Skip to content
The Believer's Library

Indian Revised Version (IRV) Kannada - 2019

Proverbs 28 IRVKan

Show IRVKan only
Verse × ×
1 The wicked flee when no one pursues, but the righteous are as bold as a lion. ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.
2 When a land rebels, it has many rulers, but with a man of understanding and knowledge, it stays stable. ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು.
3 A poor man who oppresses the helpless is like a driving rain that leaves no food. ಬಡವರನ್ನು ಹಿಂಸಿಸುವ ದರಿದ್ರನು, ಒಂದು ಕಾಳೂ ಉಳಿಯದಂತೆ ಪೈರನ್ನು ಬಡಿಯುವ ಮಳೆಯ ಹಾಗೆ.
4 Those who forsake the law praise the wicked, but those who keep the law strive against them. ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು.
5 Evil people do not understand justice, but those who seek our Father understand it fully. ಕೆಟ್ಟವರು ನ್ಯಾಯವನ್ನು ಗ್ರಹಿಸರು, ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು.
6 Better is a poor man who walks with integrity than a rich man crooked in his ways. ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ, ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು.
7 Whoever keeps the law is a son with understanding, but a companion of gluttons shames his father. ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು, ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು.
8 Whoever multiplies his wealth by interest and unjust gain gathers it for one who is generous to the poor. ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು.
9 If anyone refuses to listen to the law, even his prayer is detestable. ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.
10 Whoever leads the upright astray down an evil path will fall into his own pit, but the blameless will inherit good things. ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು, ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು, ನಿರ್ದೋಷಿಗಳಿಗೋ ಸುಖವು ಸೊತ್ತಾಗುವುದು.
11 A rich man is wise in his own eyes, but a poor man with understanding sees right through him. ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು.
12 When the righteous triumph, there is great glory, but when the wicked rise, people go into hiding. ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವುದು, ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು.
13 Whoever conceals his sins will not prosper, but whoever confesses and turns from them will find mercy. ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.
14 Blessed is the one who always remains reverent, but whoever hardens his heart will fall into calamity. ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು ಧನ್ಯನು, ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು.
15 Like a roaring lion or a charging bear is a wicked ruler over a helpless people. ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ.
16 A ruler who lacks understanding is a cruel oppressor, but whoever hates unjust gain will prolong his days. ವಿವೇಕಶೂನ್ಯನಾದ ಒಡೆಯನು ಮಹಾ ಹಿಂಸಕನು, ದೋಚಿಕೊಳ್ಳದವನು ದೀರ್ಘಾಯುಷ್ಯನು.
17 A man weighed down by the guilt of bloodshed will be a fugitive until death; let no one support him. ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, ಅವನನ್ನು ಯಾರೂ ತಡೆಯಬಾರದು.
18 Whoever walks in integrity will be kept safe, but whoever is crooked in his ways will suddenly fall. ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಸೋಲು.
19 Whoever works his land will have plenty of bread, but whoever chases empty pursuits will have plenty of poverty. ದುಡಿದು ಹೊಲಗೇಯುವವನಿಗೆ ಹೊಟ್ಟೆ ತುಂಬಾ ಅನ್ನ, ವ್ಯರ್ಥ ಕಾರ್ಯಾಸಕ್ತನಿಗೆ ಹೊಟ್ಟೆತುಂಬಾ ಬಡತನ.
20 A faithful man will abound with blessings, but whoever rushes to get rich will not go unpunished. ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು, ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದೆ ಇರನು.
21 Showing partiality is not good, yet for a piece of bread a man will do wrong. ಪಕ್ಷಪಾತವು ಅಧರ್ಮ, ತುತ್ತು ಅನ್ನಕ್ಕಾಗಿಯೂ ಜನರು ದ್ರೋಹಮಾಡುವುದುಂಟು.
22 A stingy man rushes after wealth and does not know that poverty will overtake him. ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು.
23 Whoever rebukes a man will in the end find more favor than one who flatters with his tongue. ಮುಖಸ್ತುತಿ ಮಾಡುವವನಿಗಿಂತಲೂ, ಗದರಿಸುವವನು ಬಳಿಕ ಹೆಚ್ಚು ದಯಾಪಾತ್ರನಾಗುವನು.
24 Whoever robs his father or mother and says, "It is no sin," is a companion to one who destroys. ದೋಷವಲ್ಲವೆಂದು ತಾಯಿತಂದೆಗಳ ಧನವನ್ನು ಕದಿಯುವವನು, ಕೆಡುಕನಿಗೆ ಜೊತೆಗಾರನು.
25 A greedy man stirs up strife, but whoever trusts in our Father will be enriched. ದುರಾಶೆಯುಳ್ಳವನು ಜಗಳವನ್ನೆಬ್ಬಿಸುವನು, ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.
26 Whoever trusts in his own heart is a fool, but whoever walks in wisdom will be kept safe. ತನ್ನಲ್ಲೇ ಭರವಸವಿಡುವವನು ಮೂಢನು, ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.
27 Whoever gives to the poor will lack nothing, but whoever closes his eyes to them will receive many curses. ಬಡವರಿಗೆ ದಾನಮಾಡುವವನು ಕೊರತೆಪಡನು, ಅವರನ್ನು ಕಂಡು ಕಾಣದಂತೆ ಇರುವವನು ಬಹುಶಾಪಕ್ಕೆ ಒಳಗಾಗುವನು.
28 When the wicked rise, people go into hiding, but when they perish, the righteous flourish. ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು, ನಾಶನವಾದರೆ ಶಿಷ್ಟರು ವೃದ್ಧಿಯಾಗುವರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]