Skip to content
The Believer's Library

Indian Revised Version (IRV) Kannada - 2019

Proverbs 15 IRVKan

Show IRVKan only
Verse × ×
1 A gentle answer turns away wrath, but a harsh word stirs up anger. ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.
2 The tongue of the wise commends knowledge, but the mouths of fools pour out foolishness. ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.
3 The eyes of our Father are in every place, keeping watch on the evil and the good. ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು.
4 A gentle tongue is a tree of life, but a corrupt tongue crushes the spirit. ಸಂತೈಸುವ ನಾಲಿಗೆ ಜೀವವೃಕ್ಷವು, ಬಲತ್ಕರಿಸುವ ನಾಲಿಗೆ ಮನಮುರಿಯುವುದು.
5 A fool despises his father's instruction, but whoever heeds correction is prudent. ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು, ಗದರಿಕೆಯನ್ನು ಗಮನಿಸುವವನು ಜಾಣನು.
6 In the house of the righteous there is much treasure, but the income of the wicked brings trouble. ಶಿಷ್ಟನ ಮನೆಯಲ್ಲಿ ದೊಡ್ಡ ನಿಧಿ, ದುಷ್ಟನ ಆದಾಯವು ನಷ್ಟಕ್ಕೆ ದಾರಿ.
7 The lips of the wise spread knowledge, but not so the hearts of fools. ಜ್ಞಾನಿಗಳ ತುಟಿಗಳು ತಿಳಿವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವುದೇ ಇಲ್ಲ.
8 The sacrifice of the wicked is detestable to our Father, but the prayer of the upright is his delight. ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.
9 The way of the wicked is detestable to our Father, but he loves the one who pursues righteousness. ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ, ಧರ್ಮಾಸಕ್ತನು ಆತನಿಗೆ ಪ್ರಿಯ.
10 There is severe discipline for the one who leaves the path, and whoever hates correction will die. ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ, ಗದರಿಕೆಯನ್ನು ಕೇಳದವನಿಗೆ ಸಾವು.
11 The grave and Destruction lie open before our Father; how much more the hearts of all people! ಪಾತಾಳವೂ, ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಆತನಿಗೆ ಮತ್ತೂ ಸ್ಪಷ್ಟ.
12 A scoffer does not love to be corrected; he will not go to the wise. ಧರ್ಮನಿಂದಕನು ಗದರಿಕೆಯನ್ನು ಕೇಳನು, ಜ್ಞಾನಿಗಳ ಸಂಗಡ ಸೇರನು.
13 A glad heart makes a cheerful face, but a sorrowful heart crushes the spirit. ಹರ್ಷ ಹೃದಯದಿಂದ ಹಸನ್ಮುಖ, ಮನೋವ್ಯಥೆಯಿಂದ ಆತ್ಮಭಂಗ.
14 A discerning heart seeks knowledge, but the mouths of fools feed on foolishness. ವಿವೇಕಿಯ ಹೃದಯ ತಿಳಿವಳಿಕೆಯನ್ನು ಹುಡುಕುವುದು, ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವುದು.
15 All the days of the afflicted are hard, but a cheerful heart has a continual feast. ದೀನನ ದಿನಗಳೆಲ್ಲಾ ದುಃಖಭರಿತ, ಹರ್ಷಹೃದಯನಿಗೆ ನಿತ್ಯವೂ ಔತಣ.
16 Better a little with the fear of our Father than great treasure and trouble with it. ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪ ಧನವೇ ಲೇಸು.
17 Better a meal of vegetables where there is love than a fattened ox with hatred. ದ್ವೇಷವಿರುವಲ್ಲಿ ಮೃಷ್ಟಾನ್ನಕ್ಕಿಂತಲೂ, ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ.
18 A hot-tempered man stirs up strife, but one who is slow to anger calms a quarrel. ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.
19 The way of the lazy is like a hedge of thorns, but the path of the upright is a level highway. ಸೋಮಾರಿಯ ಮಾರ್ಗ ಮುಳ್ಳುಬೇಲಿ, ಯಥಾರ್ಥವಂತನ ಮಾರ್ಗ ರಾಜಮಾರ್ಗ.
20 A wise son makes a glad father, but a foolish man despises his mother. ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು, ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.
21 Foolishness is joy to one who lacks sense, but a person of understanding walks a straight path. ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುವನು, ಬುದ್ಧಿವಂತನು ತನ್ನ ಮಾರ್ಗವನ್ನು ಸರಳಮಾಡಿಕೊಳ್ಳುವನು.
22 Plans fail without counsel, but with many advisers they succeed. ಆಲೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹು ಮಂದಿ ಆಲೋಚನಾಪರರು ಇರುವಲ್ಲಿ ಅವು ನೆರವೇರುವವು.
23 A person finds joy in giving an apt reply, and how good is a word at the right time! ತಕ್ಕ ಉತ್ತರಕೊಡುವವನಿಗೆ ಎಷ್ಟೋ ಸಂತೋಷ! ಸಮಯೋಚಿತವಾದ ನುಡಿಯಲ್ಲಿ ಎಷ್ಟೋ ಸ್ವಾರಸ್ಯ!
24 The path of life leads upward for the prudent, turning him away from the grave below. ಜೀವದ ಮಾರ್ಗವು ವಿವೇಕಿಯನ್ನು ಮೇಲಕ್ಕೆತ್ತುವುದು; ಅದು ಅವನನ್ನು ಪಾತಾಳದಿಂದ ತಪ್ಪಿಸುವುದು.
25 Our Father tears down the house of the proud, but he protects the widow's boundary. ಯೆಹೋವನು ಗರ್ವಿಷ್ಠನ ಮನೆಯನ್ನು ಕೆಡವಿಬಿಡುವನು; ವಿಧವೆಯ ಮೇರೆಯನ್ನು ನೆಲೆಗೊಳಿಸುವನು.
26 The thoughts of the wicked are detestable to our Father, but gracious words are pure. ಕುಯುಕ್ತಿಯು ಯೆಹೋವನಿಗೆ ಅಸಹ್ಯ, ನಯನುಡಿಯು ಆತನಿಗೆ ಪ್ರಿಯ.
27 Whoever is greedy for unjust gain brings trouble on his own household, but the one who hates bribes will live. ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.
28 The heart of the righteous weighs how to answer, but the mouth of the wicked pours out evil. ಶಿಷ್ಟನ ಹೃದಯ ವಿವೇಚಿಸಿ ಉತ್ತರಕೊಡುತ್ತದೆ, ದುಷ್ಟನ ಬಾಯಿ ಕೆಟ್ಟದ್ದನ್ನು ಕಾರುತ್ತದೆ.
29 Our Father is far from the wicked, but he hears the prayer of the righteous. ಯೆಹೋವನು ದುಷ್ಟರಿಗೆ ದೂರ, ಶಿಷ್ಟರ ಬಿನ್ನಹಕ್ಕೆ ಹತ್ತಿರ.
30 The light of the eyes brings joy to the heart, and good news refreshes the bones. ಹಸನ್ಮುಖ ಹೃದಯಕ್ಕೆ ಆನಂದ, ಶುಭಸಮಾಚಾರ ದೇಹಕ್ಕೆ ಆರೋಗ್ಯ.
31 The ear that listens to life-giving correction will dwell among the wise. ಜೀವಪ್ರದವಾದ ಗದರಿಕೆಗೆ ಕಿವಿಗೊಡುವವನು, ಜ್ಞಾನಿಗಳ ನಡುವೆ ನೆಲೆಗೊಳ್ಳುವನು.
32 Whoever ignores instruction despises himself, but whoever listens to correction gains understanding. ಶಿಕ್ಷೆಯನ್ನು ತಿರಸ್ಕರಿಸುವವನು ತನ್ನನ್ನೇ ನಿರಾಕರಿಸಿಕೊಳ್ಳುವನು, ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು.
33 The fear of our Father is the instruction of wisdom, and humility comes before honor. ಯೆಹೋವನ ಭಯವೇ ಜ್ಞಾನೋಪದೇಶ, ಗೌರವಕ್ಕೆ ಮೊದಲು ವಿನಯ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]