Skip to content
The Believer's Library

Indian Revised Version (IRV) Kannada - 2019

Psalms 128 IRVKan

Side by side with the Father's Heart Bible™

ಯಾತ್ರಾಗೀತೆ.

ಭಕ್ತನ ಭಾಗ್ಯ

1ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ,ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.

2ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ,ನೀನು ಧನ್ಯನು, ನಿನಗೆ ಶುಭವಿರುವುದು.

3ಅಂತಃಪುರದಲ್ಲಿರುವ ನಿನ್ನ ಹೆಂಡತಿಯು,ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು;ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು,ಎಣ್ಣೇಮರದ ಸಸಿಗಳ ಹಾಗೆ ಇರುವರು.

4ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು,ಈ ರೀತಿಯಾಗಿ ಆಶೀರ್ವಾದ ಹೊಂದುವನು.

5ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ;ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು.

6ಮಕ್ಕಳ ಮಕ್ಕಳನ್ನು ಕಾಣುವವನಾಗು.ಇಸ್ರಾಯೇಲರಿಗೆ ಶುಭವಾಗಲಿ.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]