Skip to content
The Believer's Library

Indian Revised Version (IRV) Kannada - 2019

Proverbs 2 IRVKan

Show IRVKan only
Verse × ×
1 My son, if you receive my words and store up my commandments within you, ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,
2 making your ear attentive to wisdom and turning your heart toward understanding; ನಿನ್ನ ಕಿವಿಯನ್ನು ಜ್ಞಾನದ ಕಡೆಗೂ, ಹೃದಯವನ್ನು ವಿವೇಕದ ಕಡೆಗೂ ತಿರುಗಿಸು;
3 yes, if you call out for insight and raise your voice for understanding, ಬುದ್ಧಿಗಾಗಿ ಮೊರೆಯಿಟ್ಟು, ವಿವೇಕಕ್ಕಾಗಿ ಕೂಗಿಕೋ.
4 if you seek it like silver and search for it as for hidden treasure, ಅದನ್ನು ಬೆಳ್ಳಿಯಂತೆಯು ಮತ್ತು ನಿಕ್ಷೇಪದಂತೆಯು ಹುಡುಕು;
5 then you will understand the fear of our Father and find the knowledge of our Father. ಆಗ ನೀನು ಯೆಹೋವನ ಭಯವನ್ನು ಅರಿತು, ದೈವಜ್ಞಾನವನ್ನು ಪಡೆದುಕೊಳ್ಳುವಿ.
6 For our Father gives wisdom; from his mouth come knowledge and understanding. ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.
7 He stores up sound wisdom for the upright; he is a shield to those who walk in integrity, ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು. ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು,
8 guarding the paths of justice and watching over the way of his faithful ones. ನ್ಯಾಯಮಾರ್ಗವನ್ನು ರಕ್ಷಿಸುತ್ತಾ, ತನ್ನ ಭಕ್ತರ ದಾರಿಯನ್ನು ನೋಡಿಕೊಳ್ಳುವನು.
9 Then you will understand righteousness and justice and fairness—every good path. ಹೀಗಿರಲು ನೀನು ನೀತಿ, ನ್ಯಾಯ, ಧರ್ಮವನ್ನೂ ಅಂದರೆ ಸಕಲ ಸನ್ಮಾರ್ಗಗಳನ್ನು ತಿಳಿದುಕೊಳ್ಳುವಿ.
10 For wisdom will enter your heart, and knowledge will be pleasant to your soul; ಜ್ಞಾನವು ನಿನ್ನ ಹೃದಯದೊಳಗೆ ಪ್ರವೇಶಿಸುವುದು, ತಿಳಿವಳಿಕೆಯು ನಿನ್ನ ಆತ್ಮಕ್ಕೆ ಹಿತಕರವಾಗಿರುವುದು.
11 discretion will watch over you, and understanding will guard you, ಬುದ್ಧಿಯು ನಿನಗೆ ಕಾವಲಾಗಿರುವುದು, ವಿವೇಕವು ನಿನ್ನನ್ನು ಕಾಪಾಡುವುದು.
12 rescuing you from the way of evil, from men who speak twisted things, ಇದರಿಂದ ನೀನು ದುರ್ಮಾರ್ಗದಿಂದಲೂ, ಕೆಟ್ಟ ಮಾತನಾಡುವವರಿಂದಲೂ ತಪ್ಪಿಸಿಕೊಳ್ಳುವಿ.
13 who abandon the paths of uprightness to walk in the ways of darkness, ಅವರಾದರೋ ಕತ್ತಲೆಯ ಮಾರ್ಗಗಳನ್ನು ಹಿಡಿಯಬೇಕೆಂದು, ಧರ್ಮಮಾರ್ಗಗಳನ್ನು ತೊರೆದುಬಿಡುವರು.
14 who delight in doing evil and rejoice in the perversity of evil, ಅವರು ಕೆಟ್ಟದ್ದನ್ನು ಮಾಡುವುದರಲ್ಲಿ ಸಂತೋಷಿಸಿ, ಕೆಟ್ಟವರ ದುಷ್ಟತನದಲ್ಲಿ ಆನಂದಿಸುವರು.
15 whose paths are crooked, and who are devious in their ways. ಅವರ ಮಾರ್ಗಗಳು ವಕ್ರವಾಗಿವೆ. ಅವರ ನಡತೆಗಳು ದುರ್ನಡತೆಗಳೇ.
16 Wisdom will rescue you also from the forbidden woman, from the stranger with her smooth words, ವಿವೇಕವು ನಿನ್ನನ್ನು ಜಾರಳಿಂದ ಅಂದರೆ ಸವಿಮಾತನಾಡುವ ಪರಸ್ತ್ರೀಯಿಂದ ತಪ್ಪಿಸುವುದು.
17 who forsakes the companion of her youth and forgets the covenant of her Father. ಅವಳು ತನ್ನ ಯೌವನಕಾಲದ ಕಾಂತನನ್ನು ತ್ಯಜಿಸಿ, ತನ್ನ ದೇವರ ಮುಂದೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಟ್ಟಿದ್ದಾಳೆ.
18 For her house sinks down to death, and her paths to the dead. ಅವಳ ಮನೆಯು ಪಾತಾಳಕ್ಕೆ ಇಳಿಯುವ ದಾರಿ, ಅವಳ ಮಾರ್ಗಗಳು ಪ್ರೇತಲೋಕಕ್ಕೆ ಹೋಗುತ್ತವೆ.
19 None who go to her return, nor do they reach the paths of life. ಅವಳ ಬಳಿಗೆ ಹೋಗುವವರು ಯಾರೂ ಹಿಂದಿರುಗುವುದಿಲ್ಲ, ಅವರಿಗೆ ಜೀವದ ಮಾರ್ಗವು ದೊರೆಯುವುದೇ ಇಲ್ಲ.
20 So you will walk in the way of the good and keep to the paths of the righteous. ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ ವಿವೇಕವು ನಿನ್ನನ್ನು ಪ್ರೇರೇಪಿಸಿ, ನೀತಿವಂತರ ದಾರಿಗಳನ್ನು ಹಿಡಿಯುವ ಹಾಗೆ ಮಾಡುವುದು.
21 For the upright will live in the land, and those of integrity will remain in it; ಯಥಾರ್ಥವಂತರು ದೇಶದಲ್ಲಿ ಸ್ವತಂತ್ರರಾಗಿರುವರು, ನಿರ್ದೋಷಿಗಳು ಅದರಲ್ಲಿ ನೆಲೆಯಾಗಿರುವರು.
22 but the wicked will be cut off from the land, and the treacherous will be torn away from it. ದುಷ್ಟರಾದರೋ ದೇಶದೊಳಗಿಂದ ತೆಗೆದುಹಾಕಲ್ಪಡುವರು, ದ್ರೋಹಿಗಳು ನಿರ್ಮೂಲರಾಗುವರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]