Skip to content
The Believer's Library

Indian Revised Version (IRV) Kannada - 2019

Proverbs 19 IRVKan

Show IRVKan only
Verse × ×
1 Better is a poor person who walks in his integrity than one whose words are crooked and is a fool. ಕಪಟವಾಗಿ ಮಾತನಾಡುವ ಮೂಢನಿಗಿಂತಲೂ, ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ.
2 Also, desire without knowledge is not good, and whoever acts in haste misses the way. ತಿಳಿವಳಿಕೆಯಿಲ್ಲದೆ ಕೋರುವುದು ಯುಕ್ತವಲ್ಲ, ದುಡುಕುವ ಕಾಲು ದಾರಿತಪ್ಪುವುದು.
3 A person's own foolishness ruins his way, yet his heart rages against our Father. ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು, ಯೆಹೋವನ ಮೇಲೆ ಕುದಿಯುವನು.
4 Wealth adds many friends, but the poor is separated from his friend. ಭಾಗ್ಯವಂತನಿಗೆ ಬಹು ಮಂದಿ ಸ್ನೇಹಿತರು, ಬಡವನಿಗೆ ಇದ್ದ ಸ್ನೇಹಿತನೂ ದೂರವಾಗುವನು.
5 A false witness will not go unpunished, and one who breathes out lies will not escape. ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು.
6 Many seek the favor of a generous person, and everyone is a friend to one who gives gifts. ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು, ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೇ.
7 All the brothers of a poor person hate him; how much more do his friends keep far from him! He calls after them, but they are gone. ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು, ಹೌದು, ಮಿತ್ರರೂ ಅವನಿಗೆ ದೂರವಾಗುವರು. ಅವರ ಬರೀ ಮಾತುಗಳನ್ನು ನಂಬಿ ಹಿಂಬಾಲಿಸಿದರೆ ಏನೂ ಸಿಕ್ಕದು.
8 Whoever gets wisdom loves his own soul; whoever guards understanding will find good. ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು, ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.
9 A false witness will not go unpunished, and one who breathes out lies will perish. ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು.
10 Luxury is not fitting for a fool—much less for a servant to rule over princes. ಮೂಢನಿಗೆ ಸುಖಭೋಗ ಜೀವನ ಯುಕ್ತವಲ್ಲ, ದಾಸನಿಗೆ ದೊರೆಗಳ ಮೇಲಣ ದೊರೆತನ ಯುಕ್ತವಲ್ಲ.
11 The good sense of a person makes him slow to anger, and it is his glory to overlook an offense. ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ.
12 A king's wrath is like the roaring of a lion, but his favor is like dew on the grass. ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.
13 A foolish son is ruin to his father, and a wife's quarreling is a continual dripping. ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಜಗಳವಾಡುವ ಹೆಂಡತಿಯು ತಟತಟನೆ ತೊಟ್ಟಿಕ್ಕುವ ಹನಿ.
14 House and wealth are an inheritance from one's ancestors, but a prudent wife is from our Father. ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.
15 Laziness casts into deep sleep, and an idle person will go hungry. ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.
16 Whoever keeps the commandment keeps his life; whoever despises his ways will die. ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು.
17 Whoever is generous to the poor lends to our Father, and our Father will repay him for his deed. ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.
18 Discipline your son while there is hope, and do not set your heart on his destruction. ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, ಹಾಳುಮಾಡಲು ಮನಸ್ಸು ಮಾಡಬೇಡ,
19 A person of great wrath must pay the penalty; for if you rescue him, you will only have to do it again. ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ, ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು.
20 Listen to counsel and accept discipline, that you may gain wisdom in the days to come. ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.
21 Many are the plans in a person's heart, but it is the counsel of our Father that will stand. ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.
22 What is desired in a person is covenant love, and a poor person is better than a liar. ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ, ಬಡವನಾಗಿರುವುದು ಉತ್ತಮ.
23 The fear of our Father leads to life, and whoever has it rests satisfied, untouched by harm. ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು.
24 The sluggard buries his hand in the dish and will not even bring it back to his mouth. ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರಕ್ಕೆ ತರಲಾರನು.
25 Strike a mocker, and the simple will learn prudence; reprove a person of understanding, and he will gain knowledge. ಧರ್ಮನಿಂದಕನಿಗೆ ಪೆಟ್ಟುಹೊಡೆ, ನೋಡಿದ ಅವಿವೇಕಿ ಜಾಣನಾಗುವನು, ವಿವೇಕಿಯನ್ನು ಗದರಿಸು, ತಾನೇ ತಿಳಿವಳಿಕೆಯನ್ನು ಗ್ರಹಿಸುವನು.
26 Whoever does violence to his father and drives away his mother is a son who brings shame and disgrace. ತಂದೆಯನ್ನು ಹೊಡೆದು, ತಾಯಿಯನ್ನು ಓಡಿಸುವ ಮಗನು, ನಾಚಿಕೆಯನ್ನು ಮತ್ತು ಅವಮಾನವನ್ನು ಉಂಟುಮಾಡುವನು.
27 Stop listening to instruction, my son, and you will stray from the words of knowledge. ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ, ಉಪದೇಶ ಕೇಳುವುದನ್ನೇ ಬಿಟ್ಟುಬಿಡು.
28 A worthless witness mocks at justice, and the mouth of the wicked gulps down wickedness. ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು, ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವುದು.
29 Punishment is prepared for mockers, and beatings for the backs of fools. ಧರ್ಮನಿಂದಕರಿಗೆ ದಂಡನೆಯ ತೀರ್ಪು ಸಿದ್ಧ, ಮೂಢರ ಬೆನ್ನಿಗೆ ಪೆಟ್ಟು ಖಂಡಿತ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]