Skip to content
The Believer's Library

Indian Revised Version (IRV) Kannada - 2019

Proverbs 14 IRVKan

Show IRVKan only
Verse × ×
1 The wisest of women builds her house, but foolishness tears hers down with her own hands. ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ನಾಶಮಾಡುವಳು.
2 Whoever walks in uprightness fears our Father, but one whose ways are crooked despises him. ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು, ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು.
3 A fool's mouth is a rod for his own pride, but the lips of the wise protect them. ಮೂರ್ಖನ ಮಾತುಗಳು ಅವನ ಬೆನ್ನಿಗೆ ಬೆತ್ತ, ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು.
4 Where there are no oxen, the manger stays clean, but an abundant harvest comes through the strength of an ox. ಎತ್ತುಗಳಿಲ್ಲದಿರುವಾಗ ಗೋದಲಿಯು ಶುದ್ಧ, ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ವೃದ್ಧಿಯಾಗುವುದು.
5 A faithful witness does not lie, but a false witness breathes out lies. ಸತ್ಯಸಾಕ್ಷಿಯು ಸುಳ್ಳಾಡನು, ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.
6 The scoffer seeks wisdom and finds none, but knowledge comes easily to the discerning. ಧರ್ಮನಿಂದಕನಲ್ಲಿ ಹುಡುಕಿದರೂ ಜ್ಞಾನವು ಸಿಕ್ಕದು, ವಿವೇಕಿಗೆ ತಿಳಿವಳಿಕೆಯು ಸುಲಭವಾಗಿ ದೊರೆಯುವುದು.
7 Stay away from a fool, for you will find no knowledge on his lips. ನೀನು ಜ್ಞಾನಹೀನನ ಬಳಿಗೆ ಹೋದರೆ ಅವನ ತುಟಿಗಳಲ್ಲಿ ಯಾವ ತಿಳಿವಳಿಕೆಯನ್ನೂ ಕಾಣಲಾರೆ.
8 The wisdom of the prudent is to discern their way, but the foolishness of fools is deceit. ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.
9 Fools mock the guilt offering, but among the upright there is favor. ಮೂರ್ಖರನ್ನು ಅವರ ದೋಷವೇ ಹಾಸ್ಯಮಾಡುವುದು, ಯಥಾರ್ಥವಂತರಲ್ಲಿ (ದೇವರ) ದಯೆಯಿರುವುದು.
10 The heart knows its own bitterness, and no stranger shares in its joy. ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು, ಅವನ ಆನಂದದಲ್ಲಿಯೂ ಬೇರೆಯವರು ಪಾಲುಗಾರರಾಗುವುದಿಲ್ಲ.
11 The house of the wicked will be destroyed, but the tent of the upright will flourish. ದುಷ್ಟರ ಮನೆಗೆ ನಾಶನ, ಶಿಷ್ಟರ ಗುಡಾರಕ್ಕೆ ಏಳಿಗೆ.
12 There is a way that seems right to a person, but its end is the way of death. ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.
13 Even in laughter the heart may ache, and the end of joy may be grief. ನಗುವವನಿಗೂ ಮನೋವ್ಯಥೆಯುಂಟು, ಉಲ್ಲಾಸದ ಅಂತ್ಯವು ವ್ಯಾಕುಲವೇ.
14 The backslider in heart will be filled with the fruit of his ways, and a good person with the fruit of his. ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.
15 The simple believe anything, but the prudent give thought to their steps. ಮೂಢನು ಯಾವ ಮಾತನ್ನಾದರೂ ನಂಬುವನು, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
16 The wise fear and turn away from evil, but a fool is reckless and overconfident. ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.
17 A quick-tempered person acts foolishly, and one who plots evil schemes is hated. ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.
18 The simple inherit foolishness, but the prudent are crowned with knowledge. ಮೂರ್ಖರಿಗೆ ಮೂರ್ಖತನವೇ ಸ್ವತ್ತು, ಜಾಣರಿಗೆ ಜ್ಞಾನವೇ ಕಿರೀಟ.
19 The evil bow down before the good, and the wicked at the gates of the righteous. ಕೆಟ್ಟವರು ಒಳ್ಳೆಯವರಿಗೆ ಬಾಗುವರು, ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು.
20 The poor are shunned even by their neighbors, but the rich have many friends. ಬಡವನು ನೆರೆಯವನಿಗೂ ಅಸಹ್ಯ, ಧನವಂತನಿಗೆ ಬಹು ಜನ ಮಿತ್ರರು.
21 Whoever despises his neighbor sins, but blessed is the one who is kind to the poor. ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು.
22 Do not those who plot evil go astray? But covenant love and faithfulness belong to those who plan good. ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು.
23 In all hard work there is profit, but mere talk leads only to poverty. ಶ್ರಮೆಯಿಂದ ಸಮೃದ್ಧಿ, ಹರಟೆಯಿಂದ ಕೊರತೆ.
24 The crown of the wise is their wealth, but the foolishness of fools yields only foolishness. ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು, ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ.
25 A truthful witness saves lives, but one who breathes out lies is treacherous. ಸತ್ಯಸಾಕ್ಷಿಯು ಪ್ರಾಣರಕ್ಷಕ, ಸುಳ್ಳುಸಾಕ್ಷಿಯು ವಂಚಕ.
26 In the fear of our Father is strong confidence, and his children will have a refuge. ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು.
27 The fear of our Father is a fountain of life, turning a person away from the snares of death. ಯೆಹೋವನ ಭಯ ಜೀವದ ಬುಗ್ಗೆ, ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ.
28 A large population is a king's glory, but without people a prince is ruined. ಪ್ರಜೆಗಳ ವೃದ್ಧಿ ರಾಜನ ಮಹಿಮೆ, ಪ್ರಜೆಗಳ ನಾಶ ಪ್ರಭುವಿಗೆ ಭಯ.
29 Whoever is slow to anger has great understanding, but a hot temper exalts foolishness. ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.
30 A tranquil heart gives life to the body, but envy rots the bones. ಶಾಂತಗುಣವು ದೇಹಕ್ಕೆ ಜೀವಾಧಾರವು, ಕ್ರೋಧವು ಎಲುಬಿಗೆ ಕ್ಷಯವು.
31 Whoever oppresses the poor reproaches our Father, their Maker, but whoever is kind to the needy honors him. ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.
32 The wicked are brought down by their own evil, but the righteous find refuge even in death. ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.
33 Wisdom rests in the heart of the discerning, but even among fools it makes itself known. ವಿವೇಕಿಯ ಹೃದಯ ಜ್ಞಾನಾಶ್ರಯ, ಜ್ಞಾನಹೀನನ ಹೃದಯದಲ್ಲಿ ಅದು ಕಾಣದು.
34 Righteousness exalts a nation, but sin is a disgrace to any people. ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ.
35 A king's favor rests on a wise servant, but his wrath falls on one who acts shamefully. ಜಾಣನಾದ ಸೇವಕನಿಗೆ ರಾಜನ ಕೃಪೆ, ಮಾನಗೇಡಿಗೆ ರಾಜನ ರೌದ್ರ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]