Skip to content
The Believer's Library

Indian Revised Version (IRV) Kannada - 2019

Proverbs 21 IRVKan

Show IRVKan only
Verse × ×
1 The king's heart is a stream of water in our Father's hand; he turns it wherever he pleases. ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.
2 Every way of a person seems right in their own eyes, but our Father weighs the heart. ನರನ ನಡತೆಯು ಸ್ವಂತ ದೃಷ್ಟಿಗೆ ಸರಿಯಾಗಿ ಕಾಣುತ್ತವೆ, ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.
3 To do what is right and just is more pleasing to our Father than sacrifice. ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.
4 Haughty eyes and a proud heart—the lamp of the wicked—are sin. ಗರ್ವದ ದೃಷ್ಟಿ, ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, ಇವು ಧರ್ಮವಿರುದ್ಧ.
5 The plans of the diligent lead surely to abundance, but all who are hasty end up in poverty. ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ, ಆತುರಪಡುವವರಿಗೆಲ್ಲಾ ಕೊರತೆಯೇ.
6 Making a fortune by a lying tongue is a fleeting vapor, a deadly trap. ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ ನಾಶಕರ.
7 The violence of the wicked will drag them away, because they refuse to do what is just. ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ, ಅವರ ಬಲಾತ್ಕಾರವು ಅವರನ್ನೇ ಎಳೆದುಕೊಂಡು ಹೋಗುವುದು.
8 The way of the guilty is crooked, but the conduct of the pure is upright. ದೋಷಿಯ ದಾರಿ ಡೊಂಕು; ಶುದ್ಧನ ನಡತೆ ಸರಳ.
9 Better to live in a corner of the roof than in a shared house with a quarrelsome wife. ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.
10 The soul of the wicked craves evil; their neighbor finds no mercy in their eyes. ದುರಾತ್ಮನು ಕೇಡಿನ ಮೇಲೇ ಮನಸ್ಸಿಡುವನು ನೆರೆಯವನಿಗೂ ದಯೆತೋರಿಸನು.
11 When a mocker is punished, the simple grow wise; when the wise are instructed, they gain knowledge. ಧರ್ಮನಿಂದಕನಿಗೆ ದಂಡನೆಯಾದರೆ ನೋಡಿದ ಮೂಢನೂ ಜ್ಞಾನವನ್ನು ಪಡೆಯುವನು, ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳಿವಳಿಕೆಯನ್ನು ಹೊಂದುವನು.
12 Our Father, the Righteous One, observes the house of the wicked and brings the wicked to ruin. ನೀತಿಸ್ವರೂಪನು ಅಧರ್ಮಿಯ ಮನೆಯನ್ನು ಲಕ್ಷ್ಯಕ್ಕೆ ತಂದು, ಅಧರ್ಮಿಗಳನ್ನು ಕೆಡವಿ ಅವರನ್ನು ಕೇಡಿಗೆ ತಳ್ಳುವನು.
13 Whoever shuts their ears to the cry of the poor will also cry out and not be answered. ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.
14 A gift given in secret soothes anger, and a bribe slipped into the cloak calms strong wrath. ಗುಪ್ತ ಬಹುಮಾನವು ಕೋಪವನ್ನಾರಿಸುವುದು, ಮಡಲಲ್ಲಿಟ್ಟ ಲಂಚವು ಕ್ರೋಧವನ್ನು ಅಣಗಿಸುವುದು.
15 When justice is done, it is a joy to the righteous but terror to those who do evil. ನ್ಯಾಯಮಾರ್ಗವು ಶಿಷ್ಟರಿಗೆ ಸಂತೋಷ, ಕೆಡುಕರಿಗೆ ಕೇಡು.
16 A person who strays from the way of understanding will rest in the assembly of the dead. ಜ್ಞಾನಮಾರ್ಗದಿಂದ ತಪ್ಪಿದವನಿಗೆ, ಪ್ರೇತಸಮೂಹವೇ ವಿಶ್ರಾಂತಿಸ್ಥಾನ.
17 Whoever loves pleasure will become poor; whoever loves wine and oil will never grow rich. ಭೋಗಾಸಕ್ತನು ಕೊರತೆಪಡುವನು, ದ್ರಾಕ್ಷಾರಸವನ್ನು ಮತ್ತು ಸುಗಂಧ ತೈಲವನ್ನು ಆಶಿಸುವವನು ನಿರ್ಭಾಗ್ಯನಾಗುವನು.
18 The wicked become a ransom for the righteous, and the treacherous for the upright. ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ, ಸತ್ಯವಂತರಿಗೆ ಬದಲಾಗಿ ದ್ರೋಹಿಯೂ ದಂಡನೆಗೆ ಈಡಾಗುವರು.
19 Better to live in a desert land than with a quarrelsome and complaining wife. ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ, ಕಾಡಿನ ವಾಸವೇ ಲೇಸು.
20 Precious treasure and oil are in the home of the wise, but a fool devours all he has. ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.
21 Whoever pursues righteousness and faithful love will find life, righteousness, and honor. ನೀತಿ ಮತ್ತು ಕೃಪೆಗಳನ್ನು ಹುಡುಕುವವನು ಜೀವ ಮತ್ತು ಕೀರ್ತಿಗಳನ್ನು ಪಡೆಯುವನು.
22 A wise person scales the city of the mighty and brings down the stronghold they trust in. ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಮುತ್ತಿಗೆ ಹಾಕಿ, ಅವರು ನಂಬಿದ್ದ ಬಲವಾದ ಕೋಟೆಯನ್ನು ಕೆಡವಿ ಹಾಕುವನು.
23 Whoever guards their mouth and tongue keeps themselves out of trouble. ತನ್ನ ಬಾಯನ್ನೂ, ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು.
24 "Mocker" is the name of the proud and arrogant who acts with outrageous insolence. “ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು.
25 The craving of a lazy person kills him, for his hands refuse to work. ಸೋಮಾರಿಯ ಆಶೆಯು ಅವನನ್ನು ಕೊಲ್ಲುವುದು, ಅವನ ಕೈಗಳು ದುಡಿಯಲಾರವು.
26 All day long the craving grows, but the righteous give and do not hold back. ಧರ್ಮಿಯು ಹಿಂತೆಗೆಯದೆ ಕೊಡುವನು, ಲೋಭಿಯು ದಿನವೆಲ್ಲಾ ಆಶಿಸುತ್ತಲೇ ಇರುವನು.
27 The sacrifice of the wicked is detestable—how much more when brought with evil intent. ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ.
28 A false witness will perish, but whoever listens will testify with lasting effect. ಸುಳ್ಳು ಸಾಕ್ಷಿಯು ಅಳಿದುಹೋಗುವುದು, ಕೇಳಿದ್ದನ್ನೇ ಹೇಳುವವನ ಸಾಕ್ಷಿಯು ಶಾಶ್ವತವಾಗಿರುವುದು.
29 The wicked put on a bold face, but the upright give thought to their ways. ದುಷ್ಟನ ಮುಖದಲ್ಲಿ ಲಜ್ಜೆಯಿಲ್ಲ, ಸತ್ಯವಂತನು ತನ್ನ ನಡತೆಯನ್ನು ಸರಿಪಡಿಸಿಕೊಳ್ಳುತ್ತಿರುವನು.
30 There is no wisdom, no understanding, no counsel that can stand against our Father. ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.
31 The horse is made ready for the day of battle, but victory belongs to our Father. ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]