Skip to content
The Believer's Library

Indian Revised Version (IRV) Kannada - 2019

Psalms 143 IRVKan

Side by side with the Father's Heart Bible™

ದಾವೀದನ ಕೀರ್ತನೆ.

ಶಿಕ್ಷಾರಕ್ಷಣೆಗಳಿಗಾಗಿ ಪ್ರಾರ್ಥನೆ

1ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು;ನನ್ನ ಬಿನ್ನಹಕ್ಕೆ ಕಿವಿಗೊಡು;ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು.

2ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ;ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.

3ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ;ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ.ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ;ಬಹು ಕಾಲದಿಂದ ಸತ್ತವರಂತಿದ್ದೇನೆ.

4ನನ್ನ ಆತ್ಮವು ಕುಂದಿಹೋಗಿದೆ;ನನ್ನ ಮನಸ್ಸು ಬೆರಗಾಗಿದೆ.

5ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ;ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ;ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ;

6ಕೈಚಾಚಿ ಬೇಡುತ್ತೇನೆ;ಒಣನೆಲವು ನೀರಿಗಾಗಿ ಹೇಗೋ,ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ

7ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು;ನನ್ನ ಆತ್ಮವು ಕುಂದಿಹೋಗಿದೆ.ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.

8ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ;ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ.ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು;ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.

9ಯೆಹೋವನೇ, ನಿನ್ನನ್ನೇ ಮೊರೆಹೊಕ್ಕಿದ್ದೇನೆ;ಶತ್ರುಗಳಿಂದ ನನ್ನನ್ನು ಬಿಡಿಸು.

10ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು,ನನ್ನ ದೇವರು ನೀನಲ್ಲವೋ?ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.

11ಯೆಹೋವನೇ, ನಿನ್ನ ಹೆಸರಿನ ನಿಮಿತ್ತ ನನ್ನನ್ನು ಉಜ್ಜೀವಿಸಮಾಡು;ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು.

12ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು.ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು;ನಾನು ನಿನ್ನ ಸೇವಕನಲ್ಲವೇ.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]