Skip to content
The Believer's Library

Indian Revised Version (IRV) Kannada - 2019

Proverbs 31 IRVKan

Show IRVKan only
Verse × ×
1 The words of King Lemuel—an oracle his mother taught him: ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವೋಕ್ತಿಯು,
2 What, my son? What, son of my womb? What, son of my vows? ಏನು, ಕಂದಾ? ನನ್ನ ಗರ್ಭಪುತ್ರನೇ, ಏನು, ನನ್ನ ಹರಕೆಯ ಮಗುವೇ, ನಾನು ಏನು ಹೇಳಲಿ?
3 Do not give your strength to women, or your ways to those who destroy kings. ನಿನ್ನ ತ್ರಾಣವನ್ನು ಸ್ತ್ರೀಯರಿಗೆ ಒಪ್ಪಿಸಬೇಡ, ರಾಜರಿಗೆ ವಿನಾಶಕರವಾದ ದಾರಿಗೆ ತಿರುಗಬೇಡ.
4 It is not for kings, Lemuel—not for kings to drink wine, or for rulers to crave strong drink. ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ.
5 For if they drink, they will forget what is decreed and pervert the rights of all the oppressed. ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತುಬಿಟ್ಟು, ಬಾಧೆಪಡುವವರೆಲ್ಲರ ನ್ಯಾಯವನ್ನು ವ್ಯತ್ಯಾಸಮಾಡುವರು.
6 Give strong drink to one who is perishing, and wine to those in bitter distress. ಮದ್ಯವನ್ನು ಗತಿಯಿಲ್ಲದವನಿಗೂ, ದ್ರಾಕ್ಷಾರಸವನ್ನು ಮನೋವ್ಯಥೆಪಡುವವನಿಗೂ ಕೊಟ್ಟರೆ ಕೊಡು.
7 Let them drink and forget their poverty, and remember their misery no more. ಕುಡಿದು ಬಡತನವನ್ನು ಮರೆತುಬಿಡಲಿ, ಶ್ರಮೆಯನ್ನು ಇನ್ನೂ ಜ್ಞಾಪಕಕ್ಕೆ ತಾರದಿರಲಿ.
8 Open your mouth for the voiceless, for the rights of all who are left destitute. ಬಾಯಿಲ್ಲದವರಿಗೂ, ಹಾಳಾಗಿ ಹೋಗುತ್ತಿರುವವರೆಲ್ಲರಿಗೂ, ನ್ಯಾಯವಾಗುವಂತೆ ಬಾಯಿ ತೆರೆ.
9 Open your mouth, judge righteously, and defend the rights of the poor and needy. ಬಾಯನ್ನು ತೆರೆದು ನ್ಯಾಯವನ್ನು ತೀರಿಸು, ದೀನದರಿದ್ರರ ವ್ಯಾಜ್ಯ ಮಾಡು.
10 A woman of valor—who can find her? She is far more precious than jewels. ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು? ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.
11 The heart of her husband trusts in her, and he will lack nothing of value. ಪತಿಯ ಹೃದಯವು ಆಕೆಯಲ್ಲಿ ಭರವಸವಿಡುವುದು, ಅವನು ಕೊಳ್ಳೆ ಕೊಳ್ಳೆಯಾಗಿ ಸಂಪಾದಿಸುವನು.
12 She does him good and not harm, all the days of her life. ಆಕೆಯು ಜೀವಮಾನದಲ್ಲೆಲ್ಲಾ ಅವನಿಗೆ ಅಹಿತವನ್ನು ಮಾಡದೆ, ಹಿತವನ್ನೇ ಮಾಡುತ್ತಿರುವಳು.
13 She seeks out wool and flax, and works with willing hands. ಉಣ್ಣೆಯನ್ನೂ, ಸೆಣಬನ್ನೂ ಹುಡುಕಿ ತಂದು, ಕೈಕೆಲಸವನ್ನು ಆಸಕ್ತಿಯಿಂದ ಮಾಡುವಳು.
14 She is like the merchant ships, bringing her food from afar. ವ್ಯಾಪಾರದ ಹಡಗುಗಳಂತೆ, ದೂರದಿಂದ ಬೇಕಾದ ಆಹಾರವನ್ನು ತರುವಳು.
15 She rises while it is still night, provides food for her household, and portions for her servant girls. ಇನ್ನೂ ಕತ್ತಲಿರುವಾಗಲೇ ಎದ್ದು, ಮನೆಯವರಿಗೆ ಆಹಾರವನ್ನು, ನೀಡುವಳು ದಾಸಿಯರಿಗೆ ದಿನದ ಕೆಲಸಗಳನ್ನು ಹಂಚುವಳು.
16 She considers a field and buys it; from the fruit of her hands she plants a vineyard. ಹೊಲವನ್ನು ನೋಡಿ ಯೋಚಿಸಿ ಕೊಂಡುಕೊಳ್ಳುವಳು, ತನ್ನ ಕೈಗೆಲಸದ ಲಾಭದಿಂದ ದ್ರಾಕ್ಷಿತೋಟವನ್ನು ಮಾಡಿಸುವಳು.
17 She wraps herself in strength and makes her arms strong. ನಡುವಿನ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು, ತೋಳುಗಳನ್ನು ಶಕ್ತಿಗೊಳಿಸುವಳು.
18 She perceives that her trading is profitable; her lamp does not go out at night. ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು, ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
19 She puts her hands to the spinning staff, and her hands grasp the spindle. ರಾಟೆಯ ಮೇಲೆ ಕೈ ಹಾಕಿ, ಕದರನ್ನು ಹಿಡಿಯುವಳು.
20 She opens her hand to the poor and reaches out her hands to the needy. ಬಡವರಿಗಾಗಿ ಕೈ ಬಿಚ್ಚಿ, ದಿಕ್ಕಿಲ್ಲದವರಿಗೆ ಕೈ ನೀಡುವಳು.
21 She has no fear for her household when it snows, for all her household are clothed in scarlet. ಮನೆಯವರೆಲ್ಲರಿಗೂ ಸಕಲಾತಿಯನ್ನು ಹೊದಿಸಿರುವುದರಿಂದ, ಅವರ ವಿಷಯವಾಗಿ ಆಕೆಗೆ ಹಿಮದ ಭಯವಿಲ್ಲ.
22 She makes coverings for herself; her clothing is fine linen and purple. ತನಗಾಗಿ ರತ್ನಗಂಬಳಿಗಳನ್ನು ಮಾಡುವಳು, ಆಕೆಯ ಉಡುಪು ನಾರುಮಡಿ, ರಕ್ತಾಂಬರ.
23 Her husband is known in the gates, when he sits among the elders of the land. ಆಕೆಯ ಪತಿಯು ನ್ಯಾಯಸ್ಥಾನದಲ್ಲಿ, ದೇಶದ ಹಿರಿಯರ ಮಧ್ಯದಲ್ಲಿ ಕುಳಿತಿರುವಾಗ ಪ್ರಸಿದ್ಧನಾಗಿ ಕಾಣುವನು.
24 She makes linen garments and sells them, and supplies sashes to the merchants. ಹಚ್ಚಡಗಳನ್ನು ನೆಯ್ದು ಮಾರಾಟಮಾಡುವಳು, ನಡುಕಟ್ಟುಗಳನ್ನು ವರ್ತಕನಿಗೆ ಒದಗಿಸುವಳು.
25 Strength and dignity are her clothing, and she laughs at the days to come. ಬಲವನ್ನು, ತೇಜಸ್ಸನ್ನು ಹೊದ್ದುಕೊಂಡಿರುವಳು, ಭವಿಷ್ಯತ್ತಿನ ಭಯವಿಲ್ಲದೆ ನಗುತ್ತಿರುವಳು.
26 She opens her mouth with wisdom, and faithful instruction is on her tongue. ಬಾಯಿದೆರೆದು ಜ್ಞಾನವನ್ನು ತೋರ್ಪಡಿಸುವಳು. ಆಕೆಯ ನಾಲಿಗೆಯು ಬುದ್ಧಿಯನ್ನು ಪ್ರೀತಿಪೂರ್ವಕವಾಗಿ ಹೇಳುವುದು.
27 She watches over the ways of her household and does not eat the bread of idleness. ಸೋಮಾರಿತನದ ಅನ್ನವನ್ನು ತಿನ್ನದೆ, ಗೃಹಕೃತ್ಯಗಳನ್ನೆಲ್ಲಾ ನೋಡಿಕೊಳ್ಳುವಳು.
28 Her children rise up and call her blessed; her husband also, and he praises her: ಮಕ್ಕಳು ಎದ್ದುನಿಂತು ಆಕೆಯನ್ನು “ಧನ್ಯಳು” ಎಂದು ಹೇಳುವರು.
29 "Many daughters have done valiantly, but you surpass them all." ಪತಿಯು ಸಹ, “ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು” ಎಂದು ಆಕೆಯನ್ನು ಕೊಂಡಾಡುವನು.
30 Charm is deceptive and beauty is fleeting, but a woman who reveres our Father—she will be praised. ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ, ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.
31 Give her the fruit of her hands, and let her works praise her in the gates. ಆಕೆಯ ಕೈಕೆಲಸಕ್ಕೆ ಪ್ರತಿಫಲವನ್ನು ಸಲ್ಲಿಸಿರಿ, ಆಕೆಯ ಕಾರ್ಯಗಳೇ ಪುರದ್ವಾರಗಳಲ್ಲಿ ಆಕೆಯನ್ನು ಪ್ರಶಂಸಿಸಲಿ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]