Skip to content
The Believer's Library

Indian Revised Version (IRV) Kannada - 2019

Proverbs 25 IRVKan

Show IRVKan only
Verse × ×
1 These also are proverbs of Solomon, which the men of Hezekiah king of Judah copied out. ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳು, ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಇವುಗಳನ್ನು ಸಂಗ್ರಹಿಸಿ ಬರೆದರು.
2 It is the glory of our Father to conceal a matter, but the glory of kings to search a matter out. ವಿಷಯವನ್ನು ರಹಸ್ಯವಾಗಿಡುವುದು ದೇವರ ಮಹಿಮೆ, ವಿಷಯವನ್ನು ವಿಮರ್ಶೆಮಾಡುವುದು ರಾಜರ ಹಿರಿಮೆ.
3 As the heavens are high and the earth is deep, so the heart of kings is unsearchable. ಆಕಾಶವು ಉನ್ನತ, ಭೂಮಿಯು ಅಗಾಧ, ರಾಜರ ಹೃದಯವು ಅಗೋಚರ.
4 Take away the dross from the silver, and a vessel comes forth for the refiner. ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ, ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯಾಗುವುದು.
5 Take away the wicked from before the king, and his throne will be established in righteousness. ರಾಜನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ, ಅವನ ಸಿಂಹಾಸನವು ಧರ್ಮದಿಂದ ಸ್ಥಿರವಾಗುವುದು.
6 Do not put yourself forward in the king's presence, and do not stand in the place of the great; ರಾಜನ ಸನ್ನಿಧಾನದಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ, ಶ್ರೀಮಂತರಿಗೆ ಏರ್ಪಡಿಸಿರುವ ಸ್ಥಾನದಲ್ಲಿ ನಿಂತುಕೊಳ್ಳಬೇಡ.
7 for it is better to be told, "Come up here," than to be put in a lower place in front of a noble you can see. ನೀನು ಪ್ರಭುವನ್ನು ದರ್ಶನಮಾಡುತ್ತಿರಲು ಅವನ ಸಮಕ್ಷಮದಲ್ಲಿ ಕೆಳಗಣಸ್ಥಾನಕ್ಕೆ ನೂಕಿಸಿಕೊಳ್ಳುವುದಕ್ಕಿಂತಲೂ, “ಇನ್ನೂ ಮೇಲಕ್ಕೆ ಬಾ” ಎಂದು ಕರೆಯಿಸಿಕೊಳ್ಳುವುದು ಲೇಸು.
8 Do not rush into a quarrel, for what will you do in the end when your neighbor puts you to shame? ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ, ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ.
9 Argue your case with your neighbor himself, but do not disclose another's secret, ವ್ಯಾಜ್ಯವಾಡಿದವನ ಸಂಗಡಲೇ ಅದನ್ನು ಚರ್ಚಿಸು, ಒಬ್ಬನ ಗುಟ್ಟನ್ನೂ ಬಯಲುಮಾಡಬೇಡ.
10 lest the one who hears it shame you, and your bad reputation never goes away. ಅದನ್ನು ಕೇಳುವವನು ನಿನ್ನನ್ನು ದೂಷಿಸಾನು, ನಿನಗೆ ಬಂದ ಅಪಕೀರ್ತಿಯು ಹೋಗದು.
11 A word spoken at the right moment is like apples of gold in settings of silver. ಸಮಯೋಚಿತವಾದ ಮಾತುಗಳು ಬೆಳ್ಳಿಯ ಕಟ್ಟಿನಲ್ಲಿ ಖಚಿತವಾದ ಬಂಗಾರದ ಹಣ್ಣುಗಳಿಗೆ ಸಮಾನ.
12 Like a ring of gold or an ornament of fine gold is wise correction to a listening ear. ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ.
13 Like the cold of snow in the time of harvest is a faithful messenger to those who send him; he refreshes the soul of his masters. ಸುಗ್ಗೀಕಾಲದಲ್ಲಿ ಹಿಮದ ಶೀತವು ಹೇಗೋ ಕಳುಹಿಸಿದ ಒಡೆಯರಿಗೆ ಆಪ್ತದೂತನು ಹಾಗೆಯೇ ಹಿತ.
14 Like clouds and wind without rain is one who boasts of a gift never given. ಬರೀ ಗಾಳಿಯ ಮೋಡಗಳು ಹೇಗೋ, ದಾನಕೊಡುತ್ತೇನೆಂದು ಸುಳ್ಳಾಡಿ ಜಂಬಮಾಡುವವನೂ ಹಾಗೆಯೇ.
15 By patience a ruler is persuaded, and a soft tongue breaks bone. ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು, ಮೃದುವಚನವು ಎಲುಬನ್ನು ಮುರಿಯುವುದು.
16 If you find honey, eat only enough, or you will have too much and vomit. ಜೇನು ಸಿಕ್ಕಿತೋ? ಮಿತವಾಗಿ ತಿನ್ನು, ಹೊಟ್ಟೆತುಂಬಾ ತಿಂದರೆ ಕಾರಿಬಿಟ್ಟೀಯೇ.
17 Don't visit your neighbor's house too often, or he will grow weary of you and hate you. ನೆರೆಯವನು ಬೇಸರಗೊಂಡು ಹಗೆಮಾಡದ ಹಾಗೆ, ಅವನ ಮನೆಯಲ್ಲಿ ಅಪರೂಪವಾಗಿ ಹೆಜ್ಜೆಯಿಡು.
18 Like a club, a sword, and a sharp arrow is one who bears false witness against his neighbor. ನೆರೆಯವನ ಮೇಲೆ ಸುಳ್ಳುಸಾಕ್ಷಿಹೇಳುವವನು, ಚಮಟಿಕೆ, ಕತ್ತಿ, ಚೂಪಾದ ಬಾಣ ಇವುಗಳೇ.
19 Like a bad tooth or a foot out of joint is trust in a faithless person in time of trouble. ಕಷ್ಟಕಾಲದಲ್ಲಿ ದ್ರೋಹಿಯಲ್ಲಿಡುವ ನಂಬಿಕೆಯು, ಮುರುಕಹಲ್ಲು ಮತ್ತು ಜಾರುವ ಕಾಲು.
20 Like one who takes off a garment on a cold day, like vinegar poured on baking soda, is the one who sings songs to a heavy heart. ಮನಗುಂದಿದವನಿಗೆ ಸಂಗೀತಹಾಡುವುದು ಚಳಿದಿನದಲ್ಲಿ ಬಟ್ಟೆ ತೆಗೆದಂತೆ, ಗಾಯಕ್ಕೆ ಹುಳಿಹೊಯ್ದಂತೆ.
21 If your enemy is hungry, give him bread to eat, and if he is thirsty, give him water to drink; ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು,
22 for you will heap coals of fire on his head, and our Father will reward you. ಹೀಗೆ ಅವನ ತಲೆಯ ಮೇಲೆ ಕೆಂಡ ಸುರಿದಂತಾಗುವುದು. ಯೆಹೋವನೇ ನಿನಗೆ ಪ್ರತಿಫಲಕೊಡುವನು.
23 The north wind brings forth rain, and a secretive tongue, angry looks. ಉತ್ತರದ ಗಾಳಿ ಮಳೆ ಬರಮಾಡುವುದು, ಚಾಡಿಯ ನಾಲಿಗೆ ಕೋಪದ ಮುಖ ಮಾಡುವುದು.
24 It is better to live in a corner of the rooftop than in a shared house with a quarrelsome wife. ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.
25 Like cold water to a weary soul is good news from a distant land. ಬಳಲಿ ಬಾಯಾರಿದವನಿಗೆ ತಣ್ಣೀರು ಹೇಗೋ, ದೇಶಾಂತರದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.
26 Like a muddied spring or a polluted fountain is a righteous person who gives way before the wicked. ದುಷ್ಟರಿಂದ ಸೋತ ಶಿಷ್ಟನು, ಹಾಳು ಬಾವಿ ಮತ್ತು ತುಳಿದಾಡಿದ ಒರತೆ.
27 It is not good to eat too much honey, nor to seek your own glory. ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, ಸ್ವಂತಮಾನವನ್ನು ಹೆಚ್ಚಾಗಿ ಯೋಚಿಸುವುದು ಮಾನವಲ್ಲ.
28 Like a city broken into and left without walls is a person who has no control over his own spirit. ಆತ್ಮವನ್ನು ಸ್ವಾಧೀನಮಾಡಿಕೊಳ್ಳದವನು ಗೋಡೆ ಬಿದ್ದ ಹಾಳೂರಿಗೆ ಸಮಾನ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]