Skip to content
The Believer's Library

Indian Revised Version (IRV) Kannada - 2019

Psalms 11 IRVKan

Side by side with the Father's Heart Bible™

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು.

ಯೆಹೋವನ ಶರಣರಿಗೆ ದುರ್ಗತಿಯಿಲ್ಲ

1ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ?

2ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ,ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ.

3ಆಧಾರಗಳೇ ಕೆಡವಲ್ಪಟ್ಟ ಮೇಲೆ ನೀತಿವಂತನ ಗತಿ ಏನಾದೀತು?

4ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ;ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ.ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ;ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.

5ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ;ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ.

6ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ.ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.

7ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ.ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]