Skip to content
The Believer's Library

Indian Revised Version (IRV) Kannada - 2019

Proverbs 5 IRVKan

Show IRVKan only
Verse × ×
1 My son, pay attention to my wisdom; listen closely to my understanding, ಕಂದಾ, ನನ್ನ ಜ್ಞಾನೋಪದೇಶವನ್ನು ಆಲಿಸು, ವಿವೇಕದಿಂದ ಕೂಡಿದ ನನ್ನ ಬೋಧನೆಗೆ ಕಿವಿಗೊಡು.
2 so that you may guard discretion and your lips may preserve knowledge. ಹೀಗಾದರೆ ನೀನು ವಿವೇಚನೆಯನ್ನು ಹೊಂದಿಕೊಳ್ಳುವಿ, ನಿನ್ನ ತುಟಿಗಳು ತಿಳಿವಳಿಕೆಯನ್ನು ಕಾಪಾಡುವವು.
3 For the lips of the forbidden woman drip honey, and her mouth is smoother than oil, ವೇಶ್ಯಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವುದು, ಅವಳ ಮಾತು ಎಣ್ಣೆಗಿಂತಲೂ ನಯವಾಗಿದೆ.
4 but in the end she is bitter as poison, sharp as a double-edged sword. ಅವಳು ಕಡೆಯಲ್ಲಿ ವಿಷದಂತೆ ಕಹಿಯೂ, ಇಬ್ಬಾಯಿಕತ್ತಿಯಂತೆ ತೀಕ್ಷ್ಣವೂ ಆಗುವಳು.
5 Her feet go down to death; her steps take hold of the grave. ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು, ಅವಳ ಹೆಜ್ಜೆಗಳು ಪಾತಾಳದ ದಾರಿಯನ್ನು ಹಿಡಿಯುವವು.
6 She gives no thought to the path of life; her ways wander, and she does not know it. ಅವಳ ನಡತೆಯು ಚಂಚಲವಾಗಿರುವುದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು, ಅದು ಅವಳಿಗೆ ತಿಳಿದೇ ಇಲ್ಲ.
7 And now, my sons, listen to me, and do not turn away from the words of my mouth. ಹೀಗಿರಲು ಮಗನೇ, ನನ್ನ ಕಡೆಗೆ ಕಿವಿಗೊಡು, ನನ್ನ ಮಾತುಗಳಿಂದ ದೂರವಾಗಿರಬೇಡ.
8 Keep your way far from her, and do not go near the door of her house, ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ!
9 lest you give your honor to others and your years to one who is cruel, ಎಚ್ಚರವಹಿಸಿಕೋ, ನಿನ್ನ ಪುರುಷತ್ವವು ಪರಾಧೀನವಾಗುವುದು, ನಿನ್ನ ಆಯುಷ್ಯವು ಕ್ರೂರರ ವಶವಾಗುವುದು.
10 lest strangers take their fill of your strength, and your hard-earned labors go to the house of a foreigner, ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳುವರು, ನೀನು ಅನ್ಯನ ಮನೆಯಲ್ಲಿ ದುಡಿಯುವಿ.
11 and at your end you groan, when your flesh and body are consumed, ಕಟ್ಟಕಡೆಗೆ ನಿನ್ನ ದೇಹವೆಲ್ಲಾ ಕ್ಷೀಣವಾಗಿ ನೀನು ಅಂಗಲಾಚಿಕೊಂಡು,
12 and you say, "How I hated discipline, and my heart despised correction! “ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,
13 I did not listen to the voice of my teachers or heed my instructors. ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ, ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ!
14 I was at the brink of utter ruin in the midst of the assembled congregation." ನಾನು ದೇವಜನರ ಸಭೆಯ ನಡುವೆ ಎಲ್ಲಾ ಕೇಡಿಗೂ ಸಿಕ್ಕಿಕೊಳ್ಳುವ ಹಾಗೆ ಆದೆನು” ಎಂದು ಅಂದುಕೊಳ್ಳುವಿ.
15 Drink water from your own cistern, flowing water from your own well. ಸ್ವಂತ ಕೊಳದ ನೀರನ್ನು, ಸ್ವಂತ ಬಾವಿಯಲ್ಲಿ ಉಕ್ಕುವ ಜಲವನ್ನು ಮಾತ್ರ ಕುಡಿ.
16 Should your springs overflow in the streets, your streams of water in the public squares? ನಿನ್ನ ಒರತೆಗಳು ಬಯಲಿನಲ್ಲಿಯೂ, ನಿನ್ನ ಕಾಲುವೆಗಳು ಬೀದಿಗಳಲ್ಲಿಯೂ ಹರಡಿ ಹರಿಯುವುದು ಹಿತವೇ?
17 Let them be yours alone, and not shared with strangers. ಅವು ನಿನಗೊಬ್ಬನಿಗೇ ಹರಿಯಲಿ, ಪರರು ನಿನ್ನೊಂದಿಗೆ ಸೇರಿ ಕುಡಿಯಬಾರದು.
18 May your fountain be blessed, and rejoice in the wife of your youth, ನಿನ್ನ ಬುಗ್ಗೆಯು ದೇವರ ಆಶೀರ್ವಾದವನ್ನು ಹೊಂದಲಿ, ನಿನ್ನ ಯೌವನಕಾಲದ ಪತ್ನಿಯಲ್ಲಿ ಆನಂದಿಸು.
19 a loving doe, a graceful deer. May her love satisfy you always; may you be captivated continually by her love. ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು.
20 Why then, my son, should you be captivated by a forbidden woman and embrace another man's wife? ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ, ಅನ್ಯಳ ಎದೆಯನ್ನು ತಬ್ಬಿಕೊಳ್ಳುವುದೇಕೆ?
21 For a man's ways are before the eyes of our Father, and he examines all the man's paths. ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ, ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.
22 The wicked are caught by their own wrongdoing and held fast in the cords of their sin. ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.
23 He will die for lack of discipline, and he will go astray because of his great foolishness. ಸದುಪದೇಶದ ಕೊರತೆಯಿಂದಲೇ ನಾಶವಾಗುವನು, ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]