Skip to content
The Believer's Library

Indian Revised Version (IRV) Kannada - 2019

Psalms 138 IRVKan

Side by side with the Father's Heart Bible™

ದಾವೀದನ ಕೀರ್ತನೆ.

ರಕ್ಷಣಾ ಕರ್ತನ ಸ್ತುತಿ

1ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು;ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು.

2ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ;ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ.ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ.

3ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ;ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.

4ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿನಿನ್ನನ್ನು ಸ್ತುತಿಸುವರು.

5ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು;ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ.

6ಯೆಹೋವನು ಮಹೋನ್ನತನು;ಆದರೂ ದೀನರನ್ನು ಲಕ್ಷಿಸುತ್ತಾನೆ;ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.

7ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ,ನನ್ನನ್ನು ಚೈತನ್ಯಗೊಳ್ಳಿಸುವಿ,ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ,ನಿನ್ನ ಬಲಗೈ ನನ್ನನ್ನು ರಕ್ಷಿಸುವುದು.

8ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು.ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು,ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]