Skip to content
The Believer's Library

Indian Revised Version (IRV) Kannada - 2019

Proverbs 20 IRVKan

Show IRVKan only
Verse × ×
1 Wine is a mocker, strong drink a brawler, and whoever staggers under it is not wise. ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.
2 The terror of a king is like the growl of a lion; whoever provokes him to anger forfeits his own life. ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.
3 It is an honor for a person to keep clear of strife, but every fool is quick to quarrel. ವ್ಯಾಜ್ಯಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು, ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ.
4 A lazy person will not plow in autumn; so at harvest he looks for a crop and finds nothing. ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?
5 The purposes of a person's heart are deep waters, but one who has understanding draws them out. ಮನುಷ್ಯನ ಹೃದಯಸಂಕಲ್ಪವು ಆಳವಾದ ಬಾವಿಯ ನೀರು. ಆದರೆ ವಿವೇಕಿಯು ಅದನ್ನು ಸೇದಬಲ್ಲನು.
6 Many a person proclaims his own loyal love, but a faithful one—who can find? ಸ್ನೇಹಿತರೆಂದು ಹೇಳಿಕೊಳ್ಳುವವರು ಬಹಳ ಜನರು, ನಂಬಿಗಸ್ತನಾದ ಸ್ನೇಹಿತನು ಎಲ್ಲಿ ಸಿಕ್ಕುವನು?
7 The righteous walk in their integrity; blessed are their children after them! ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು, ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.
8 A king seated on the throne of judgment winnows out all evil with his eyes. ರಾಜನು ನ್ಯಾಯಾಸನಾರೂಢನಾಗಿ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.
9 Who can say, "I have kept my heart pure; I am cleansed from my sin"? “ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪವನ್ನು ತೊಳೆದುಕೊಂಡು ನಿರ್ಮಲನಾಗಿದ್ದೇನೆ” ಎಂದು ಯಾರು ಹೇಳಬಲ್ಲರು?
10 Unequal weights and unequal measures—our Father detests them both. ತೂಕದ ಕಲ್ಲನ್ನೂ, ಅಳತೆಯ ಪಾತ್ರೆಯನ್ನೂ ಹೆಚ್ಚಿಸುವುದು, ತಗ್ಗಿಸುವುದು ಇವೆರಡೂ ಯೆಹೋವನಿಗೆ ಅಸಹ್ಯ.
11 Even a child is known by his actions, by whether his conduct is pure and upright. ಒಬ್ಬ ಹುಡುಗನಾದರೂ ಶುದ್ಧವೂ, ಸತ್ಯವೂ ಆದ ನಡತೆಯಿಂದಲೇ, ತನ್ನ ಗುಣವನ್ನು ತೋರ್ಪಡಿಸಿಕೊಳ್ಳುವನು.
12 The hearing ear and the seeing eye—our Father made them both. ಕೇಳುವ ಕಿವಿ, ನೋಡುವ ಕಣ್ಣು, ಇವೆರಡನ್ನೂ ಯೆಹೋವನು ನಿರ್ಮಿಸಿದ್ದಾನೆ.
13 Do not love sleep, or you will grow poor; open your eyes, and you will have plenty of bread. ನಿದ್ರಾನಿರತನಾಗಿರಬೇಡ! ಬಡವನಾದೀಯೆ, ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ.
14 "Worthless, worthless!" says the buyer—then off he goes and boasts of his bargain. ಕೊಳ್ಳುವವನು, “ಚೆನ್ನಾಗಿಲ್ಲ, ಚೆನ್ನಾಗಿಲ್ಲ” ಎಂದು ಹೇಳುತ್ತಾನೆ, ಕೊಂಡುಕೊಂಡು ಹೋಗಿ ಹೆಚ್ಚಳಪಡುತ್ತಾನೆ.
15 There is gold and an abundance of jewels, but lips that speak knowledge are a rare treasure. ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯವಾದ ಆಭರಣ.
16 Take the garment of one who puts up security for a stranger; hold it as a pledge when he does so for foreigners. ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆ ಮಾಡಿಕೋ.
17 Bread gained by deceit tastes sweet, but afterward the mouth is full of gravel. ಮೋಸದಿಂದ ಸಿಕ್ಕಿದ ಆಹಾರವು ಮನುಷ್ಯನಿಗೆ ರುಚಿ, ಆ ಮೇಲೆ ಅವನ ಬಾಯಿ ಮರಳಿನಿಂದ ತುಂಬುವುದು.
18 Plans are established by counsel; so wage war only with wise guidance. ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.
19 A gossip betrays a confidence; so do not keep company with a babbler. ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.
20 Whoever curses his father or mother—his lamp will be snuffed out in deepest darkness. ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು, ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವುದು.
21 An inheritance gained too quickly at the start will not be blessed in the end. ಮೊದಲು ಬೇಗನೆ ಬಾಚಿಕೊಂಡ ಸ್ವತ್ತು, ಕೊನೆಯಲ್ಲಿ ಕಳೆದು ಹೋಗುವುದು.
22 Do not say, "I will pay back evil for evil." Wait for our Father, and he will deliver you. ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ, ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು.
23 Our Father detests unequal weights, and dishonest scales are no good. ತೂಕದ ಕಲ್ಲನ್ನು ಹೆಚ್ಚಿಸುವುದು, ತಗ್ಗಿಸುವುದು ಯೆಹೋವನಿಗೆ ಅಸಹ್ಯ, ಮೋಸದ ತಕ್ಕಡಿ ಒಳ್ಳೆಯದಲ್ಲ.
24 A person's steps are directed by our Father; how then can anyone understand his own way? ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ, ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಂಡಾನು?
25 It is a trap to rashly dedicate something and only later reconsider the vow. “ಇದು ದೇವರಿಗಾಗಿ” ಎಂದು ದುಡುಕಿ ಹರಕೆಮಾಡುವುದು, ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು.
26 A wise king winnows out the wicked and drives the threshing wheel over them. ಜ್ಞಾನಿಯಾದ ಅರಸನು ದುಷ್ಟರ ಮೇಲೆ ಕಣದ ಗುಂಡನ್ನು ಉರುಳಿಸಿ, ಅವರನ್ನು ತೂರಿಬಿಡುವನು.
27 The human spirit is the lamp of our Father, searching every inmost part. ಮನುಷ್ಯನ ಆತ್ಮವು ಯೆಹೋವನ ದೀಪವಾಗಿದೆ, ಅದು ಅಂತರಂಗವನ್ನೆಲ್ಲಾ ಶೋಧಿಸುತ್ತದೆ.
28 Loyal love and faithfulness preserve a king; by loyal love his throne is upheld. ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು, ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ.
29 The glory of the young is their strength, but the splendor of the old is gray hair. ಯುವಕರಿಗೆ ಬಲವು ಭೂಷಣ, ಮುದುಕರಿಗೆ ನರೆಯು ಒಡವೆ.
30 Wounding blows scrub away evil, and beatings cleanse the inmost parts. ಗಾಯಮಾಡುವ ಪೆಟ್ಟುಗಳು ಕೆಟ್ಟದ್ದನ್ನು ತೊಳೆದುಬಿಡುವುದು, ಏಟುಗಳು ಅಂತರಂಗವನ್ನು ಶುದ್ಧಿಮಾಡುವುದು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]