Skip to content
The Believer's Library

Indian Revised Version (IRV) Kannada - 2019

Proverbs 4 IRVKan

Show IRVKan only
Verse × ×
1 Listen, my children, to a father's instruction; pay attention, and gain understanding. ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ, ವಿವೇಕವನ್ನು ಗ್ರಹಿಸುವಂತೆ ಕಿವಿಗೊಡಿರಿ.
2 I am giving you sound teaching, so do not abandon my instruction. ನಾನು ನಿಮಗೆ ಸುಬೋಧೆಯನ್ನು ಮಾಡುವೆನು, ನನ್ನ ಉಪದೇಶವನ್ನು ಬಿಡಬೇಡಿರಿ.
3 For I too was a son to my father, tender and the only beloved of my mother. ನಾನೂ ನನ್ನ ತಂದೆಗೆ ಅಧೀನನಾದ ಮಗನೂ, ತಾಯಿಯ ದೃಷ್ಟಿಗೆ ಕೋಮಲನಾದ ಏಕಪುತ್ರನೂ ಆಗಿದ್ದೆನು.
4 He taught me and said, "Let your heart hold on to my words; keep my commands and you will live. ಆಗ ತಂದೆಯು ನನಗೆ ಬೋಧಕನಾಗಿ ಹೀಗೆಂದನು, “ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ, ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.
5 Get wisdom, get understanding; do not forget, and do not turn away from the words of my mouth. ಜ್ಞಾನವನ್ನು ಪಡೆ, ವಿವೇಕವನ್ನು ಸಂಪಾದಿಸು, ಮರೆಯಬೇಡ, ನನ್ನ ಮಾತುಗಳಿಗೆ ಅಸಡ್ಡೆ ತೋರಿಸಬೇಡ.
6 Do not forsake her, and she will protect you; love her, and she will watch over you. ಜ್ಞಾನವನ್ನು ಬಿಡದಿದ್ದರೆ ಅದು ನಿನ್ನನ್ನು ಕಾಪಾಡುವುದು, ಪ್ರೀತಿಸಿದರೆ, ಅದು ನಿನ್ನನ್ನು ಕಾಯುವುದು.
7 The beginning of wisdom is this: get wisdom; and with all you acquire, get understanding. ಜ್ಞಾನವನ್ನು ಪಡೆಯಬೇಕೆಂಬುದೇ ಜ್ಞಾನಬೋಧೆಯ ಪ್ರಥಮಪಾಠ, ನಿನ್ನ ಎಲ್ಲಾ ಸಂಪತ್ತಿನಿಂದಲೂ ವಿವೇಕವನ್ನು ಪಡೆ.
8 Cherish her, and she will lift you high; embrace her, and she will bring you honor. ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು, ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು.
9 She will set a garland of grace on your head; she will present you with a crown of glory." ಆಕೆಯು ನಿನ್ನ ತಲೆಗೆ ಅಂದದ ಪುಷ್ಪಮಾಲೆಯನ್ನು ಇಟ್ಟು, ಸುಂದರ ಕಿರೀಟವನ್ನು ನಿನಗೆ ಒಪ್ಪಿಸುವಳು.”
10 Listen, my son, and receive my words, and the years of your life will be many. ಕಂದಾ, ಗಮನಿಸಿ ನನ್ನ ಮಾತುಗಳನ್ನು ಕೇಳು, ಕೇಳಿದರೆ, ನಿನ್ನ ಜೀವಮಾನದ ವರ್ಷಗಳು ಹೆಚ್ಚುವವು.
11 I have taught you the way of wisdom; I have led you along straight paths. ನಾನು ಜ್ಞಾನಮಾರ್ಗವನ್ನು ಉಪದೇಶಿಸಿ, ಧರ್ಮಮಾರ್ಗದಲ್ಲಿ ನಿನ್ನನ್ನು ನಡೆಸುವೆನು.
12 When you walk, your steps will not be held back; and when you run, you will not stumble. ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಅಡ್ಡಿಯಾಗುವುದಿಲ್ಲ, ಓಡಿದರೆ ಮುಗ್ಗರಿಸುವುದಿಲ್ಲ.
13 Hold on to instruction, do not let go; guard her, for she is your life. ಸದುಪದೇಶವನ್ನು ಗ್ರಹಿಸಿಕೋ, ಸಡಿಲಬಿಡಬೇಡ, ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು.
14 Do not set foot on the path of the wicked, and do not walk in the way of evildoers. ದುಷ್ಟರ ಮಾರ್ಗದಲ್ಲಿ ಸೇರಬೇಡ, ಕೆಟ್ಟವರ ದಾರಿಯಲ್ಲಿ ನಡೆಯಬೇಡ.
15 Avoid it, do not travel on it; turn away from it and pass on by. ಅದಕ್ಕೆ ದೂರವಾಗಿರು, ಅದರಲ್ಲಿ ನಡೆಯಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.
16 For they cannot sleep unless they do wrong; they are robbed of rest unless they make someone stumble. ಕೇಡುಮಾಡದಿದ್ದರೆ ಅವರಿಗೆ ನಿದ್ರೆಬಾರದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವುದು.
17 They feed on the bread of wickedness and drink the wine of violence. ದುಷ್ಟತನವೇ ಅವರ ಆಹಾರ; ಬಲಾತ್ಕಾರವೇ ಅವರ ದ್ರಾಕ್ಷಾರಸ ಪಾನ.
18 But the path of the righteous is like the light of dawn, shining brighter and brighter until the full light of day. ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.
19 The way of the wicked is like deep darkness; they do not know what makes them stumble. ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವುದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.
20 My son, pay attention to my words; listen closely to my sayings. ಕಂದಾ, ನನ್ನ ಮಾತುಗಳನ್ನು ಆಲಿಸು, ನನ್ನ ನುಡಿಗಳಿಗೆ ಕಿವಿಗೊಡು.
21 Never lose sight of them; keep them deep within your heart. ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದಿರಲಿ, ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ.
22 For they are life to those who find them, and healing to their whole body. ಅವುಗಳನ್ನು ಹೊಂದುವವರಿಗೆ ಅವು ಜೀವವು, ದೇಹಕ್ಕೆಲ್ಲಾ ಅವೇ ಆರೋಗ್ಯವು.
23 Above all else, guard your heart, for everything you do flows from it. ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.
24 Keep crooked speech from your mouth, and keep deceitful lips far from you. ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು, ಕೆಟ್ಟ ನುಡಿಗಳನ್ನು ಬಾಯಿಂದ ದೂರಮಾಡು.
25 Let your eyes look straight ahead; fix your gaze directly before you. ನೆಟ್ಟಗೆ ದೃಷ್ಟಿಸು, ನಿನ್ನ ಕಣ್ಣುಗಳು ನಿನ್ನ ಮುಂದೆಯೇ ಇರಲಿ.
26 Give careful thought to the path for your feet, and all your ways will be secure. ನೀನು ನಡೆಯುವ ದಾರಿಯನ್ನು ಸಮಮಾಡು, ಆಗ ನಿನ್ನ ಮಾರ್ಗಗಳೆಲ್ಲಾ ದೃಢವಾಗಿರುವವು.
27 Do not turn to the right or the left; keep your foot away from evil. ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗಬೇಡ, ನಿನ್ನ ಕಾಲನ್ನು ಕೇಡಿಗೆ ದೂರಮಾಡು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]