Skip to content
The Believer's Library

Indian Revised Version (IRV) Kannada - 2019

Proverbs 6 IRVKan

Show IRVKan only
Verse × ×
1 My son, if you have put up security for your neighbor, if you have shaken hands in pledge for a stranger, ಮಗನೇ, ನೀನು ನೆರೆಯವನ ಸಾಲಕ್ಕೆ ಹೊಣೆಯಾಗಿದ್ದರೆ, ಪರನೊಂದಿಗೆ ಪ್ರಮಾಣ ಮಾಡಿಕೊಂಡಿದ್ದರೆ,
2 you have been snared by the words of your mouth, caught by the words of your mouth. ನೀನು ಮಾತುಕೊಟ್ಟು ಪಾಶಕ್ಕೆ ಸಿಕ್ಕಿಕೊಂಡಿದ್ದೀ, ನಿನ್ನ ವಾಗ್ದಾನವು ನಿನ್ನನ್ನು ಹಿಡಿದಿದೆ.
3 Then do this, my son, and free yourself, for you are now at your neighbor's mercy: go, humble yourself, and plead with your neighbor. ಹೀಗಿರಲು, ಮಗನೇ, ನೀನು ನೆರೆಯವನ ಕೈಗೆ ಸಿಕ್ಕಿಕೊಂಡದ್ದರಿಂದ ತಪ್ಪಿಸಿಕೊಳ್ಳುವ ಒಂದು ಕೆಲಸ ಮಾಡು, ನಡೆ, ತ್ವರೆಪಡು, ಆ ನೆರೆಯವನನ್ನು ಅಂಗಲಾಚಿ ಬೇಡಿಕೋ,
4 Give no sleep to your eyes, no slumber to your eyelids. ನಿನ್ನ ಕಣ್ಣುಗಳಿಗೆ ನಿದ್ರೆಕೊಡಬೇಡ, ನಿನ್ನ ರೆಪ್ಪೆಗಳನ್ನು ಮುಚ್ಚಬೇಡ;
5 Free yourself like a gazelle from the hand, like a bird from the hand of the trapper. ಬೇಟೆಗಾರನ ಕೈಯಿಂದ ಜಿಂಕೆಯು ಓಡುವಂತೆಯೂ, ಪಕ್ಷಿಯು ಹಾರಿ ಹೋಗುವ ಹಾಗೂ ತಪ್ಪಿಸಿಕೋ.
6 Go to the ant, you sluggard; consider her ways and be wise. ಸೋಮಾರಿಯೇ, ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ಪಡೆದುಕೋ.
7 Without having any chief, officer, or ruler, ಅದಕ್ಕೆ ನಾಯಕ, ಅಧಿಕಾರಿ ಹಾಗೂ ಪ್ರಭುಗಳಿಲ್ಲದಿದ್ದರೂ,
8 she prepares her bread in summer and gathers her food in harvest. ಬೇಸಿಗೆಯಲ್ಲಿ ತನ್ನ ತೀನಿಯನ್ನು ಸಿದ್ಧಮಾಡುವುದು, ಸುಗ್ಗಿಯ ಕಾಲದಲ್ಲಿ ತನಗೆ ಬೇಕಾದಷ್ಟು ಆಹಾರವನ್ನು ಸಂಗ್ರಹಿಸಿಟ್ಟುಕೊಳ್ಳುವುದು.
9 How long will you lie there, sluggard? When will you arise from your sleep? ಸೋಮಾರಿಯೇ, ಎಷ್ಟು ಹೊತ್ತು ನಿದ್ರೆ? ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವಿ?
10 A little sleep, a little slumber, a little folding of the hands to rest, “ಇನ್ನು ಸ್ವಲ್ಪ ನಿದ್ದೆ, ಇನ್ನು ಸ್ವಲ್ಪ ತೂಕಡಿಕೆ, ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ” ಅಂದುಕೊಳ್ಳುವಿಯಾ?
11 and poverty will come upon you like a robber, and scarcity like an armed man. ಬಡತನವು ದಾರಿಗಳ್ಳನ ಹಾಗೂ ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು.
12 A worthless person, a wicked man, goes about with crooked speech, ನೀಚನೂ, ದುಷ್ಟನೂ ಆಗಿರುವ ಮನುಷ್ಯನ ನಡತೆಯನ್ನು ನೋಡು, ಅವನು ವಕ್ರ ಮಾತಿನವನಾಗಿದ್ದಾನೆ,
13 winks with his eyes, signals with his feet, points with his fingers, ಕಣ್ಣನ್ನು ಮಿಟಕಿಸುತ್ತಾನೆ, ಕಾಲಿನಿಂದ ಕೆರೆಯುತ್ತಾನೆ, ಬೆರಳ ಸನ್ನೆಮಾಡುತ್ತಾನೆ.
14 with perverted heart he devises evil, continually sowing discord; ಅವನ ಮನಸ್ಸಿನಲ್ಲಿರುವುದು ದ್ರೋಹವೇ; ಯಾವಾಗಲೂ ಕೇಡನ್ನು ಕಲ್ಪಿಸುತ್ತಾನೆ, ಜಗಳದ ಬೀಜವನ್ನು ಬಿತ್ತುತ್ತಾನೆ.
15 therefore calamity will come upon him suddenly; in a moment he will be broken beyond healing. ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವುದು, ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು.
16 There are six things our Father hates, seven that are detestable to him: ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ.
17 haughty eyes, a lying tongue, and hands that shed innocent blood, ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷಿಗಳ ರಕ್ತವನ್ನು ಸುರಿಸುವ ಕೈ,
18 a heart that devises wicked plans, feet that hurry to run to evil, ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತ್ವರೆಪಡುವ ಕಾಲು,
19 a false witness who breathes out lies, and one who sows discord among brothers. ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು ಇವುಗಳೇ.
20 My son, keep your father's commandment, and do not forsake your mother's teaching. ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಉಪದೇಶವನ್ನು ಬಿಡಬೇಡ.
21 Bind them on your heart always; tie them around your neck. ಅವುಗಳನ್ನು ಸದಾ ನಿನ್ನ ಹೃದಯದಲ್ಲಿ ಇಟ್ಟುಕೋ, ನಿನ್ನ ಕೊರಳಿಗೆ ಅವುಗಳನ್ನು ಧರಿಸಿಕೋ.
22 When you walk, they will lead you; when you lie down, they will watch over you; and when you awake, they will talk with you. ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು, ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು.
23 For the commandment is a lamp and the teaching a light, and the reproofs of discipline are the way of life, ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.
24 to keep you from the evil woman, from the smooth tongue of the adulteress. ಅದು ಕೆಟ್ಟ ಸ್ತ್ರೀಯಿಂದಲೂ, ವೇಶ್ಯೆಯ ಸಿಹಿನುಡಿಯಿಂದಲೂ ನಿನ್ನನ್ನು ರಕ್ಷಿಸತಕ್ಕದ್ದಾಗಿದೆ.
25 Do not desire her beauty in your heart, and do not let her capture you with her eyelashes; ನಿನ್ನ ಹೃದಯವು ಅವಳ ಸೌಂದರ್ಯವನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣುರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ.
26 for the price of a prostitute is only a loaf of bread, but a married woman hunts down a precious life. ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವುದು, ಪರಸ್ತ್ರೀಯೋ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.
27 Can a man carry fire next to his chest and his clothes not be burned? ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ ಬಟ್ಟೆ ಸುಡುವುದಿಲ್ಲವೋ?
28 Or can one walk on hot coals and his feet not be scorched? ಧಗಧಗಿಸುವ ಕೆಂಡದ ಮೇಲೆ ನಡೆದರೆ ಕಾಲು ಬೇಯುವುದಿಲ್ಲವೋ?
29 So is he who sleeps with his neighbor's wife; none who touches her will go unpunished. ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವುದು, ಯಾರು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು.
30 People do not despise a thief if he steals to satisfy his appetite when he is hungry, ಕಳ್ಳನು ಹೊಟ್ಟೆಗಿಲ್ಲದೆ ಹಸಿವೆಯನ್ನು ನೀಗಿಸಲು ಕಳವು ಮಾಡಿದರೆ ಜನರು ಅಷ್ಟೇನೂ ಹೀಯಾಳಿಸರು.
31 but if he is caught, he will pay sevenfold; he will give all the goods of his house. ಅವನ ತಪ್ಪು ಬಯಲಾದರೆ ಅವನು ಏಳರಷ್ಟು ಕೊಡಬೇಕಾಗುವುದು, ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ಕೊಟ್ಟು ತೀರಿಸಲೇಬೇಕು.
32 He who commits adultery lacks sense; he who does it destroys himself. ವ್ಯಭಿಚಾರಿಯೋ ಕೇವಲ ಬುದ್ಧಿಹೀನನು, ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.
33 He will get wounds and dishonor, and his disgrace will not be wiped away. ಅವನಿಗೆ ಗಾಯವೂ, ಅವಮಾನವೂ ಆಗುವವು, ಅವನ ಕೆಟ್ಟ ಹೆಸರು ಎಂದಿಗೂ ಅಳಿಸಲ್ಪಡದು.
34 For jealousy makes a man furious, and he will show no mercy in the day of vengeance. ಏಕೆಂದರೆ ಮತ್ಸರವು ಪತಿಗೆ ಕ್ರೋಧವನ್ನು ಉಂಟುಮಾಡುತ್ತದೆ, ಅವನು ಮುಯ್ಯಿತೀರಿಸತಕ್ಕ ದಿನದಲ್ಲಿ ವ್ಯಭಿಚಾರಿಯನ್ನು ಉಳಿಸನು.
35 He will accept no compensation; he will refuse no matter how large the bribe. ಅವನು ಯಾವ ಈಡನ್ನೂ ಮುಟ್ಟನು; ಎಷ್ಟು ಲಂಚಕೊಟ್ಟರೂ ಒಪ್ಪನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]