Skip to content
The Believer's Library

Indian Revised Version (IRV) Kannada - 2019

Psalms 12 IRVKan

Side by side with the Father's Heart Bible™

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ.

ದುಷ್ಟಾಧಿಕಾರದಲ್ಲಿ ಭಕ್ತನು ಪ್ರಾರ್ಥಿಸುವುದು

1ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ.ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ.

2ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ,ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.

3ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.

4ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ;ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ.

5ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ;ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು.ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು.ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.

6ಯೆಹೋವನ ಮಾತುಗಳು ಯಥಾರ್ಥವಾದವುಗಳೇ;ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.

7ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ,ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ,

8ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ,ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]