Skip to content
The Believer's Library

Indian Revised Version (IRV) Kannada - 2019

Psalms 140 IRVKan

Side by side with the Father's Heart Bible™

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ.

ಶತ್ರುಪೀಡಿತನ ಪ್ರಾರ್ಥನೆ

1ಯೆಹೋವನೇ, ಕೆಡುಕರಿಂದ ನನ್ನನ್ನು ಬಿಡಿಸು,ಬಲಾತ್ಕಾರಿಗಳಿಂದ ತಪ್ಪಿಸಿ ಕಾಪಾಡು.

2ಅವರು ಕೇಡು ಕಲ್ಪಿಸುತ್ತಾರೆ,ಯಾವಾಗಲೂ ಜಗಳವೆಬ್ಬಿಸುತ್ತಾರೆ.

3ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ,ಅವರ ತುಟಿಗಳ ಹಿಂದೆ ಹಾವಿನ ವಿಷವಿದೆ. ಸೆಲಾ

4ಯೆಹೋವನೇ, ದುಷ್ಟರ ಕೈಗೆ ಸಿಕ್ಕದಂತೆ ನನ್ನನ್ನು ಕಾಪಾಡು,ಬಲಾತ್ಕಾರಿಗಳಿಂದ ತಪ್ಪಿಸಿ ರಕ್ಷಿಸು.ಅವರು ನನ್ನ ಕಾಲುಗಳನ್ನು ಎಡವಿಸಿಬಿಡಬೇಕೆಂದು ಯೋಚಿಸಿದ್ದಾರೆ.

5ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿಉರುಲನ್ನೂ, ಪಾಶಗಳನ್ನೂ ಒಡ್ಡಿದ್ದಾರೆ,ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ,ನನಗಾಗಿ ಬಲೆಬೀಸಿಟ್ಟಿದ್ದಾರೆ. ಸೆಲಾ

6ನಾನು ಯೆಹೋವನಿಗೆ, “ನೀನೇ ನನ್ನ ದೇವರು,ಯೆಹೋವನೇ, ನನ್ನ ವಿಜ್ಞಾಪನೆಗೆ ಕಿವಿಗೊಡು,

7ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ,ಯುದ್ಧ ಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ,

8ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ,ಅವರ ಆಶೆಗಳನ್ನು ನೆರವೇರಿಸಬೇಡ,ಅವರ ಕುಯುಕ್ತಿಯನ್ನು ಸಾಗಗೊಡಿಸಬೇಡ” ಎಂದು ಹೇಳುತ್ತೇನೆ. ಸೆಲಾ

9ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡುಅವರ ತಲೆಯ ಮೇಲೆಯೇ ಬರಲಿ,

10ಅವರ ಮೇಲೆ ಕೆಂಡಗಳು ಸುರಿಯಲಿ,ಅವರು ಅಗ್ನಿಕುಂಡದೊಳಕ್ಕೂ,ಆಳವಾದ ತಗ್ಗಿನೊಳಕ್ಕೂ ದೊಬ್ಬಲ್ಪಟ್ಟು ತಿರುಗಿ ಏಳದಿರಲಿ.

11ಚಾಡಿಗಾರನು ದೇಶದಲ್ಲಿ ಉಳಿಯನು,ಕೇಡು ಬಲಾತ್ಕಾರಿಯನ್ನು ಹಿಂದಟ್ಟಿ ಕೆಡವಿಬಿಡುವುದು.

12ಯೆಹೋವನು ದೀನರ ವ್ಯಾಜ್ಯವನ್ನು ನಡೆಸುವನೆಂತಲೂ,ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.

13ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು,ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ಬದುಕುವರು.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]