Skip to content
The Believer's Library

Indian Revised Version (IRV) Kannada - 2019

Proverbs 3 IRVKan

Show IRVKan only
Verse × ×
1 My son, do not forget my teaching, but let your heart keep my commandments, ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.
2 for they will add length of days and years of life and peace to you. ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ, ನಿನಗೆ ಸುಕ್ಷೇಮವನ್ನು ಉಂಟುಮಾಡುವವು.
3 Do not let covenant love and faithfulness leave you; bind them around your neck, write them on the tablet of your heart. ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
4 So you will find favor and a good reputation with our Father and with people. ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ, ಸಮ್ಮತಿಯನ್ನೂ ಪಡೆದುಕೊಳ್ಳುವಿ.
5 Trust in our Father with all your heart, and do not lean on your own understanding. ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.
6 In all your ways know him, and he will make your paths straight. ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.
7 Do not be wise in your own eyes; fear our Father, and turn away from evil. ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.
8 This will bring healing to your body and refreshment to your bones. ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ, ಎಲುಬುಗಳಿಗೆ ಸಾರವೂ ಉಂಟಾಗುವವು.
9 Honor our Father with your wealth and with the firstfruits of all your produce, ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.
10 then your barns will be filled with plenty, and your vats will overflow with new wine. ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು.
11 My son, do not despise the discipline of our Father or be weary of his correction, ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.
12 for our Father disciplines the one his heart loves, just as a father disciplines the son he delights in. ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ.
13 Blessed is the one who finds wisdom, and the one who gains understanding, ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು.
14 for the gain from her is better than gain from silver, and her profit better than gold. ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ, ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ.
15 She is more precious than jewels, and nothing you desire can compare with her. ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.
16 Long life is in her right hand; in her left hand are riches and honor. ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ, ಘನತೆಯೂ ಉಂಟು.
17 Her ways are pleasant, and all her paths are peace. ಆಕೆಯ ದಾರಿಗಳು ಸುಖಕರವಾಗಿವೆ, ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ.
18 She is a tree of life to those who take hold of her; those who hold her fast are called blessed. ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.
19 Our Father by wisdom founded the earth; by understanding he established the heavens; ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸ್ಥಾಪಿಸಿ, ವಿವೇಕದ ಮುಖಾಂತರ ಆಕಾಶಮಂಡಲವನ್ನು ಸ್ಥಿರಪಡಿಸಿದನು.
20 by his knowledge the depths burst open, and the clouds drop down the dew. ಭೂಮಿಯ ಕೆಳಗಿನ ಸಾಗರವು ಒಡೆದದ್ದಕ್ಕೂ, ಆಕಾಶವು ಇಬ್ಬನಿಯನ್ನು ಸುರಿಸುವುದಕ್ಕೂ ಆತನ ತಿಳಿವಳಿಕೆಯೇ ಸಾಧನ.
21 My son, do not lose sight of these; keep sound wisdom and discretion, ನನ್ನ ಮಗನೇ, ಸುಜ್ಞಾನವನ್ನೂ ಮತ್ತು ಬುದ್ಧಿಯನ್ನೂ ಭದ್ರವಾಗಿಟ್ಟುಕೋ, ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.
22 and they will be life for your soul and an adornment for your neck. ಅವು ನಿನಗೆ ಜೀವವೂ, ನಿನ್ನ ಕೊರಳಿಗೆ ಭೂಷಣವೂ ಆಗಿರುವವು.
23 Then you will walk on your way securely, and your foot will not stumble. ಆಗ ನೀನು ಎಡವದೆ ನಿನ್ನ ಮಾರ್ಗದಲ್ಲಿ ನಿರ್ಭಯವಾಗಿ ನಡೆಯುವಿ.
24 If you lie down, you will not be afraid; when you lie down, your sleep will be sweet. ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.
25 Do not be afraid of sudden terror, or of the ruin of the wicked when it comes, ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ.
26 for our Father will be your confidence and will keep your foot from being caught. ಯೆಹೋವನು ನಿನ್ನ ಭರವಸಕ್ಕೆ ಆಧಾರನಾಗಿದ್ದು, ನಿನ್ನ ಕಾಲು ಮೋಸದ ಬಲೆಗೆ ಸಿಕ್ಕದಂತೆ ನಿನ್ನನ್ನು ಕಾಪಾಡುವನು.
27 Do not withhold good from those who deserve it, when it is in your power to do it. ಉಪಕಾರಮಾಡುವುದಕ್ಕೆ ನಿನ್ನಿಂದ ಸಾಧ್ಯವಾಗುವಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ.
28 Do not say to your neighbor, "Go, and come back, and tomorrow I will give it"—when you have it with you. ಕೊಡತಕ್ಕದ್ದು ನಿನ್ನಲ್ಲಿದ್ದರೆ ನೆರೆಯವನಿಗೆ, “ಹೋಗಿ ಬಾ, ನಾಳೆ ಕೊಡುತ್ತೇನೆ” ಎಂದು ಹೇಳಬೇಡ.
29 Do not plot evil against your neighbor, who lives trustingly beside you. ನೆರೆಯವನಿಗೆ ಕೇಡನ್ನು ಕಲ್ಪಿಸಬಾರದು, ಅವನು ನಿನ್ನ ಪಕ್ಕದಲ್ಲಿ ನಂಬಿಕೆಯಿಂದ ವಾಸಮಾಡುತ್ತಾನಲ್ಲವೇ?
30 Do not quarrel with anyone for no reason, when he has done you no harm. ನಿನಗೆ ಅಪಕಾರ ಮಾಡದವನ ಸಂಗಡ ಸುಮ್ಮನೆ ಜಗಳವಾಡಬೇಡ.
31 Do not envy a violent man, and do not choose any of his ways, ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ.
32 for the devious person is detestable to our Father, but he takes the upright into his confidence. ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ನೇಹವು ದೊರೆಯುವುದು.
33 The curse of our Father is on the house of the wicked, but he blesses the home of the righteous. ಯೆಹೋವನು ದುಷ್ಟನ ಮನೆಯನ್ನು ಶಪಿಸುವನು, ನೀತಿವಂತರ ನಿವಾಸವನ್ನೋ ಆಶೀರ್ವದಿಸುವನು.
34 Toward the mockers he is scornful, but to the humble he gives grace. ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು.
35 The wise will inherit honor, but fools get only disgrace. ಜ್ಞಾನವಂತರು ಸನ್ಮಾನಕ್ಕೆ ಬಾಧ್ಯರಾಗುವರು, ಜ್ಞಾನಹೀನರಿಗಾಗುವ ಬಹುಮಾನವು ಅವಮಾನವೇ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]