Skip to content
The Believer's Library

Indian Revised Version (IRV) Kannada - 2019

Proverbs 8 IRVKan

Show IRVKan only
Verse × ×
1 Does not Wisdom call out, and understanding raise her voice? ಜ್ಞಾನವೆಂಬಾಕೆಯು ಕರೆಯುತ್ತಾಳಲ್ಲವೇ? ವಿವೇಕವೆಂಬ ಆಕೆಯು ಧ್ವನಿಗೈಯುತ್ತಾಳಲ್ಲವೇ?
2 Atop the heights along the way, where the paths meet, she takes her stand. ಆಕೆಯು ರಾಜಮಾರ್ಗಗಳ ಮುಖ್ಯಸ್ಥಾನದಲ್ಲಿ, ದಾರಿಯ ಪಕ್ಕದಲ್ಲಿ, ನಡುಬೀದಿಯಲ್ಲಿ ನಿಂತುಕೊಳ್ಳುತ್ತಾಳೆ.
3 Beside the gates, at the entrance to the city, at the doorways she cries aloud: ಆಕೆ ಪಟ್ಟಣದ ಪ್ರವೇಶ ದ್ವಾರದಲ್ಲಿ, ಬಾಗಿಲುಗಳೊಳಗೆ ಜನಸೇರುವ ಸ್ಥಳದಲ್ಲಿ ಹೀಗೆ ಕೂಗುತ್ತಾಳೆ,
4 "To you, all people, I call out; my voice reaches all humanity. “ಜನರೇ, ನಿಮ್ಮನ್ನೇ ಕರೆಯುತ್ತೇನೆ, ಮಾನವರಿಗಾಗಿಯೇ ಧ್ವನಿಗೈಯುತ್ತೇನೆ.
5 You who are simple, learn prudence; you who are foolish, gain an understanding heart. ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.
6 Listen, for I speak of noble things, and everything I say is right. ಕೇಳಿರಿ, ನಾನು ಶ್ರೇಷ್ಠವಾದ ಸಂಗತಿಗಳನ್ನು ಹೇಳುವೆನು, ಯಥಾರ್ಥಕ್ಕಾಗಿಯೇ ತುಟಿಗಳನ್ನು ತೆರೆಯುವೆನು,
7 My mouth utters truth, for my lips detest wickedness. ನನ್ನ ಬಾಯಿ ಸತ್ಯವನ್ನೇ ಆಡುವುದು, ದುಷ್ಟತನವು ನನ್ನ ತುಟಿಗಳಿಗೆ ಅಸಹ್ಯವಾಗಿದೆ.
8 All the words of my mouth are righteous; none of them is twisted or crooked. ನನ್ನ ಮಾತುಗಳೆಲ್ಲಾ ನೀತಿಭರಿತವಾಗಿವೆ, ಅವುಗಳಲ್ಲಿ ಕಪಟವೂ, ವಕ್ರತೆಯೂ ಇಲ್ಲ.
9 To the one who understands they are all clear, and right to those who find knowledge. ಅವೆಲ್ಲಾ ಗ್ರಹಿಕೆಯುಳ್ಳವನಿಗೆ ನ್ಯಾಯವಾಗಿಯೂ, ತಿಳಿವಳಿಕೆಯನ್ನು ಪಡೆದವರಿಗೆ ಯಥಾರ್ಥವಾಗಿಯೂ ತೋರುವವು.
10 Take my instruction instead of silver, and knowledge rather than choice gold, ನನ್ನ ಬೋಧನೆಯನ್ನು ಬೆಳ್ಳಿಗಿಂತಲೂ ಮತ್ತು ಜ್ಞಾನೋಪದೇಶವನ್ನು ಅಪರಂಜಿಗಿಂತಲೂ ಉತ್ತಮವೆಂದು ಹೊಂದಿಕೊಳ್ಳಿರಿ.
11 for wisdom is better than jewels, and nothing you desire can compare with her. ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.
12 I, Wisdom, dwell with prudence, and I find knowledge and discretion. ಜ್ಞಾನವೆಂಬ ನನಗೆ ಜಾಣ್ಮೆಯೇ ನಿವಾಸ, ಯುಕ್ತಿಗಳ ತಿಳಿವಳಿಕೆಯನ್ನು ಹೊಂದಿದ್ದೇನೆ.
13 The fear of our Father is to hate evil. Pride and arrogance, the evil way, and perverse speech I hate. ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.
14 Counsel is mine, and sound wisdom; I am understanding; strength is mine. ಸದ್ಯೋಚನೆಯೂ, ಸುಜ್ಞಾನವೂ, ಸಾಮರ್ಥ್ಯವೂ ನನ್ನಲ್ಲಿವೆ, ವಿವೇಕವೂ ನಾನೇ.
15 By me kings reign, and rulers decree what is just; ನನ್ನ ಸಹಾಯದಿಂದ ರಾಜರು ಆಳುವರು, ಅಧಿಪತಿಗಳು ಸಹ ನ್ಯಾಯತೀರಿಸುವರು.
16 by me princes govern, and nobles—all who rule with justice. ನನ್ನ ಮೂಲಕ ಪ್ರಭುಗಳು, ನಾಯಕರು ಅಂತು ಭೂಪತಿಗಳೆಲ್ಲರೂ ದೊರೆತನ ಮಾಡುವರು.
17 I love those who love me, and those who search for me find me. ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
18 With me are riches and honor, enduring wealth and righteousness. ನನ್ನಲ್ಲಿ ಧನ, ಘನತೆ, ಶ್ರೇಷ್ಠಸಂಪತ್ತೂ, ನೀತಿಯೂ ಇರುತ್ತವೆ.
19 My fruit is better than gold, than the finest gold, and what I yield surpasses choice silver. ನನ್ನಿಂದಾಗುವ ಫಲವು ಬಂಗಾರಕ್ಕಿಂತಲೂ ಹೌದು ಅಪರಂಜಿಗಿಂತಲೂ ಉತ್ತಮ. ನನ್ನ ಮೂಲಕವಾದ ಆದಾಯವು ಚೊಕ್ಕ ಬೆಳ್ಳಿಗಿಂತಲೂ ಅಮೂಲ್ಯವಾಗಿದೆ.
20 I walk in the way of righteousness, along the paths of justice, ನಾನು ಹಿಡಿದಿರುವ ದಾರಿಯು ನೀತಿಯೇ, ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ.
21 giving wealth as an inheritance to those who love me, and filling their treasuries. ಹೀಗಿರಲು ನನ್ನನ್ನು ಪ್ರೀತಿಸುವವರಿಗೆ ಧನದ ಬಾಧ್ಯತೆಯನ್ನು ಅನುಗ್ರಹಿಸಿ, ಅವರ ಬೊಕ್ಕಸಗಳನ್ನು ತುಂಬಿಸುವೆನು.
22 Our Father brought me forth at the beginning of his way, before his works of old. ಯೆಹೋವನು ತನ್ನ ಸೃಷ್ಟಿಕ್ರಮದಲ್ಲಿ ಮೊದಲು ನನ್ನನ್ನು ನಿರ್ಮಿಸಿದನು; ಆತನ ಪುರಾತನಕಾರ್ಯಗಳಲ್ಲಿ ನಾನೇ ಪ್ರಥಮ.
23 From ages past I was established, from the beginning, before the earth began. ಪ್ರಾರಂಭದಲ್ಲಿ, ಭೂಮಿಯು ಹುಟ್ಟುವುದಕ್ಕಿಂತ ಮುಂಚೆ, ಅನಾದಿಕಾಲದಲ್ಲಿ ಸ್ಥಾಪಿಸಲ್ಪಟ್ಟೆನು.
24 When there were no deep waters I was brought forth, when there were no springs overflowing with water. ಜಲನಿಧಿಗಳಾಗಲಿ, ನೀರು ತುಂಬಿದ ಬುಗ್ಗೆಗಳಾಗಲಿ ಇಲ್ಲದಿರುವಾಗ ನಾನು ಹುಟ್ಟಿದೆನು.
25 Before the mountains were settled, before the hills, I was brought forth, ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವುದಕ್ಕೆ ಮುಂಚೆ ಆತನು ಭೂಲೋಕವನ್ನಾಗಲಿ, ಬಯಲನ್ನಾಗಲಿ,
26 while he had not yet made the earth and its fields, or the first dust of the world. ಭೂಮಿಯ ಮೊದಲನೆಯ ಅಣುರೇಣನ್ನಾಗಲಿ ನಿರ್ಮಿಸದೆ ಇರುವಾಗ ನಾನು ಹುಟ್ಟಿದೆನು.
27 When he set the heavens in place, I was there; when he drew a circle over the face of the deep, ಆತನು ಸಾಗರದ ಮೇಲೆ ಚಕ್ರಾಕಾರವಾದ ಗೆರೆಯನ್ನು ಎಳೆದು, ಆಕಾಶಮಂಡಲವನ್ನು ಸ್ಥಾಪಿಸುವಾಗ ಅಲ್ಲಿದ್ದೆನು.
28 when he set the skies in place above, when he established the springs of the deep, ಆತನು ಗಗನವನ್ನು ಮೇಲೆ ಸ್ಥಿರಪಡಿಸಿ, ಸಾಗರದ ಬುಗ್ಗೆಗಳನ್ನು ನೆಲೆಗೊಳಿಸಿದನು.
29 when he set for the sea its boundary so the waters would not cross their limits, when he marked out the foundations of the earth, ಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಆತನು ಸಮುದ್ರಕ್ಕೆ ಮೇರೆಯನ್ನು ನೇಮಿಸಿ, ಭೂಮಿಯ ಅಸ್ತಿವಾರಗಳನ್ನು ಗೊತ್ತುಮಾಡುವಾಗ,
30 then I was beside him as a master craftsman, and I was his daily delight, rejoicing before him always, ನಾನು ಆತನ ಹತ್ತಿರ ಶಿಲ್ಪಿಯಾಗಿದ್ದುಕೊಂಡು ಪ್ರತಿದಿನವೂ ಆನಂದಿಸುತ್ತಾ, ಯಾವಾಗಲೂ ಆತನ ಮುಂದೆ ವಿನೋದಿಸುತ್ತಾ,
31 rejoicing in his whole world, and delighting in the human family. ಆತನ ಭೂಲೋಕದಲ್ಲಿ ಉಲ್ಲಾಸಿಸುತ್ತಾ, ಮಾನವಸಂತಾನದಲ್ಲಿ ಹರ್ಷಿಸುತ್ತಾ ಇದ್ದೆನು.
32 And now, my children, listen to me: blessed are those who keep my ways. ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ.
33 Listen to instruction and be wise; do not ignore it. ನನ್ನ ಉಪದೇಶವನ್ನು ಕೇಳಿರಿ, ಅದನ್ನು ಬಿಡದೆ ಜ್ಞಾನವಂತರಾಗಿರಿ.
34 Blessed is the one who listens to me, watching daily at my gates, waiting beside my doorway. ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಿಲಿನ ನಿಲವುಗಳ ಹತ್ತಿರವಿದ್ದು, ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು.
35 For whoever finds me finds life and receives favor from our Father. ಯಾವನು ನನ್ನನ್ನು ಹೊಂದುತ್ತಾನೋ ಅವನು ಜೀವವನ್ನು ಹೊಂದುತ್ತಾನೆ; ಅವನು ಯೆಹೋವನ ದಯೆಗೆ ಗುರಿಯಾಗುವನು.
36 But whoever misses me harms his own soul; all who hate me love death." ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]