Skip to content
The Believer's Library

Indian Revised Version (IRV) Kannada - 2019

Proverbs 18 IRVKan

Show IRVKan only
Verse × ×
1 Whoever isolates himself pursues his own desire; he lashes out against all sound wisdom. ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು.
2 A fool takes no pleasure in understanding, but only in airing his own opinions. ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ.
3 When wickedness comes, contempt comes too, and with dishonor comes reproach. ದುರಾಚಾರವಿದ್ದಲ್ಲಿ ತಾತ್ಸಾರ; ಅವಮಾನವಿದ್ದಲ್ಲಿ ಧಿಕ್ಕಾರ.
4 The words of a person's mouth are deep waters; the fountain of wisdom is a flowing stream. ಸತ್ಪುರುಷನ ನುಡಿಯು ಆಳವಾದ ನೀರು, ಜ್ಞಾನದ ಬುಗ್ಗೆ, ಹರಿಯುವ ತೊರೆ.
5 It is not good to show partiality to the wicked, denying justice to the righteous. ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವುದು ಅಧರ್ಮ.
6 A fool's lips bring strife, and his mouth invites a beating. ಜ್ಞಾನಹೀನನ ತುಟಿಗಳು ಜಗಳವನ್ನು ಉಂಟುಮಾಡುತ್ತವೆ, ಅವನ ಬಾಯಿ ಪೆಟ್ಟುತಿನ್ನುವುದಕ್ಕೆ ಕೂಗಿಕೊಳ್ಳುತ್ತದೆ.
7 A fool's mouth is his ruin, and his lips are a snare to his soul. ಜ್ಞಾನಹೀನನಿಗೆ ಬಾಯಿ ನಾಶ, ತುಟಿಗಳು ಪಾಶ.
8 The words of a gossip are like choice morsels; they go down into the inmost being. ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಹೊಟ್ಟೆಯೊಳಕ್ಕೇ ಇಳಿಯುವವು.
9 Whoever is slack in his work is brother to one who destroys. ಕೆಲಸಗಳ್ಳನು ಕೆಡುಕನಿಗೆ ತಮ್ಮ.
10 The name of our Father is a strong tower; the righteous runs into it and is safe. ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.
11 A rich man's wealth is his fortified city; in his imagination it is like a high wall. ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದು, ಎತ್ತರವಾದ ಗೋಡೆಯೆಂದು ಭಾವಿಸಿಕೊಳ್ಳುತ್ತಾನೆ.
12 Before destruction the human heart is proud, but humility comes before honor. ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.
13 If one answers before he listens, it is his foolishness and his shame. ಗಮನಿಸದೆ ಉತ್ತರಕೊಡುವವನು, ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.
14 A person's spirit can sustain him through sickness, but a crushed spirit—who can bear it? ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು, ಆತ್ಮವೇ ನೊಂದರೆ ಸಹಿಸುವವರು ಯಾರು?
15 The discerning heart acquires knowledge, and the ear of the wise seeks it out. ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು, ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು.
16 A person's gift opens the way for him and brings him before important people. ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.
17 The first to state his case seems right, until another comes and examines him. ಮೊದಲು ವಾದಿಸುವವನು ನ್ಯಾಯವಾದಿ ಎಂದು ತೋರುವನು, ಪ್ರತಿವಾದಿ ಎದ್ದ ಮೇಲೆ ಅವನ ಪರೀಕ್ಷೆ ಆಗುವುದು.
18 Casting the lot settles disputes and separates strong opponents. ಚೀಟು ಹಾಕುವುದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವುದು.
19 An offended brother is harder to win than a fortified city, and disputes are like the bars of a fortress. ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.
20 From the fruit of a person's mouth his stomach is satisfied; with the yield of his lips he is filled. ಮನುಷ್ಯನು ತನ್ನ ಬಾಯಿಯ ಬೆಳೆಯನ್ನು ಹೊಟ್ಟೆ ತುಂಬಾ ಉಣ್ಣುವನು, ತನ್ನ ತುಟಿಗಳ ಫಲವನ್ನು ಸಾಕಷ್ಟು ತಿನ್ನುವನು.
21 Death and life are in the power of the tongue, and those who love it will eat its fruit. ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು,
22 He who finds a wife finds what is good and receives favor from our Father. ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.
23 The poor person pleads for mercy, but the rich answers harshly. ಬಡವನು ಬಿನ್ನೈಸುವನು, ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.
24 A man of many companions may come to ruin, but there is a friend who sticks closer than a brother. ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]