Skip to content
The Believer's Library

Indian Revised Version (IRV) Kannada - 2019

Proverbs 22 IRVKan

Show IRVKan only
Verse × ×
1 A good name is to be chosen rather than great riches, and favor is better than silver or gold. ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ, ಬೆಳ್ಳಿ, ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ.
2 The rich and the poor meet together; our Father is the Maker of them all. ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.
3 The prudent sees danger and takes cover, but the simple keep going and pay the price. ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
4 The reward for humility and the fear of our Father is riches and honor and life. ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.
5 Thorns and snares lie in the path of the crooked; whoever guards his soul stays far from them. ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ, ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.
6 Train up a child in the way he should go, and even when he is old he will not depart from it. ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.
7 The rich rules over the poor, and the borrower is slave to the lender. ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.
8 Whoever sows injustice will reap calamity, and the rod of his fury will fail. ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.
9 Whoever has a generous eye will be blessed, for he shares his bread with the poor. ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.
10 Drive out the scoffer, and strife goes with him; quarreling and abuse will cease. ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು.
11 Whoever loves a pure heart and speaks graciously will have the king as his friend. ಹೃದಯಶುದ್ಧಿಯನ್ನು ಅಪೇಕ್ಷಿಸುವ ಮತ್ತು ಸವಿಮಾತನಾಡುವ ಮನುಷ್ಯನಿಗೆ ರಾಜನ ಸ್ನೇಹವು ದೊರೆಯುವುದು.
12 The eyes of our Father keep watch over knowledge, but he overturns the words of the traitor. ಯೆಹೋವನ ಕಣ್ಣು ತಿಳಿವಳಿಕೆಗೆ ಕಾವಲು, ಆತನು ವಂಚಕನ ಮಾತುಗಳನ್ನು ಕೆಡವಿಬಿಡುವನು.
13 The lazy person says, "There is a lion outside! I will be killed in the streets!" “ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದ್ದಿತು” ಎಂಬುದು ಸೋಮಾರಿಯ ನೆವ.
14 The mouth of forbidden women is a deep pit; whoever draws our Father's anger will fall into it. ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ, ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು.
15 Foolishness is bound up in the heart of a child, but the rod of discipline drives it far away. ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು.
16 Whoever oppresses the poor to enrich himself, or gives to the rich, will come only to poverty. ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ, ಸಿರಿವಂತರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.
17 Listen carefully to the words of the wise, and apply your heart to my knowledge, ಕಿವಿಗೊಟ್ಟು ಜ್ಞಾನಿಗಳ ಮಾತುಗಳನ್ನು ಕೇಳು, ನನ್ನ ಜ್ಞಾನಬೋಧೆಗೆ ಮನಸ್ಸು ಕೊಡು.
18 for it will be pleasant if you keep them within you, if all of them are ready on your lips. ನೀನು ಆ ಮಾತುಗಳನ್ನು ಅಂತರಂಗದಲ್ಲಿ ಕಾಪಾಡುತ್ತಾ, ತುಟಿಗಳಲ್ಲಿ ಸಿದ್ಧಪಡಿಸಿಕೊಂಡಿದ್ದರೆ ಎಷ್ಟೋ ರಮ್ಯ.
19 So that your trust may be in our Father, I have made them known to you today, even to you. ನೀನು ಯೆಹೋವನಲ್ಲಿ ಭರವಸವಿಡಬೇಕೆಂದು, ಅವುಗಳನ್ನು ಈ ದಿನ ನಿನಗೇ ತಿಳಿಯಪಡಿಸಿದ್ದೇನೆ.
20 Have I not written for you thirty sayings of counsel and knowledge, ಸತ್ಯವಚನಗಳು ಎಷ್ಟೋ ಯಥಾರ್ಥವೆಂದು ನೀನು ತಿಳಿದುಕೊಂಡು, ನಿನ್ನನ್ನು ಕಳುಹಿಸಿದವರಿಗೆ ಸತ್ಯವಚನಗಳನ್ನೇ ಅರಿಕೆ ಮಾಡುವಂತೆ,
21 to teach you what is right and true, so that you may give a true answer to those who sent you? ಸತ್ಯ, ತಿಳಿವಳಿಕೆಯ ವಿಷಯವಾಗಿ ಇದಕ್ಕೆ ಮೊದಲೇ ನಿನಗಾಗಿ ಬರೆದಿರುವೆನಲ್ಲಾ.
22 Do not rob the poor because he is poor, or crush the afflicted at the gate, ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ, ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯಬೇಡ.
23 for our Father will plead their cause and will rob of life those who rob them. ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ, ಹಾಳುಮಾಡಿದವರ ಜೀವವನ್ನು ಹಾಳುಮಾಡುವನು.
24 Do not befriend a man given to anger, and do not go with a hot-tempered man, ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ.
25 or you will learn his ways and entangle yourself in a snare. ಮಾಡಿದರೆ ಅವನ ದುರ್ನಡತೆಯನ್ನು ಅನುಸರಿಸಿ, ನಿನ್ನ ಆತ್ಮವನ್ನು ಉರುಲಿಗೆ ಸಿಕ್ಕಿಸಿಕೊಳ್ಳುವಿ ನೋಡಿಕೋ.
26 Do not be one of those who give pledges, who put up security for debts. ಮಾತುಕೊಟ್ಟು ಸಾಲಕ್ಕೆ ಹೊಣೆಯಾಗುವವರಲ್ಲಿ, ನೀನೂ ಒಬ್ಬನಾಗಬೇಡ,
27 If you have nothing to pay with, why should your bed be taken from under you? ಆ ಸಾಲವನ್ನು ತೀರಿಸುವುದಕ್ಕೆ ನಿನ್ನಿಂದಾಗದಿರಲು, ಸಾಲಕೊಟ್ಟವನು ನಿನ್ನ ಕೆಳಗಿನ ಹಾಸಿಗೆಯನ್ನು ಕಿತ್ತುಹಾಕುವುದು ಬೇಕೇ?
28 Do not move the ancient boundary stone that your fathers set up. ನಿನ್ನ ಪೂರ್ವಿಕರು ಹಾಕಿದ ಪೂರ್ವಕಾಲದ ಮೇರೆಯನ್ನು ದಾಟಬೇಡ.
29 Do you see a man skillful in his work? He will stand before kings; he will not stand before ordinary men. ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]