Skip to content
The Believer's Library

Indian Revised Version (IRV) Kannada - 2019

Proverbs 30 IRVKan

Show IRVKan only
Verse × ×
1 The words of Agur son of Jakeh—the oracle. The man declares: I am weary, O my Father; I am weary, O my Father, and worn out. ದೈವೋಕ್ತಿ. ಯಾಕೆ ಎಂಬುವವನ ಮಗನಾದ ಆಗೂರನ ಮಾತುಗಳು. ಇವನು ಇಥಿಯೇಲನಿಗೆ, ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು.
2 Surely I am too brutish to be a man; I do not have the understanding of a man. ಮನುಷ್ಯರಲ್ಲಿ ನನ್ನಂಥ ಪಶುಪ್ರಾಯನು ಇಲ್ಲವಷ್ಟೆ, ಮಾನುಷ ವಿವೇಕವು ನನಗಿಲ್ಲ.
3 I have not learned wisdom, nor do I have knowledge of the Holy One. ನಾನು ಜ್ಞಾನವನ್ನು ಪಡೆದುಕೊಂಡಿಲ್ಲ, ಪರಿಶುದ್ಧನ ವಿಷಯವಾದ ತಿಳಿವಳಿಕೆಯನ್ನು ಹೊಂದಿಲ್ಲ.
4 Who has ascended to heaven and come down? Who has gathered the wind in the hollow of his hands? Who has wrapped the waters in a garment? Who has established all the ends of the earth? What is his name, and what is his son's name? Surely you know! ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.
5 Every word of our Father proves true; he is a shield to those who take refuge in him. ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು, ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.
6 Do not add to his words, or he will rebuke you and prove you a liar. ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.
7 Two things I ask of you; do not withhold them from me before I die: ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ, ಅನುಗ್ರಹಿಸದಿರಬೇಡ, ನಾನು ಸಾಯುವುದರೊಳಗಾಗಿ ಅವುಗಳನ್ನು ಕೈಗೂಡಿಸು.
8 Keep falsehood and lies far from me; give me neither poverty nor riches; feed me only the bread that is my portion, ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.
9 for if I am full, I may deny you and say, "Who is God?" or if I am poor, I may steal and profane the name of my God. ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು.
10 Do not slander a servant to his master, or he will curse you and you will be found guilty. ಆಳಿನ ಮೇಲೆ ದಣಿಗೆ ದೂರನ್ನು ಹೇಳಬೇಡ, ಅವನು ಶಪಿಸಾನು, ನಿನ್ನಲ್ಲೇ ದೋಷವು ಕಂಡು ಬಂದೀತು.
11 There is a generation that curses its father and does not bless its mother. ತಾಯಿಗೆ ಶುಭವನ್ನು ಕೋರದೆ, ತಂದೆಯನ್ನು ಶಪಿಸುವ ಒಂದು ತರದವರು ಉಂಟು.
12 There is a generation clean in its own eyes yet not washed of its filth. ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು, ಎಣಿಸಿಕೊಳ್ಳುವ ಬೇರೊಂದು ತರದವರು ಉಂಟು.
13 There is a generation—how proud its eyes, how scornful its glances! ಕಣ್ಣುರೆಪ್ಪೆಗಳನ್ನೆತ್ತಿಕೊಂಡು, ಎಷ್ಟೋ ಮೇಲೆ ಎಷ್ಟೋ ಮೇಲೆ ಮೇಲೆಯೇ ನೋಡುತ್ತಿರುವ ಇನ್ನೊಂದು ತರದವರು ಉಂಟು.
14 There is a generation whose teeth are swords, whose fangs are knives, to devour the poor from the earth and the needy from among mankind. ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂಮಿಯೊಳಗಿಂದ ಬಡವರನ್ನೂ, ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ, ಅಗೆದು ನುಂಗಿಬಿಡುವ ಮತ್ತೊಂದು ತರದವರು ಉಂಟು.
15 The leech has two daughters: "Give" and "Give." Three things are never satisfied; four never say, "Enough": ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು. ತೃಪ್ತಿಪಡದವುಗಳು ಮೂರು ಉಂಟು, ಹೌದು, ಸಾಕೆನ್ನದವುಗಳು ನಾಲ್ಕು ಉಂಟು.
16 The grave, the barren womb, the land never satisfied with water, and the fire that never says, "Enough." ಯಾವುವೆಂದರೆ, ಪಾತಾಳ, ಹೆರದ ಗರ್ಭ, ನೀರಿನಿಂದ ತೃಪ್ತಿಪಡದ ಭೂಮಿ, ಸಾಕಾಯಿತೆಂದು ಹೇಳದ ಬೆಂಕಿ, ಇವೇ.
17 The eye that mocks a father and scorns to obey a mother—the ravens of the valley will pluck it out, and the young vultures will eat it. ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.
18 Three things are too wonderful for me; four I do not understand: ಮೂರು ವಿಷಯಗಳು ನನ್ನ ಬುದ್ಧಿಯನ್ನು ಮೀರಿವೆ, ಹೌದು, ನಾಲ್ಕನ್ನು ಗ್ರಹಿಸಲಾರೆನು;
19 the way of an eagle in the sky, the way of a serpent on a rock, the way of a ship in the heart of the sea, and the way of a man with a young woman. ಯಾವುವೆಂದರೆ, ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಸ್ತ್ರೀಯಲ್ಲಿ ಪುರುಷನ ಪದ್ಧತಿ, ಇವೇ.
20 This is the way of an adulteress: she eats and wipes her mouth and says, "I have done no wrong." ಜಾರಳ ನಡತೆಯು ಹೀಗೆಯೇ ಸರಿ, ಅವಳು ತಿಂದು ಬಾಯಿ ಒರೆಸಿಕೊಂಡು, “ನಾನು ತಪ್ಪುಮಾಡಲಿಲ್ಲವಲ್ಲವೆ” ಅಂದುಕೊಳ್ಳುವಳು.
21 Under three things the earth trembles; under four it cannot bear up: ಮೂರರ ಭಾರದಿಂದ ಭೂಮಿಯು ಕಂಪಿಸುತ್ತದೆ, ಹೌದು, ನಾಲ್ಕರ ಹೊರೆಯನ್ನು ತಾಳಲಾರದು.
22 a servant when he becomes king, and a fool when he is filled with food; ಯಾವುವೆಂದರೆ, ಪಟ್ಟಕ್ಕೆ ಬಂದ ದಾಸನು, ಹೊಟ್ಟೆತುಂಬಿದ ನೀಚನು,
23 an unloved woman when she finally marries, and a servant girl when she displaces her mistress. ಮದುವೆಯಾದ ಚಂಡಿಯು, ಸವತಿಯಾದ ತೊತ್ತು, ಇವೇ.
24 Four things on earth are small, yet they are exceedingly wise: ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳ ನಾಲ್ಕು ಸಣ್ಣ ಜಂತುಗಳುಂಟು.
25 the ants are a people not strong, yet they store up their food in the summer; ಇರುವೆಗಳು ದುರ್ಬಲಜಾತಿಯಾವಾದರೂ, ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುವವು.
26 the rock badgers are a people not mighty, yet they make their homes in the cliffs; ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲದಿದ್ದರೂ, ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುವವು.
27 the locusts have no king, yet all of them advance in ranks; ಮಿಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು.
28 the lizard you can catch in your hands, yet it is found in kings' palaces. ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ, ಅದು ಅರಮನೆಗಳಲ್ಲಿ ವಾಸಮಾಡುವುದು.
29 Three things are stately in their stride; four are stately in their walk: ಗಂಭೀರಾಗಮನದ ಮೂರು ಪ್ರಾಣಿಗಳುಂಟು, ಹೌದು, ಗಂಭೀರಗತಿಯ ನಾಲ್ಕುಂಟು.
30 the lion, mightiest among beasts, which turns back before nothing; ಯಾವುದಕ್ಕೂ ಹೆದರಿ ಓರೆಯಾಗದ, ಮೃಗರಾಜನಾದ ಸಿಂಹ,
31 the strutting rooster, the male goat, and a king whose army is with him. ಹೆಮ್ಮೆಯಿಂದ ನಡೆಯುವ ಹುಂಜ, ಹೋತವು ಸಹ, ಸೈನ್ಯಸಮೇತನಾದ ರಾಜ.
32 If you have been foolish, exalting yourself, or if you have schemed evil, put your hand over your mouth. ನೀನು ಉಬ್ಬಿಕೊಂಡು ಮೂರ್ಖನಾಗಿ ನಡೆದಿದ್ದರೆ, ಅಥವಾ ದುರಾಲೋಚನೆಮಾಡಿದ್ದರೆ ಬಾಯಿಯ ಮೇಲೆ ಕೈಯಿಟ್ಟುಕೋ.
33 For pressing milk produces curds, pressing the nose produces blood, and pressing anger produces strife. ಹಾಲು ಕಡೆಯುವುದರಿಂದ ಬೆಣ್ಣೆ, ಮೂಗು ಹಿಂಡುವುದರಿಂದ ರಕ್ತ, ಕೋಪಕಲಕುವುದರಿಂದ ಜಗಳ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]