Skip to content
The Believer's Library

Indian Revised Version (IRV) Kannada - 2019

Psalms 130 IRVKan

Side by side with the Father's Heart Bible™

ಯಾತ್ರಾಗೀತೆ.

ಪಾಪಪರಿಹಾರಕ್ಕಾಗಿ ಪ್ರಾರ್ಥನೆ

1ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.

2ಕರ್ತನೇ, ನನ್ನ ಮೊರೆಯನ್ನು ಕೇಳು;ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ.

3ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?

4ನೀನು ಪಾಪವನ್ನು ಕ್ಷಮಿಸುವವನಾದುದರಿಂದ,ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.

5ನಾನು ಯೆಹೋವನನ್ನು ಎದುರುನೋಡುತ್ತೇನೆ;ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ;ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ.

6ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ;ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ,ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.

7ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು;ಯೆಹೋವನು ಕೃಪಾಸಂಪನ್ನನು;ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು.

8ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]