Skip to content
The Believer's Library

Indian Revised Version (IRV) Kannada - 2019

Proverbs 9 IRVKan

Show IRVKan only
Verse × ×
1 Wisdom has built her house; she has hewn out her seven pillars. ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು, ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ.
2 She has slaughtered her animals; she has mixed her wine; she has also set her table. ಆಕೆ ಪಶುಗಳನ್ನು ಕೊಯಿಸಿ ಪಾನದ್ರವ್ಯಗಳೊಡನೆ ದ್ರಾಕ್ಷಾರಸವನ್ನು ಬೆರಸಿ, ಔತಣವನ್ನು ಸಿದ್ಧಪಡಿಸಿದ್ದಾಳೆ.
3 She has sent out her young women to call from the highest places of the town: ಆಕೆಯು ತನ್ನ ದಾಸಿಯರನ್ನು ಕಳುಹಿಸಿ, ಪಟ್ಟಣದ ರಾಜಮಾರ್ಗಗಳ ಮುಖ್ಯಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ.
4 "Whoever is simple, let him come in here!" To the one who lacks sense she says, ಆಕೆಯು ಬುದ್ಧಿಹೀನರಿಗೆ, “ಮೂಢನಾಗಿರುವವನು ಈ ಕಡೆಗೆ ತಿರುಗಲಿ,
5 "Come, eat my bread and drink the wine I have mixed. ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರೆಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.
6 Leave your simple ways, and live; walk in the way of insight." ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.
7 Whoever corrects a mocker brings abuse on himself, and whoever rebukes a wicked man gets hurt. ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು.
8 Do not rebuke a mocker, or he will hate you; rebuke a wise man, and he will love you. ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.
9 Instruct a wise man and he will grow wiser; teach a righteous man and he will learn even more. ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು.
10 The fear of our Father is the beginning of wisdom, and the knowledge of the Holy One is insight. ಯೆಹೋವನ ಭಯವೇ ಜ್ಞಾನಕ್ಕೆ ಮೂಲವು, ಪರಿಶುದ್ಧ ದೇವರ ತಿಳಿವಳಿಕೆಯೇ ವಿವೇಕವು.
11 For by me your days will be multiplied, and years will be added to your life. ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಷ್ಯದ ವರ್ಷಗಳು ವೃದ್ಧಿಯಾಗುವವು.
12 If you are wise, you are wise for yourself; if you scoff, you alone will bear it. ನೀನು ಜ್ಞಾನವಂತನಾದರೆ ನಿನ್ನ ಜ್ಞಾನವು ನಿನಗೇ ಲಾಭಕರ, ಧರ್ಮನಿಂದಕನಾದರೆ ನೀನೇ ಅದರ ಫಲವನ್ನು ಅನುಭವಿಸುವಿ.
13 The woman Folly is loud; she is naive and knows nothing. ಅಜ್ಞಾನವೆಂಬವಳಾದರೋ ಕೂಗಾಟದವಳು, ಮೂಢಳು, ಏನೂ ತಿಳಿಯದವಳು.
14 She sits at the door of her house, on a seat at the highest places of the town, ಅವಳು ತನ್ನ ಮನೆಯ ಬಾಗಿಲಿನಲ್ಲಿ, ಪಟ್ಟಣದ ರಾಜಮಾರ್ಗಗಳಲ್ಲಿ ಪೀಠದ ಮೇಲೆ ಕುಳಿತುಕೊಂಡವಳಾಗಿ,
15 calling to those who pass by, who are going straight on their way: ತಮ್ಮ ಮಾರ್ಗವನ್ನು ಹಿಡಿದು, ಹೋಗಿ ಬರುವವರನ್ನು ನೋಡಿ,
16 "Whoever is simple, let him come in here!" And to the one who lacks sense she says, “ಮೂಢನಾಗಿರುವವನು ಈ ಕಡೆಗೆ ತಿರುಗಲಿ” ಎಂದು ಕೂಗಿ,
17 "Stolen water is sweet, and bread eaten in secret is pleasant." “ಕದ್ದ ನೀರು ಸಿಹಿಯಾಗಿದೆ, ಗುಟ್ಟಾಗಿ ತಿನ್ನುವ ತಿಂಡಿಯು ರುಚಿಯಾಗಿದೆ” ಎಂದು ಬುದ್ಧಿಹೀನನಿಗೆ ಹೇಳುತ್ತಾಳೆ.
18 But he does not know that the dead are there, that her guests are in the depths of the grave. ಆ ಮನೆಯು ಪ್ರೇತ ನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]