Skip to content
The Believer's Library

Indian Revised Version (IRV) Kannada - 2019

Proverbs 23 IRVKan

Show IRVKan only
Verse × ×
1 When you sit down to dine with a ruler, consider carefully what is before you, ನೀನು ಅಧಿಪತಿಯ ಸಂಗಡ ಊಟಕ್ಕೆ ಕುಳಿತುಕೊಂಡಿರುವಾಗ, ನಿನ್ನ ಮುಂದಿಟ್ಟಿರುವುದರ ಬಗ್ಗೆ ಎಚ್ಚರಿಕೆಯಾಗಿರು.
2 and put a knife to your throat if you are a person ruled by appetite. ನೀನು ಹೊಟ್ಟೆಬಾಕನಾಗಿದ್ದರೆ, ನಿನ್ನ ಗಂಟಲಿಗೆ ಕತ್ತಿಹಾಕಿಕೋ.
3 Do not crave his delicacies, for they are deceptive food. ಅವನ ರುಚಿಪದಾರ್ಥಗಳನ್ನು ಬಯಸಬೇಡ, ಅದು ಮೋಸದ ಆಹಾರವೇ ಸರಿ.
4 Do not wear yourself out to get rich; have the wisdom to restrain yourself. ದುಡ್ಡಿನಾಶೆಯಿಂದ ದುಡಿಯಬೇಡ, ಸ್ವಬುದ್ಧಿಯನ್ನೇ ಆಶ್ರಯಿಸಬೇಡ.
5 The moment you look at wealth, it is gone, for it suddenly sprouts wings and flies off toward the heavens like an eagle. ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.
6 Do not eat the bread of a stingy man, and do not crave his delicacies, ಲೋಭಿಯ ಅನ್ನವನ್ನು ಉಣ್ಣದಿರು, ಅವನ ರುಚಿಪದಾರ್ಥಗಳನ್ನು ಬಯಸಬೇಡ.
7 for he is the kind of man who keeps counting the cost. "Eat and drink!" he says to you, but his heart is not with you. ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.
8 You will vomit up the little you have eaten and will have wasted your pleasant words. ನೀನು ತಿಂದ ತುತ್ತನ್ನು ಕಕ್ಕಿಬಿಡುವಿ, ನಿನ್ನ ಸವಿಮಾತುಗಳು ವ್ಯರ್ಥ.
9 Do not speak in the hearing of a fool, for he will despise the wisdom of your words. ಮೂಢನ ಸಂಗಡ ಮಾತನಾಡಬೇಡ, ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು.
10 Do not move an ancient boundary stone or encroach on the fields of the fatherless, ಪೂರ್ವಕಾಲದ ಮೇರೆಯನ್ನು ತೆಗೆದುಹಾಕಬೇಡ, ಅನಾಥರ ಹೊಲಗಳಲ್ಲಿ ನುಗ್ಗಬೇಡ.
11 for their Redeemer is strong; our Father will take up their cause against you. ಅವರ ರಕ್ಷಕನು ಬಲಶಾಲಿಯಾಗಿದ್ದಾನೆ, ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು.
12 Apply your heart to instruction and your ears to words of knowledge. ಉಪದೇಶವನ್ನು ಮನಸ್ಸಿಗೆ ತೆಗೆದುಕೋ, ತಿಳಿವಳಿಕೆಯ ಮಾತುಗಳಿಗೆ ಕಿವಿಗೊಡು.
13 Do not withhold discipline from a child; if you strike him with the rod, he will not die. ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ, ಅವನು ಬೆತ್ತದ ಏಟಿಗೆ ಸಾಯನು.
14 Strike him with the rod, and you will deliver his soul from the grave. ಬೆತ್ತದಿಂದ ಹೊಡೆ, ಅವನ ಆತ್ಮವನ್ನು ಪಾತಾಳಕ್ಕೆ ಬೀಳದಂತೆ ಕಾಪಾಡು.
15 My son, if your heart is wise, my own heart will be glad as well. ಕಂದಾ, ನಿನ್ನ ಮನಸ್ಸಿಗೆ ಜ್ಞಾನವುಂಟಾದರೆ ನನ್ನ ಮನಸ್ಸಿಗೂ ಉಲ್ಲಾಸವಾಗುವುದು.
16 My inmost being will rejoice when your lips speak what is right. ಹೌದು, ನಿನ್ನ ತುಟಿಗಳು ನೀತಿಯ ನುಡಿಗಳನ್ನಾಡಿದರೆ ನನ್ನ ಅಂತರಾತ್ಮವು ಹಿಗ್ಗುವುದು.
17 Do not let your heart envy sinners, but continue in the fear of our Father all day long. ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಯೆಹೋವನಲ್ಲಿ ನಿರಂತರವಾಗಿ ಭಯಭಕ್ತಿಯುಳ್ಳವನಾಗಿರು.
18 Surely there is a future, and your hope will not be cut off. ಒಂದು ಕಾಲ ಉಂಟು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.
19 Hear, my son, and be wise, and keep your heart on the right road. ಕಂದಾ, ಕೇಳು, ಜ್ಞಾನವಂತನಾಗಿರು, ನಿನ್ನ ಮನಸ್ಸನ್ನು ಜ್ಞಾನದ ಮಾರ್ಗದಲ್ಲಿ ಮುಂದೆ ನಡೆಯಿಸು.
20 Do not be among those who get drunk on wine or those who gorge themselves on meat, ಕುಡುಕರಲ್ಲಿಯೂ, ಅತಿಮಾಂಸಭಕ್ಷಕರಲ್ಲಿಯೂ ಸೇರದಿರು.
21 for the drunkard and the glutton will come to poverty, and drowsiness will clothe them in rags. ಕುಡುಕರು, ಹೊಟ್ಟೆಬಾಕರು ದುರ್ಗತಿಗೆ ಬರುವರು, ನಿದ್ರಾಸಕ್ತಿಯು ಹರಕು ಬಟ್ಟೆಗಳನ್ನು ಹೊದಿಸುವುದು.
22 Listen to your father, who gave you life, and do not despise your mother when she is old. ಹೆತ್ತ ತಂದೆಯ ಮಾತಿಗೆ ಕಿವಿಗೊಡು, ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ.
23 Buy truth and do not sell it; buy wisdom, instruction, and understanding. ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ, ಮಾರಿ ಬಿಡಬೇಡ.
24 The father of a righteous child will greatly rejoice; whoever fathers a wise son will delight in him. ಧರ್ಮಿಯ ತಂದೆಯು ಅತಿ ಸಂತೋಷಪಡುವನು, ಜ್ಞಾನಿಯನ್ನು ಹೆತ್ತವನು ಅವನಲ್ಲಿ ಆನಂದಿಸುವನು.
25 Let your father and mother be glad; let her who gave you birth rejoice. ನಿನ್ನ ತಂದೆತಾಯಿಗಳು ಉಲ್ಲಾಸಗೊಳ್ಳಲಿ, ನಿನ್ನನ್ನು ಹೆತ್ತವಳು ಆನಂದಪಡಲಿ.
26 My son, give me your heart, and let your eyes delight in my ways. ಕಂದಾ, ನಿನ್ನ ಹೃದಯವನ್ನು ನನಗೆ ಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.
27 For a prostitute is a deep pit, and an adulterous woman is a narrow well. ಸೂಳೆಯು ಆಳವಾದ ಹಳ್ಳ, ಜಾರಸ್ತ್ರೀಯು ಇಕ್ಕಟ್ಟಾದ ಗುಂಡಿ.
28 She lies in wait like a robber and leads many men into faithlessness. ಹೌದು, ಕಳ್ಳನಂತೆ ಹೊಂಚುಹಾಕುತ್ತಾಳೆ, ಜನರಲ್ಲಿ ದ್ರೋಹಿಗಳನ್ನು ಹೆಚ್ಚಿಸುತ್ತಾಳೆ.
29 Who has misery? Who has sorrow? Who has strife? Who has complaints? Who has wounds for no reason? Who has bleary eyes? ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು?
30 Those who linger long over wine, those who go to sample bowls of mixed wine. ಅವರು ಮಿಶ್ರಮದ್ಯಪಾನಾಸಕ್ತರಾಗಿ, ದ್ರಾಕ್ಷಾರಸವನ್ನು ಕುಡಿಯುತ್ತಾ, ಕಾಲಹರಣಮಾಡುವವರೇ.
31 Do not gaze at wine while it is red, while it sparkles in the cup and goes down smoothly. ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. ಅದು ಗಂಟಲಿನೊಳಗೆ ಮೆಲ್ಲಗೆ ಇಳಿದುಹೋಗಿ
32 In the end it bites like a serpent and stings like a viper. ಆಮೇಲೆ ಹಾವಿನಂತೆ ಕಚ್ಚುತ್ತದೆ, ಹೌದು, ನಾಗರ ಹಾವಿನ ಹಾಗೆ ಕಡಿಯುತ್ತದೆ.
33 Your eyes will see strange things, and your heart will utter twisted things. ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವುದು, ಮನಸ್ಸು ವಿಪರೀತಗಳನ್ನು ಹೊರಪಡಿಸುವುದು.
34 You will be like one lying down in the heart of the sea, like one lying on the top of a ship's mast. ನೀನು ಸಮುದ್ರದ ನಡುವೆಯಾಗಲಿ, ಹಡಗಿನ ಕಂಬದ ತುದಿಯಲ್ಲಿಯಾಗಲಿ ಮಲಗಿರುವವನಂತೆ ಇರುವಿ.
35 "They struck me, but I felt no pain; they beat me, but I did not know it. When will I wake up? I will look for another drink." ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ, ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]