Skip to content
The Believer's Library

Indian Revised Version (IRV) Kannada - 2019

Proverbs 12 IRVKan

Show IRVKan only
Verse × ×
1 Whoever loves discipline loves knowledge, but whoever hates correction is senseless. ತಿಳಿವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ, ಮೂರ್ಖನು ಗದರಿಕೆಯನ್ನು ದ್ವೇಷಿಸುತ್ತಾನೆ.
2 A good man obtains favor from our Father, but he condemns the man who schemes evil. ಯೆಹೋವನು ಒಳ್ಳೆಯವನಿಗೆ ದಯೆತೋರಿಸುವನು, ಕುಯುಕ್ತಿಯುಳ್ಳವನನ್ನು ಕೆಟ್ಟವನೆಂದು ನಿರ್ಣಯಿಸುವನು.
3 No one is established by wickedness, but the root of the righteous will never be moved. ಯಾರೂ ದುಷ್ಟತನದಿಂದ ಸ್ಥಿರನಾಗನು, ಶಿಷ್ಟನು ಯಾವಾಗಲೂ ದೃಢಮೂಲನೇ.
4 A wife of noble character is her husband's crown, but one who brings shame is like decay in his bones. ಗುಣವತಿಯಾದ ಸ್ತ್ರೀಯು ಪತಿಯ ತಲೆಗೆ ಕಿರೀಟ, ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.
5 The plans of the righteous are just, but the advice of the wicked is deceitful. ಶಿಷ್ಟರ ಉದ್ದೇಶ ನ್ಯಾಯ, ದುಷ್ಟರ ಆಲೋಚನೆ ಮೋಸ.
6 The words of the wicked lie in wait for blood, but the speech of the upright rescues the innocent. ಕೆಟ್ಟವರ ಮಾತು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಪ್ರಾಣರಕ್ಷಣೆ.
7 The wicked are overthrown and are no more, but the house of the righteous will stand. ದುರ್ಜನರು ಕೆಡವಲ್ಪಟ್ಟು ನಿರ್ಮೂಲರಾಗುವರು, ಸಜ್ಜನರ ಮನೆಯು ಸ್ಥಿರವಾಗಿ ನಿಲ್ಲುವುದು.
8 A person is praised according to their good sense, but one with a warped mind is despised. ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು, ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.
9 Better to be lowly and have a servant than to pretend to greatness and go hungry. ಹೊಟ್ಟೆಗಿಲ್ಲದ ಡಾಂಭಿಕನಿಗಿಂತಲೂ ಸೇವಕನುಳ್ಳ ಸಾಧಾರಣ ಮನುಷ್ಯನ ಸ್ಥಿತಿಯೇ ಲೇಸು.
10 The righteous care for the needs of their animals, but even the mercy of the wicked is cruel. ಶಿಷ್ಟನು ತನ್ನ ಪಶುಗಳ ಕ್ಷೇಮವನ್ನು ಲಕ್ಷಿಸುತ್ತಾನೆ, ದುಷ್ಟನ ವಾತ್ಸಲ್ಯವೋ ಕ್ರೂರತನವೇ.
11 Whoever works their land will have plenty of food, but whoever chases worthless pursuits lacks sense. ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು, ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.
12 The wicked crave the plunder of evil men, but the root of the righteous yields fruit. ಕೆಡುಕರ ಕೊಳ್ಳೆಯು ದುಷ್ಟರಿಗೆ ಇಷ್ಟ, ಆದರೆ ಶಿಷ್ಟರ ಬುಡ ಫಲದಾಯಕ.
13 An evil man is trapped by his sinful talk, but the righteous escapes from trouble. ದುಷ್ಟನು ತನ್ನ ತುಟಿಗಳ ದೋಷದಿಂದ ಬೋನಿಗೆ ಬೀಳುವನು, ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.
14 From the fruit of their words a person is filled with good things, and the work of their hands comes back to reward them. ಬಾಯಿಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನು ಅನುಭವಿಸುವನು, ಅವನ ಕೈಕೆಲಸದ ಫಲವು ಅವನಿಗೆ ಪ್ರಾಪ್ತವಾಗುವುದು.
15 The way of a fool seems right in his own eyes, but the wise listen to advice. ಮೂರ್ಖನ ನಡತೆ ಅವನ ದೃಷ್ಟಿಗೆ ಸರಿ, ಜ್ಞಾನಿಯು ಉಚಿತಾಲೋಚನೆಯನ್ನು ಗಮನಿಸುವನು.
16 A fool shows his anger at once, but the prudent overlook an insult. ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು, ಜಾಣನು ಅವಮಾನವನ್ನು ಮರೆಮಾಡುವನು.
17 Whoever speaks the truth gives honest testimony, but a false witness tells lies. ಸತ್ಯವನ್ನಾಡುವವನು ನ್ಯಾಯವನ್ನು ತೋರ್ಪಡಿಸುವನು, ಸುಳ್ಳುಸಾಕ್ಷಿಯು ಅಸತ್ಯವನ್ನು ನುಡಿಯುವನು.
18 Reckless words pierce like a sword, but the tongue of the wise brings healing. ಕತ್ತಿ ತಿವಿದ ಹಾಗೆ ದುಡುಕಿ ಮಾತನಾಡುವವರುಂಟು, ಜ್ಞಾನವಂತರ ಮಾತು ಸ್ವಸ್ಥತೆಯನ್ನು ತರುವುದು.
19 Truthful lips endure forever, but a lying tongue lasts only a moment. ಸತ್ಯದ ತುಟಿ ಶಾಶ್ವತ, ಸುಳ್ಳಿನ ನಾಲಿಗೆ ಕ್ಷಣಿಕ.
20 Deceit fills the hearts of those who plot evil, but joy belongs to those who promote peace. ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ, ಹಿತೋಪದೇಶಕರ ಮನಸ್ಸಿನಲ್ಲಿ ಉಲ್ಲಾಸ.
21 No harm overtakes the righteous, but the wicked are full of trouble. ಸಜ್ಜನರಿಗೆ ಯಾವ ಹಾನಿಯೂ ಸಂಭವಿಸದು, ದುರ್ಜನರಿಗೆ ಕೇಡು ತುಂಬಿ ತುಳುಕುವುದು.
22 Lying lips are detestable to our Father, but those who act faithfully are his delight. ಸುಳ್ಳುತುಟಿ ಯೆಹೋವನಿಗೆ ಅಸಹ್ಯವಾಗಿವೆ. ಸತ್ಯವಂತರು ಆತನಿಗೆ ಆನಂದ ತರುತ್ತಾರೆ.
23 The prudent keep their knowledge to themselves, but the heart of fools blurts out foolishness. ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು.
24 Diligent hands will rule, but laziness ends in forced labor. ಚುರುಕುಗೈಯವನಿಗೆ ರಾಜ್ಯಾಧಿಕಾರ, ಮೈಗಳ್ಳನಿಗೆ ದಾಸತ್ವದ ಬದುಕು.
25 Anxiety weighs down the heart, but a kind word cheers it up. ಕಳವಳವು ಮನಸ್ಸನ್ನು ಕುಗ್ಗಿಸುವುದು, ಕನಿಕರದ ಮಾತು ಅದನ್ನು ಹಿಗ್ಗಿಸುವುದು.
26 The righteous guide their neighbor, but the way of the wicked leads them astray. ಸನ್ಮಾರ್ಗಿಯು ನೆರೆಯವನಿಗೆ ಮಾರ್ಗತೋರಿಸುವನು, ದುರ್ಮಾರ್ಗಿಯು ಮಾರ್ಗತಪ್ಪಿಸುವನು.
27 The lazy do not roast their game, but the diligent prize their possessions. ಮೈಗಳ್ಳನು ಹಿಡಿದ ಬೇಟೆಯನ್ನೂ ಅನುಭವಿಸಲಾರನು, ಸನ್ಮಾರ್ಗದಲ್ಲಿ ನಡೆಯುವವನಿಗೆ ಅಮೂಲ್ಯ ಸಂಪತ್ತು ದೊರಕುವುದು.
28 In the path of righteousness there is life, and along that way there is no death. ಧರ್ಮಮಾರ್ಗದಿಂದ ಜೀವಲಾಭವು, ಆ ಮಾರ್ಗದಲ್ಲಿ ಮರಣವಿಲ್ಲ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]