂರ್ಖನು ಜ್ಞಾನವಂತನ ಅಧೀನದಲ್ಲಿ ಬಿದ್ದಿರುವನು;
30 The fruit of the righteous is a tree of life, and whoever wins souls is wise. ಧರ್ಮಾತ್ಮನ ಫಲ ಜೀವವೃಕ್ಷ, ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.
31 If the righteous is repaid on earth, how much more the wicked and the sinner! ಶಿಷ್ಟನು ಭೂಮಿಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ, ದುಷ್ಟನೂ, ಪಾಪಿಯೂ ದಂಡನೆಯನ್ನು ಅನುಭವಿಸುವರು ಎಂದು ಹೇಳಬೇಕಾಗಿಲ್ಲ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]