Skip to content
The Believer's Library

Indian Revised Version (IRV) Kannada - 2019

Psalms 135 IRVKan

Side by side with the Father's Heart Bible™

ಸೃಷ್ಟಿಪಾಲಕನಾಗಿರುವ ಏಕದೇವರಿಗೆ ಸ್ತೋತ್ರ

1ಯೆಹೋವನಿಗೆ ಸ್ತೋತ್ರ!ಯೆಹೋವನ ನಾಮವನ್ನು ಸ್ತುತಿಸಿರಿ.ಯೆಹೋವನ ಸೇವಕರೇ,

2ಯೆಹೋವನ ಮಂದಿರದಲ್ಲಿಯೂ,ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ,ಆತನನ್ನು ಕೀರ್ತಿಸಿರಿ.

3ಯೆಹೋವನಿಗೆ ಸ್ತೋತ್ರ!ಯೆಹೋವನು ಒಳ್ಳೆಯವನು.ಆತನ ನಾಮವನ್ನು ಕೊಂಡಾಡಿರಿ;ಆತನು ಕೃಪಾಪೂರ್ಣನು.

4ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ,ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ.

5ಯೆಹೋವನು ದೊಡ್ಡವನೆಂದೂ,ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ.

6ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ,ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂತನಗೆ ಬೇಕಾದದ್ದನ್ನು ಮಾಡುತ್ತಾನೆ.

7ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ;ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ;ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.

8ಆತನು ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ,ಚೊಚ್ಚಲುಗಳನ್ನೆಲ್ಲಾ ಸಂಹರಿಸಿದನು.

9ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ,ಅವನ ಸೇವಕರಿಗೂ ವಿರುದ್ಧವಾಗಿ ಅದ್ಭುತಗಳನ್ನು,ಮಹತ್ಕಾರ್ಯಗಳನ್ನು ನಡೆಸಿದನು.

10ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು;ಬಲಿಷ್ಠ ರಾಜರನ್ನು ಕೊಂದುಹಾಕಿದನು.

11ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ,ಬಾಷಾನಿನ ಅರಸನಾದ ಓಗನೂ ಇದ್ದರು.ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು.

12ಅವರ ದೇಶವನ್ನು ಇಸ್ರಾಯೇಲರಿಗೆ ಕೊಟ್ಟನು;ಆತನ ಪ್ರಜೆಗೆ ಅದು ಸ್ವಾಸ್ತ್ಯವಾಯಿತು.

13ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು;ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲು ಯೋಗ್ಯನಾಗಿರುತ್ತೀ.

14ನಿಜವಾಗಿ ಯೆಹೋವನು ತನ್ನ ಪ್ರಜೆಯ ನ್ಯಾಯವನ್ನು ಸ್ಥಾಪಿಸುವನು,ತನ್ನ ಸೇವಕರನ್ನು ಕನಿಕರಿಸುವನು.

15ಅನ್ಯಜನಗಳ ವಿಗ್ರಹಗಳು ಬೆಳ್ಳಿ ಮತ್ತು ಬಂಗಾರದವುಗಳೇ;ಅವು ಮನುಷ್ಯರ ಕೈಕೆಲಸವಷ್ಟೇ.

16ಅವುಗಳಿಗೆ ಬಾಯಿದ್ದರೂ ಮಾತನಾಡುವುದಿಲ್ಲ,ಕಣ್ಣಿದ್ದರೂ ನೋಡುವುದಿಲ್ಲ,

17ಕಿವಿಯಿದ್ದರೂ ಕೇಳುವುದಿಲ್ಲ,ಇದಲ್ಲದೆ ಅವುಗಳ ಬಾಯಲ್ಲಿ ಶ್ವಾಸವೇ ಇಲ್ಲ.

18ಅವುಗಳನ್ನು ಮಾಡುವವರು,ಅವುಗಳಲ್ಲಿ ಭರವಸವಿಡುವವರು ಅವುಗಳಂತೆಯೇ.

19ಇಸ್ರಾಯೇಲನ ಮನೆತನದವರೇ,ಯೆಹೋವನನ್ನು ಕೊಂಡಾಡಿರಿ;ಆರೋನನ ಮನೆತನದವರೇ,ಯೆಹೋವನನ್ನು ಕೊಂಡಾಡಿರಿ.

20ಲೇವಿಯ ಮನೆತನದವರೇ,ಯೆಹೋವನನ್ನು ಕೊಂಡಾಡಿರಿ;ಯೆಹೋವನ ಭಕ್ತರೇ,ಯೆಹೋವನನ್ನು ಕೊಂಡಾಡಿರಿ.

21ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ದೇವರಿಗೆ,ಕೀರ್ತಿ ಉಂಟಾಗಲಿ,ಯೆಹೋವನಿಗೆ ಸ್ತೋತ್ರ!

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]