Skip to content
The Believer's Library

Indian Revised Version (IRV) Kannada - 2019

Proverbs 17 IRVKan

Show IRVKan only
Verse × ×
1 Better a dry crust eaten in peace than a house full of feasting with strife. ವ್ಯಾಜ್ಯದ ಮನೆಯಲ್ಲಿ ತುಂಬಿದ ಔತಣಕ್ಕಿಂತಲೂ, ಸಮಾಧಾನದ ಒಣತುತ್ತೇ ಮೇಲು.
2 A prudent servant will rule over a disgraceful son and will share the inheritance among the brothers. ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರಮಾಡುವನು, ಮನೆಮಕ್ಕಳೊಂದಿಗೆ ಬಾಧ್ಯತೆಯನ್ನು ಹೊಂದುವನು.
3 The crucible is for silver and the furnace for gold, but our Father tests hearts. ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.
4 An evildoer listens to wicked lips; a liar listens to a destructive tongue. ಕೆಡುಕನು ಕೆಟ್ಟ ತುಟಿಗಳನ್ನು ಗಮನಿಸುವನು, ಸುಳ್ಳುಗಾರನು ನಾಶನದ ನಾಲಿಗೆಗೆ ಕಿವಿಗೊಡುವನು.
5 Whoever mocks the poor insults his Maker; whoever gloats over disaster will not go unpunished. ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.
6 Grandchildren are the crown of the aged, and the glory of children is their parents. ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ, ತಂದೆತಾಯಿಗಳು ಮಕ್ಕಳಿಗೆ ಭೂಷಣ.
7 Fine speech is not fitting for a fool—still less are lying lips for a noble. ಉತ್ತಮವಾದ ಮಾತು ಮೂರ್ಖನಿಗೆ ಅಯುಕ್ತ, ಸುಳ್ಳುಮಾತು ಉತ್ತಮನಿಗೆ ಮತ್ತೂ ಅಯುಕ್ತ.
8 A bribe seems like a magic charm to the one who gives it; wherever he turns, he thinks he will succeed. ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, ಎಲ್ಲಿ ಹೋದರೂ ಅವನಿಗೆ ಅನುಕೂಲವೇ.
9 Whoever covers an offense seeks love, but whoever keeps bringing it up separates close friends. ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು, ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು.
10 A rebuke goes deeper into a person of understanding than one hundred blows into a fool. ಮಂದಮತಿಗೆ ನೂರು ಪೆಟ್ಟು ಹೊಡೆಯುವುದಕ್ಕಿಂತಲೂ, ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ.
11 A rebellious man seeks only evil, and a cruel messenger will be sent against him. ದುರಾತ್ಮನಿಗೆ ದಂಗೆಯ ಮೇಲೆಯೇ ಮನಸ್ಸು, ಕ್ರೂರದೂತನು ಅವನನ್ನು ಆಕ್ರಮಿಸುವನು.
12 Better to meet a bear robbed of her cubs than a fool in his foolishness. ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ, ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರಾಗುವುದು ಲೇಸು.
13 If anyone returns evil for good, evil will never leave his house. ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡು ತಪ್ಪದು.
14 Starting a quarrel is like breaching a dam, so drop the dispute before it bursts out. ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.
15 Whoever justifies the wicked and whoever condemns the righteous—both alike are detestable to our Father. ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.
16 Why should a fool have money in hand to buy wisdom, when he has no heart to learn? ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.
17 A friend loves at all times, and a brother is born for a time of trouble. ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.
18 One who lacks sense shakes hands on a pledge and puts up security for his neighbor. ನೆರೆಯವನಿಗಾಗಿ ಪ್ರಮಾಣಮಾಡಿ ಹೊಣೆಯಾದವನು ಬುದ್ಧಿಹೀನನೇ ಸರಿ.
19 Whoever loves wrongdoing loves strife; whoever builds his gate high invites destruction. ಪಾಪಪ್ರಿಯನು ಕಲಹಪ್ರಿಯ, ಸೊಕ್ಕಿನಿಂದ ಮಾತನಾಡುವವನು ಕೇಡು ಬರಮಾಡಿಕೊಳ್ಳುವನು.
20 A crooked heart finds no good, and a twisted tongue falls into trouble. ವಕ್ರ ಹೃದಯನು ಶುಭವನ್ನು ಪಡೆಯನು, ಕೆಟ್ಟ ನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು.
21 Whoever fathers a fool brings grief on himself; the father of a godless fool has no joy. ಮೂರ್ಖನನ್ನು ಹೆತ್ತವರಿಗೆ ವ್ಯಥೆ, ಮೂರ್ಖನ ತಂದೆಗೆ ವ್ಯಸನ.
22 A joyful heart is good medicine, but a crushed spirit dries up the bones. ಹರ್ಷಹೃದಯವು ಒಳ್ಳೆಯ ಔಷಧ, ಕುಗ್ಗಿದ ಮನದಿಂದ ಅನಾರೋಗ್ಯ.
23 A wicked man takes a bribe in secret to pervert the ways of justice. ದುಷ್ಟನು ಲಂಚವನ್ನು ಗುಪ್ತವಾಗಿ ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುವನು.
24 A discerning person keeps wisdom in view, but the eyes of a fool wander to the ends of the earth. ವಿವೇಕಿಗೆ ಜ್ಞಾನವೇ ಗುರಿಯಾಗಿರುವುದು, ಮೂಢನ ದೃಷ್ಟಿಯು ದಿಗಂತಗಳಲ್ಲಿಯೂ ಅಲೆಯುವುದು.
25 A foolish son is a grief to his father and bitterness to the mother who bore him. ಜ್ಞಾನಹೀನನಾದ ಮಗನು ತಂದೆಗೆ ಕಿರಿಕಿರಿ, ತಾಯಿಗೆ ಕರಕರೆ.
26 To punish the righteous is not good, nor to flog the noble for their integrity. ಶಿಷ್ಟನಿಗೆ ದಂಡನೆ ಯುಕ್ತವಲ್ಲ, ಧರ್ಮಿಷ್ಠನಿಗೆ ಪೆಟ್ಟು ಅಧರ್ಮ.
27 Whoever holds back his words has knowledge, and one with a calm spirit is a person of understanding. ಮಿತವಾಗಿ ಮಾತನಾಡುವವನು ಜ್ಞಾನಿ, ಶಾಂತಾತ್ಮನು ವಿವೇಕಿ.
28 Even a fool who keeps silent is thought wise; when he closes his lips, he seems discerning. ಮೂಢನು ಕೂಡ ಸುಮ್ಮನಿದ್ದರೆ ಜ್ಞಾನಿಯೆಂತಲೂ, ತುಟಿಗಳನ್ನು ಬಿಗಿಹಿಡಿದರೆ ವಿವೇಕಿಯೆಂತಲೂ ಅನ್ನಿಸಿಕೊಳ್ಳುವನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]