Skip to content
The Believer's Library

Indian Revised Version (IRV) Kannada - 2019

Proverbs 13 IRVKan

Show IRVKan only
Verse × ×
1 A wise son heeds his father's instruction, but a scoffer does not listen to rebuke. ಜ್ಞಾನಿಯಾದ ಮಗನು ತಂದೆಯ ನೀತಿ ಶಿಕ್ಷಣವನ್ನು ಕೇಳುವನು, ಧರ್ಮನಿಂದಕನೋ ಗದರಿಕೆಯನ್ನು ಕೇಳನು.
2 From the fruit of his mouth a person enjoys good things, but the appetite of the treacherous is for violence. ಬಾಯಿಯ ಫಲವಾಗಿ ಮನುಷ್ಯನು ಸುಖವನ್ನು ಅನುಭವಿಸುವನು, ಬಲಾತ್ಕಾರವೇ ದ್ರೋಹಿಗಳ ಕೋರಿಕೆ.
3 Whoever guards his mouth protects his life, but one who opens his lips wide comes to ruin. ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ, ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.
4 The lazy person craves and gets nothing, but the appetite of the diligent is richly satisfied. ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.
5 The righteous hates falsehood, but the wicked brings shame and disgrace. ಶಿಷ್ಟನು ಮೋಸಕ್ಕೆ ಅಸಹ್ಯಪಟ್ಟು ಅದನ್ನು ಮಾಡಲಾರನು, ದುಷ್ಟನ ನಡತೆಯು ಹೇಸಿಕೆಗೂ, ನಾಚಿಕೆಗೂ ಆಸ್ಪದ.
6 Righteousness guards the one whose way is blameless, but wickedness overthrows the sinner. ಧರ್ಮವು ನಿರ್ದೋಷಿಯನ್ನು ಕಾಯುವುದು, ಅಧರ್ಮವು ದೋಷಿಯನ್ನು ಕೆಡವಿಬಿಡುವುದು.
7 One person pretends to be rich, yet has nothing; another pretends to be poor, yet has great wealth. ಒಬ್ಬನು ಧನವನ್ನು ಸಂಗ್ರಹಿಸಿದರೂ, ಏನೂ ಇಲ್ಲದ ದರಿದ್ರನ ಹಾಗೆ ವರ್ತಿಸುತ್ತಾನೆ, ಮತ್ತೊಬ್ಬನು ಧನವನ್ನೆಲ್ಲಾ ವೆಚ್ಚಮಾಡಿ ಬಡವನಾದರೂ, ಬಹು ಐಶ್ವರ್ಯವಂತನ ಹಾಗೆ ವರ್ತಿಸುತ್ತಾನೆ.
8 A person's wealth may ransom his life, but the poor hears no threat. ಧನವಂತನ ಪ್ರಾಣರಕ್ಷಣೆಗೆ ಅವನ ಧನವೇ ಕ್ರಯ, ಬಡವನಿಗೆ ಯಾವ ಬೆದರಿಕೆಯೂ ಇಲ್ಲ.
9 The light of the righteous shines joyfully, but the lamp of the wicked will be snuffed out. ಶಿಷ್ಟರ ಬೆಳಕು ಬೆಳಗುವುದು, ದುಷ್ಟರ ದೀಪವು ಆರುವುದು.
10 Arrogance breeds nothing but strife, but wisdom is with those who seek advice. ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.
11 Wealth gained by fraud dwindles away, but whoever gathers little by little makes it grow. ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು, ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು.
12 Hope deferred makes the heart sick, but desire fulfilled is a tree of life. ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವುದು, ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.
13 Whoever despises the word brings ruin on himself, but the one who reveres the commandment will be rewarded. ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು, ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸಫಲವನ್ನು ಹೊಂದುವನು.
14 The teaching of the wise is a fountain of life, turning a person away from the snares of death. ಜ್ಞಾನಿಯ ಬೋಧನೆ ಜೀವದ ಬುಗ್ಗೆ, ಅದನ್ನಾಲಿಸುವವನು ಮೃತ್ಯುಪಾಶದಿಂದ ತಪ್ಪಿಸಿಕೊಳ್ಳುವನು.
15 Good sense wins favor, but the way of the treacherous is their undoing. ಸುಬುದ್ಧಿಯು ದಯಾಸ್ಪದವು, ದ್ರೋಹಿಯ ಮಾರ್ಗವು ನಾಶಕರ.
16 Every prudent person acts with knowledge, but a fool flaunts his foolishness. ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳಿವಳಿಕೆಯಿಂದ ನಡೆಸುವನು, ಮೂಢನು ತನ್ನ ಮೂರ್ಖತನವನ್ನು ತೋರ್ಪಡಿಸುವನು.
17 A wicked messenger falls into trouble, but a faithful envoy brings healing. ಕೆಟ್ಟ ದೂತನು ಕೇಡಿಗೆ ಬೀಳುವನು, ನಂಬಿಗಸ್ತನಾದ ರಾಯಭಾರಿಯು ಕ್ಷೇಮದಾಯಕನು.
18 Poverty and shame come to whoever ignores discipline, but the one who heeds correction is honored. ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ, ಗದರಿಕೆಯನ್ನು ಗಮನಿಸುವವನಿಗೆ ಮಾನ.
19 A desire fulfilled is sweet to the soul, but turning away from evil is detestable to fools. ಇಷ್ಟಸಿದ್ಧಿ ಮನಸ್ಸಿಗೆ ಸಿಹಿ, ಕೆಟ್ಟದ್ದನ್ನು ಬಿಡುವುದು ಮೂಢರಿಗೆ ಕಹಿ.
20 Whoever walks with the wise grows wise, but the companion of fools suffers harm. ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.
21 Disaster pursues sinners, but good rewards the righteous. ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು, ಮಂಗಳವು ಸಜ್ಜನರಿಗೆ ಪ್ರತಿಫಲವಾಗುವುದು.
22 A good person leaves an inheritance to his grandchildren, but the sinner's wealth is stored up for the righteous. ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.
23 The unplowed field of the poor could yield abundant food, but it is swept away for lack of justice. ಬಡವರಿಗೆ ಬಂಜರು ಭೂಮಿಯೂ ಬಹು ಬೆಳೆಯನ್ನೀಯುವುದು, ಅನ್ಯಾಯದಿಂದ ಹಾಳಾದ ಸುದ್ದಿಯು ಉಂಟು.
24 Whoever withholds the rod hates his son, but the one who loves him is diligent to discipline him. ಬೆತ್ತ ಹಿಡಿಯದ ತಂದೆ ಮಗನಿಗೆ ಶತ್ರು, ಸುಶಿಕ್ಷಣವನ್ನು ನೀಡುವ ತಂದೆ ಮಗನಿಗೆ ಮಿತ್ರ.
25 The righteous eats to his heart's content, but the belly of the wicked goes hungry. ಶಿಷ್ಟನು ಹೊಟ್ಟೆತುಂಬಾ ಉಣ್ಣುವನು, ದುಷ್ಟನ ಹೊಟ್ಟೆ ಹಸಿದಿರುವುದು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]