Skip to content
The Believer's Library

Indian Revised Version (IRV) Kannada - 2019

Proverbs 29 IRVKan

Show IRVKan only
Verse × ×
1 Whoever is often corrected yet refuses to listen will suddenly be broken beyond healing. ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
2 When the righteous flourish, the people rejoice, but when the wicked rule, the people groan. ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ, ದುಷ್ಟನ ಆಳ್ವಿಕೆ ಜನರಿಗೆ ನರಳಾಟ.
3 A man who loves wisdom brings joy to his father, but a companion of prostitutes squanders his wealth. ಜ್ಞಾನವನ್ನು ಪ್ರೀತಿಸುವವನು ತಂದೆಯನ್ನು ಹರ್ಷಗೊಳಿಸುವನು, ವೇಶ್ಯೆಯ ಸಂಗಡಿಗನು ಆಸ್ತಿಯನ್ನು ಹಾಳುಮಾಡಿಕೊಳ್ಳುವನು.
4 By justice a king gives a land stability, but one who is greedy for bribes tears it down. ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು, ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು.
5 A man who flatters his neighbor spreads a net for his feet. ನೆರೆಯವನೊಂದಿಗೆ ವಂಚನೆಯ ಸವಿನುಡಿಗಳನ್ನು ಆಡುವವನು, ಅವನ ಹೆಜ್ಜೆಗೆ ಬಲೆಯನ್ನೊಡ್ಡುವನು.
6 An evil man is snared by his own sin, but the righteous sing and rejoice. ಕೆಟ್ಟವನ ದುರ್ಮಾರ್ಗದಲ್ಲಿ ಉರುಲುಂಟು, ಒಳ್ಳೆಯವನು ಉಲ್ಲಾಸಗೊಂಡು ಹರ್ಷಧ್ವನಿಗೈಯುವನು.
7 The righteous care about justice for the poor, but the wicked have no such understanding. ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು, ದುಷ್ಟನಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ.
8 Mockers set a city ablaze, but the wise calm the anger. ಧರ್ಮನಿಂದಕರು ಪಟ್ಟಣಕ್ಕೆ ಬೆಂಕಿಯನ್ನು ಹತ್ತಿಸುವರು, ಜ್ಞಾನಿಗಳೋ ರೋಷಾಗ್ನಿಯನ್ನು ಆರಿಸುವರು.
9 When a wise man goes to court with a fool, the fool rages and scoffs, and there is no peace. ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ, ರೇಗಿದರೂ, ನಕ್ಕರೂ ಜಗಳವು ತೀರುವುದಿಲ್ಲ.
10 The bloodthirsty hate the blameless and seek to kill the upright. ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು, ಯಥಾರ್ಥವಂತನ ಪ್ರಾಣಕ್ಕೂ ಹೊಂಚುಹಾಕುವರು.
11 A fool vents all his anger, but a wise man holds it back and keeps himself calm. ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು, ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು.
12 If a ruler listens to lies, all his officials become wicked. ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ.
13 The poor man and the oppressor have this in common: our Father gives sight to the eyes of both. ತಗ್ಗುವವನು, ತಗ್ಗಿಸುವವನು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರಿಬ್ಬರ ಕಣ್ಣುಗಳಿಗೆ ಕಳೆಕೊಟ್ಟವನು.
14 If a king judges the poor with fairness, his throne will be established forever. ಬಡವರನ್ನು ನ್ಯಾಯವಾಗಿ ಆಳ್ವಿಕೆ ಮಾಡುವ ರಾಜನ ಸಿಂಹಾಸನವು ಶಾಶ್ವತವು.
15 The rod and a word of correction give wisdom, but a child left to himself brings shame to his mother. ಬೆತ್ತ ಮತ್ತು ಬೆದರಿಕೆಗಳಿಂದ ಜ್ಞಾನವುಂಟಾಗುವುದು, ಶಿಕ್ಷಿಸದೆ ಬಿಟ್ಟ ಹುಡುಗನು ತಾಯಿಯ ಮಾನವನ್ನು ಕಳೆಯುವನು.
16 When the wicked flourish, wrongdoing flourishes, but the righteous will see the wicked's downfall. ದುಷ್ಟರ ವೃದ್ಧಿ ಪಾಪವೃದ್ಧಿ, ಶಿಷ್ಟರೋ ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.
17 Discipline your son, and he will give you peace; he will bring delight to your heart. ಮಗನನ್ನು ಶಿಕ್ಷಿಸು, ಅವನು ನಿನ್ನನ್ನು ಸಂತೋಷಪಡಿಸುವನು, ಅವನೇ ನಿನ್ನ ಆತ್ಮಕ್ಕೆ ಮೃಷ್ಟಾನ್ನವಾಗುವನು.
18 Where there is no revelation, the people run wild, but blessed is the one who keeps the law. ದೇವದರ್ಶನ ಇಲ್ಲದಿರುವಲ್ಲಿ ಜನರು ನಾಶವಾಗುವರು, ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು.
19 A servant cannot be corrected by words alone; though he understands, he will not obey. ಆಳು ಮಾತಿನಿಂದ ಮಾತ್ರ ಶಿಕ್ಷಿತನಾಗಲಾರನು, ಅವನು ತಿಳಿದುಕೊಂಡರೂ ಗಮನಿಸನು.
20 Do you see a man who is hasty with his words? There is more hope for a fool than for him. ದುಡುಕಿ ಮಾತನಾಡುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನು ಇಡಬಹುದು.
21 Pamper a servant from childhood, and in the end he will become like an heir. ಆಳನ್ನು ಬಾಲ್ಯದಿಂದ ಕೋಮಲವಾಗಿ ಸಾಕಿದರೆ, ತರುವಾಯ ಅವನು ಎದುರುಬೀಳುವನು.
22 An angry man stirs up strife, and a hot-tempered man commits many sins. ಕೋಪಿಷ್ಠನು ಜಗಳವನ್ನೆಬ್ಬಿಸುವನು, ಕ್ರೋಧಶೀಲನು ದೋಷಭರಿತನು.
23 A man's pride brings him low, but a humble spirit gains honor. ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.
24 An accomplice of a thief is his own enemy; he hears the curse but says nothing. ಕಳ್ಳನೊಂದಿಗೆ ಪಾಲುಗಾರನಾದವನು ತನಗೆ ತಾನೇ ಶತ್ರು, ಆಣೆಯಿಡುವುದನ್ನು ಕೇಳಿದರೂ ಸುಮ್ಮನಿರುವನು.
25 Fear of man lays a snare, but whoever trusts in our Father is kept safe. ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.
26 Many seek a ruler's favor, but justice for a person comes from our Father. ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು, ನ್ಯಾಯತೀರ್ಪು ಯೆಹೋವನಿಂದಲೇ ಆಗುವುದು.
27 An unjust man is detestable to the righteous, and an upright person is detestable to the wicked. ಶಿಷ್ಟರಿಗೆ ದುರ್ಮಾರ್ಗಿಯು ಅಸಹ್ಯನು, ದುಷ್ಟರಿಗೆ ಸರಳಮಾರ್ಗಿಯು ಅಸಹ್ಯನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]