Skip to content
The Believer's Library

Indian Revised Version (IRV) Kannada - 2019

Psalms 13 IRVKan

Side by side with the Father's Heart Bible™

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ರಚಿಸಿದ ಕೀರ್ತನೆ.

ಶತ್ರುಪೀಡಿತನ ಪ್ರಾರ್ಥನೆ

1ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ?ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ?

2ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು,ಆಲೋಚಿಸಿಕೊಳ್ಳುತ್ತಾ ಇರಬೇಕು?ಇನ್ನೆಲ್ಲಿಯ ತನಕ ವಿರೋಧಿಯು ನನಗೆ ದೊರೆಯಾಗಿರಬೇಕು?

3ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು;ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು.

4ನನ್ನ ಶತ್ರುವು, “ನಾನು ಅವನನ್ನು ಜಯಿಸಿದೆನು” ಎಂದು ಹೇಳಿಕೊಳ್ಳಬಾರದು;ವೈರಿಗಳು, “ನನ್ನ ಎದುರಾಳಿಯು ಜಾರಿಬಿದ್ದನು” ಎಂದು ಹಿಗ್ಗಬಾರದು.

5ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ;ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು.

6ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]