Skip to content
The Believer's Library

Indian Revised Version (IRV) Kannada - 2019

Psalms 149 IRVKan

Side by side with the Father's Heart Bible™

ಜಯಗೀತೆ

1ಯೆಹೋವನಿಗೆ ಸ್ತೋತ್ರ!ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ;ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ.

2ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ;ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.

3ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ;ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.

4ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು;ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.

5ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ;ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ.

6ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ,ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.

7ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು;ಅನ್ಯಜನಗಳನ್ನು ದಂಡಿಸುವರು;

8ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು;ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು.

9ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು;ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು.ಯೆಹೋವನಿಗೆ ಸ್ತೋತ್ರ.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]