Skip to content
The Believer's Library

Indian Revised Version (IRV) Kannada - 2019

Proverbs 26 IRVKan

Show IRVKan only
Verse × ×
1 Like snow in summer and like rain at harvest, honor is not fitting for a fool. ಬೇಸಿಗೆಯಲ್ಲಿ ಹಿಮ, ಸುಗ್ಗಿಯಲ್ಲಿ ಮಳೆ ಹೇಗೋ, ಮೂಢನಿಗೆ ಮಾನವು ಹಾಗೆ ಸರಿಯಲ್ಲ.
2 Like a fluttering sparrow or a darting swallow, an undeserved curse does not come to rest. ಕುಪ್ಪಳಿಸುತ್ತಿರುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯ ಹಾಗೆ, ಕಾರಣವಿಲ್ಲದೆ ಕೊಟ್ಟ ಶಾಪವು ಎರಗಿ ನಿಲ್ಲದು.
3 A whip for the horse, a bridle for the donkey, and a rod for the backs of fools. ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ, ಮೂಢನ ಬೆನ್ನಿಗೆ ಬೆತ್ತ.
4 Do not answer a fool according to his foolishness, or you yourself will be like him. ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡಬೇಡ, ನೀನೂ ಅವನಿಗೆ ಸಮಾನನಾದೀಯೆ.
5 Answer a fool according to his foolishness, or he will be wise in his own eyes. ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡು, ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.
6 Whoever sends a message through a fool cuts off his own feet and drinks down violence. ಮೂಢನ ಮೂಲಕ ಮಾತನ್ನು ಹೇಳಿಕಳುಹಿಸುವವನು, ತನ್ನ ಕಾಲುಗಳನ್ನು ತಾನೇ ಕಡಿದುಕೊಂಡು ಕೇಡನ್ನು ಕುಡಿಯುವನು.
7 Like the legs of a lame man hanging useless is a proverb in the mouth of fools. ಮೂಢನ ಬಾಯಿಯ ಜ್ಞಾನೋಕ್ತಿಯು, ಜೋಲಾಡುವ ಕುಂಟಕಾಲು.
8 Like binding a stone in a sling is giving honor to a fool. ಮೂಢನಿಗೆ ಕೊಡುವ ಮಾನವು, ಕವಣೆಯಲ್ಲಿಟ್ಟ ಕಲ್ಲಿನ ಹಾಗೆ.
9 Like a thornbush in the hand of a drunkard is a proverb in the mouth of fools. ಮೂಢನ ಬಾಯಿಗೆ ಸಿಕ್ಕಿದ ಜ್ಞಾನೋಕ್ತಿಯು, ಕುಡುಕನ ಕೈಗೆ ಸಿಕ್ಕಿದ ಮುಳ್ಳುಗೋಲಿನ ಹಾಗೆ.
10 Like an archer who wounds everyone is one who hires a fool or hires any passerby. ಮೂಢರನ್ನೂ, ತಿರುಗಾಡುವವರನ್ನೂ ಕೂಲಿಗೆ ಕರೆಯುವವನು, ಯಾರಿಗೋ ತಗಲಲಿ ಎಂದು ಬಾಣವನ್ನು ಎಸೆಯುವವನಂತೆ.
11 As a dog returns to its vomit, so a fool repeats his foolishness. ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಳ್ಳುವ ಹಾಗೆ, ಮೂಢನು ತಾನು ಮಾಡಿದ ಮೂರ್ಖತನವನ್ನೇ ಪುನಃ ಮಾಡುವನು.
12 Do you see someone wise in his own eyes? There is more hope for a fool than for him. ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.
13 The lazy person says, "There is a lion in the road! A lion in the streets!" “ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ತಿರುಗಾಡುತ್ತಿದೆ” ಎಂಬುದು ಸೋಮಾರಿಯ ನೆವ.
14 As a door turns on its hinges, so the lazy person turns on his bed. ಕದವು ತಿರುಗುಣಿಯಲ್ಲಿ ಹೇಗೋ, ಹಾಗೆ ಸೋಮಾರಿಯು ಹಾಸಿಗೆಯಲ್ಲಿ ಹೊರಳಾಡುತ್ತಿರುವನು.
15 The lazy person buries his hand in the dish; it wearies him to bring it back to his mouth. ಸೋಮಾರಿಯು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರ ತರಲಾರದಷ್ಟು ಆಯಾಸಗೊಳ್ಳುತ್ತಾನೆ.
16 The lazy person is wiser in his own eyes than seven who answer wisely. ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ, ತಾನೇ ಜ್ಞಾನಿಯೆಂದು ಸೋಮಾರಿಯು ಎಣಿಸಿಕೊಳ್ಳುವನು.
17 Like grabbing a dog by the ears is a passerby who meddles in a quarrel not his own. ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವುದು, ನಾಯಿಯ ಕಿವಿಹಿಡಿದ ಹಾಗೆ.
18 Like a madman shooting firebrands, arrows, and death, ನೆರೆಯವನನ್ನು ಮೋಸಗೊಳಿಸಿ, “ತಮಾಷೆಗೋಸ್ಕರ, ಮಾಡಿದೆನಲ್ಲಾ” ಎನ್ನುವವನು,
19 so is the one who deceives his neighbor and says, "I was only joking!" ಕೊಳ್ಳಿಗಳನ್ನೂ, ಅಂಬುಗಳನ್ನೂ, ಸಾವನ್ನೂ ಬೀರುವ, ದೊಡ್ಡ ಹುಚ್ಚನ ಹಾಗೆ.
20 Without wood a fire goes out, and without a gossip a quarrel dies down. ಕಟ್ಟಿಗೆಯಿಲ್ಲದಿದ್ದರೆ ಬೆಂಕಿ ಆರುವುದು, ಚಾಡಿಕೋರನು ಇಲ್ಲದಿದ್ದರೆ ಜಗಳ ಶಮನವಾಗುವುದು.
21 As charcoal to embers and wood to fire, so a quarrelsome person kindles strife. ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ, ವ್ಯಾಜ್ಯದ ಕಿಚ್ಚನ್ನೆಬ್ಬಿಸುವುದಕ್ಕೆ ಜಗಳಗಂಟಿಗ.
22 The words of a gossip are like choice morsels; they sink down into the inmost parts. ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಇವು ಹೊಟ್ಟೆಯೊಳಕ್ಕೇ ಇಳಿಯುವವು.
23 Like a glaze covering an earthen pot are smooth lips with an evil heart. ಕೆಟ್ಟ ಹೃದಯದಿಂದ ಪ್ರೀತಿಯನ್ನಾಡುವ ತುಟಿಯು, ಬೆಳ್ಳಿ ಲೇಪನ ಮಾಡಿದ ಮಣ್ಣಿನ ಮಡಿಕೆಯ ಹಾಗೆ.
24 An enemy disguises himself with his lips, but in his heart he harbors deceit. ಶತ್ರುವು ಸ್ನೇಹಭಾವದಿಂದ ನಟಿಸುತ್ತಾನೆ, ಅಂತರಂಗದಲ್ಲಿ ಬರೀ ಮೋಸವನ್ನು ಇಟ್ಟುಕೊಂಡಿದ್ದಾನೆ.
25 When he speaks graciously, do not believe him, for seven abominations fill his heart. ಸವಿಮಾತನಾಡಿದರೂ ಅವನನ್ನು ನಂಬಬೇಡ, ಅವನ ಹೃದಯದಲ್ಲಿ ಎಷ್ಟೋ ಹೇಯ ಕೃತ್ಯಗಳು.
26 Though his hatred is hidden by deceit, his wickedness will be exposed in the assembly. ತನ್ನ ಹಗೆಯನ್ನು ವಂಚನೆಯಿಂದ ಮರೆಮಾಚಿಕೊಂಡಿದ್ದರೂ, ಅವನ ಕೆಟ್ಟತನವು ಸಭೆಯಲ್ಲಿ ಬೈಲಾಗುವುದು.
27 Whoever digs a pit will fall into it, and a stone rolls back on the one who rolls it. ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಹೊರಳಿಸುವವನ ಮೇಲೆಯೇ ಕಲ್ಲು ಹೊರಳುವುದು.
28 A lying tongue hates those it crushes, and a flattering mouth works ruin. ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ದ್ವೇಷಿಸುವನು, ಕಪಟದ ಬಾಯಿ ನಾಶಕರ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]