Skip to content
The Believer's Library

Indian Revised Version (IRV) Kannada - 2019

Proverbs 7 IRVKan

Show IRVKan only
Verse × ×
1 My son, keep my words, and store up my commandments within you. ಕಂದಾ, ನನ್ನ ಮಾತುಗಳನ್ನು ಮನಸ್ಸಿನಲ್ಲಿಟ್ಟುಕೋ, ನನ್ನ ಆಜ್ಞೆಗಳನ್ನು ನಿಧಿಯಂತೆ ಕಾಪಾಡಿಕೋ.
2 Keep my commandments and live; guard my teaching as the apple of your eye. ನನ್ನ ಉಪದೇಶವನ್ನು ಕಣ್ಣುಗುಡ್ಡೆಯಂತೆ ಪಾಲಿಸು, ನನ್ನ ಆಜ್ಞೆಗಳನ್ನು ಕೈಕೊಂಡು ಬಾಳು.
3 Bind them on your fingers; write them on the tablet of your heart. ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿ ಧರಿಸಿಕೋ, ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆದುಕೋ.
4 Say to wisdom, "You are my sister," and call understanding your dearest friend, ಜ್ಞಾನವನ್ನು, “ನೀನು ನನ್ನ ಅಕ್ಕಾ” ಎಂದು ಹೇಳು, ವಿವೇಕವನ್ನು, “ಪ್ರಿಯೇ” ಎಂದು ಕರೆ.
5 to keep you from the forbidden woman, from the stranger with her smooth words. ಅವು ಜಾರಳಿಂದ ಮತ್ತು ಸವಿಮಾತನಾಡುವ ಪರಸ್ತ್ರೀಯಿಂದ ನಿನ್ನನ್ನು ರಕ್ಷಿಸುವವು.
6 For at the window of my house I looked down through my lattice, ನಾನು ನನ್ನ ಮನೆಯ ಕಿಟಕಿಯ ಜಾಲರಿಯಿಂದ ಇಣಿಕಿ ನೋಡಲು
7 and I saw among the naive, I noticed among the young men, a youth who lacked sense, ಅಲ್ಪಬುದ್ಧಿಯುಳ್ಳ ಅನೇಕ ಯುವಕರು ಕಾಣಿಸಿದರು. ಅವರಲ್ಲಿ ಜ್ಞಾನಹೀನನಾದ ಒಬ್ಬ ಯೌವನಸ್ಥನನ್ನು ಕಂಡೆನು.
8 passing through the street near her corner, taking the road to her house, ಅವನು ಸಂಜೆಯ ಮೊಬ್ಬಿನಲ್ಲಿ, ಮಧ್ಯರಾತ್ರಿಯ ಅಂಧಕಾರದಲ್ಲಿ,
9 in the twilight, as the day faded, in the dark of night and gloom. ಅವಳ ಮನೆಯ ಹತ್ತಿರ ಬೀದಿಯಲ್ಲಿ ಹಾದುಹೋಗುತ್ತಾ, ಅವಳ ಮನೆಯ ಕಡೆಗೆ ತಿರುಗಿದ್ದನ್ನು ಕಂಡೆನು.
10 And there a woman comes to meet him, dressed like a prostitute, with cunning in her heart. ಇಗೋ ವೇಶ್ಯಾರೂಪವನ್ನು ಧರಿಸಿಕೊಂಡಿದ್ದ ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರುಗೊಂಡಳು.
11 She is loud and defiant; her feet will not stay at home. ಇವಳು ಕೂಗಾಟದವಳು, ಹಟಮಾರಿ, ಮನೆಯಲ್ಲಿ ನಿಲ್ಲತಕ್ಕವಳೇ ಅಲ್ಲ;
12 Now in the street, now in the squares, she lurks at every corner. ಒಂದು ವೇಳೆ ಬೀದಿಗಳಲ್ಲಿರುವಳು, ಮತ್ತೊಂದು ವೇಳೆ ಚೌಕಗಳಲ್ಲಿರುವಳು, ಅಂತು ಪ್ರತಿಯೊಂದು ಮೂಲೆಯಲ್ಲಿಯೂ ಹೊಂಚು ಹಾಕುವಳು.
13 She grabs him and kisses him, and with a brazen face she says to him: ಅವನನ್ನು ಹಿಡಿದು, ಮುದ್ದಾಡಿ ನಾಚಿಕೆಗೆಟ್ಟವಳಾಗಿ,
14 "I had peace offerings to bring; today I have paid my vows. “ಎಲೈ, ಈ ದಿನ ನನ್ನ ಹರಕೆಗಳನ್ನು ಸಲ್ಲಿಸಿದ್ದೇನೆ, ಸಮಾಧಾನ ಯಜ್ಞಶೇಷವು ನನ್ನಲ್ಲಿದೆ,
15 So I came out to meet you, to look for you eagerly, and I have found you. ಆದಕಾರಣ ನಿನ್ನನ್ನು ಎದುರುಗೊಳ್ಳಲು ಬಂದೆನು, ನಿನ್ನನ್ನು ಆತುರದಿಂದ ಹುಡುಕಿ ಕಂಡುಕೊಂಡೆನು.
16 I have spread my bed with coverings, with colored linens from Egypt. ನನ್ನ ಮಂಚದಲ್ಲಿ ಸುಪ್ಪತ್ತಿಯನ್ನೂ, ಐಗುಪ್ತದೇಶದ ನೂಲಿನ ವಿಚಿತ್ರ ವಸ್ತ್ರಗಳನ್ನೂ ಹಾಸಿದ್ದೇನೆ.
17 I have perfumed my bed with myrrh, aloes, and cinnamon. ಹಾಸಿಗೆಯ ಮೇಲೆ ರಕ್ತಬೋಳ, ಅಗುರು, ಲವಂಗ, ಚಕ್ಕೆ ಇವುಗಳ ಚೂರ್ಣಗಳಿಂದ ಸುವಾಸನೆಗೊಳಿಸಿದ್ದೇನೆ.
18 Come, let us drink deep of love until morning; let us lose ourselves in love. ಬಾ, ಬೆಳಗಿನ ತನಕ ಬೇಕಾದಷ್ಟು ರಮಿಸುವ, ಕಾಮವಿಲಾಸಗಳಿಂದ ಸಂತೋಷಿಸುವ.
19 For my husband is not at home; he has gone on a long journey. ಯಜಮಾನನು ಮನೆಯಲ್ಲಿಲ್ಲ, ದೂರ ಪ್ರಯಾಣದಲ್ಲಿದ್ದಾನೆ.
20 He took a bag of money with him and will not come home until the full moon." ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ, ಹುಣ್ಣಿಮೆಗೆ ಮನೆಗೆ ಬರುವನು” ಎಂದು ಹೇಳುವಳು.
21 With all her persuasive words she sways him; with her smooth lips she draws him in. ಅವಳು ಅವನನ್ನು ತನ್ನ ಸವಿಮಾತುಗಳಿಂದ ಮನವೊಲಿಸಿ, ಬಹಳವಾಗಿ ಪ್ರೇರೇಪಿಸಿ ಸಮ್ಮತಿಪಡಿಸುತ್ತಾಳೆ.
22 All at once he follows her, like an ox going to the slaughter, like a deer stepping into a snare, ಹೋರಿಯು ವಧ್ಯಸ್ಥಾನಕ್ಕೆ ಹೋಗುವ ಹಾಗೂ, ಬೇಡಿಬಿದ್ದಿರುವ ಮೂರ್ಖನು ದಂಡನೆಗೆ ನಡೆಯುವಂತೆಯೂ,
23 until an arrow pierces its liver; like a bird darting into a trap, he does not know it will cost him his life. ಪಕ್ಷಿಯು ಬಲೆಯ ಕಡೆಗೆ ಓಡುವಂತೆಯೂ, ಅವನು ತನ್ನ ಪ್ರಾಣಾಪಾಯವನ್ನು ತಿಳಿಯದೆ, ಬಾಣವು ತನ್ನ ಕಾಳಿಜವನ್ನು ತಿವಿಯುವ ಮೇರೆಗೂ, ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
24 Now then, my sons, listen to me, and pay attention to what I say. ಈಗ, ಮಕ್ಕಳೇ, ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾತುಗಳನ್ನು ಆಲಿಸಿರಿ.
25 Do not let your heart turn aside to her ways; do not wander into her paths. ನಿನ್ನ ಹೃದಯವು ಅವಳ ನಡತೆಯ ಕಡೆಗೆ ತಿರುಗದಿರಲಿ, ತಪ್ಪಿಹೋಗಿಯೂ ಅವಳ ಮಾರ್ಗದಲ್ಲಿ ನಡೆಯಬೇಡ.
26 For she has brought down many victims; her slain are a mighty multitude. ಅವಳಿಂದ ಗಾಯಪಟ್ಟು ಬಿದ್ದವರು ಬಹು ಜನರು, ಹತರಾದವರೋ ಲೆಕ್ಕವೇ ಇಲ್ಲ.
27 Her house is the road to the grave, going down to the chambers of death. ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದುಹೋಗುತ್ತದೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]